ಸರ್ಕಾರಿ ಶಾಲೆಗಳ ಅಸಲಿ ಚಿತ್ರಣ ಬಿಚ್ಚಿಡಲು ಅಭಿಜೀತ್ ದೀಪ್ಕೆ ಕರೆ: ಈಗ ‘ಸ್ಕೂಲ್ ಠೀಕ್ ಕರೋ’ ಹ್ಯಾಷ್‌ಟ್ಯಾಗ್ ಸದ್ದು!

Date:

ದೇಶದ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಕೊರತೆ ಮತ್ತು ಶೋಚನೀಯ ಸ್ಥಿತಿಯನ್ನು ಸಾರ್ವಜನಿಕವಾಗಿ ಬೆಳಕಿಗೆ ತರಲು ಸಾಮಾಜಿಕ ಜಾಲತಾಣಗಳಲ್ಲಿ #SchoolThikKaro (ಸ್ಕೂಲ್ ಠೀಕ್ ಕರೋ- ಶಾಲೆಗಳನ್ನು ಸರಿಪಡಿಸಿ) ಎಂಬ ವಿನೂತನ ಅಭಿಯಾನಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ, ಸಾಮಾಜಿಕ ಕಾರ್ಯಕರ್ತ ಅಭಿಜಿತ್ ದೀಪ್ಕೆ ಕರೆ ನೀಡಿದ್ದಾರೆ.

- Advertisement -

ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ಸಾರ್ವಜನಿಕರ ಗಮನ ಸೆಳೆಯುವ ಉದ್ದೇಶದಿಂದ ಆರಂಭವಾಗಿರುವ ಈ ಡಿಜಿಟಲ್ ಚಳವಳಿ, ಈಗ ಜಾಲತಾಣಗಳಲ್ಲಿ ವ್ಯಾಪಕ ಬೆಂಬಲ ಪಡೆದುಕೊಳ್ಳುತ್ತಿದೆ. ಮಾತು ಬಾರದ ವಿದ್ಯಾರ್ಥಿಗಳೂ ವಿಡಿಯೋ ಮೂಲಕ ತಮ್ಮ ಶಾಲೆ ಎಷ್ಟು ಶೋಚನೀಯ ಸ್ಥಿತಿಯಲ್ಲಿದೆ ಎಂಬುದನ್ನು ತೋರಿಸಿದ್ದಾರೆ. ಈ ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿ ಬದಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನೂ ಓದಿ: ಪೊಲೀಸರೆದುರೇ ‘ಕಾಕ್ರೋಚ್’ಗಳನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು: ಅಭಿಜೀತ್ ದೀಪ್ಕೆ ಆರೋಪ

ಅಭಿಜೀತ್ ದೀಪ್ಕೆ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಸಾರ್ವಜನಿಕರು, ಯುವಕರು ಮತ್ತು ಪೋಷಕರಲ್ಲಿ ಮನವಿ ಮಾಡಿದ್ದು, “ನಿಮ್ಮ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ. ಅಲ್ಲಿನ ಕಟ್ಟಡಗಳ ಸ್ಥಿತಿ, ಶೌಚಾಲಯ, ಕುಡಿಯುವ ನೀರು, ತರಗತಿಗಳ ಕೊಠಡಿ ಹಾಗೂ ವಿದ್ಯಾರ್ಥಿಗಳಿಗೆ ಇರುವ ಮೂಲಸೌಕರ್ಯಗಳ ಕುರಿತು ವಿಡಿಯೋ ಅಥವಾ ಫೋಟೋಗಳನ್ನು ಸೆರೆಹಿಡಿಯಿರಿ” ಎಂದು ಕೋರಿದ್ದರು.

ಹೀಗೆ ಸೆರೆಹಿಡಿದ ವೀಡಿಯೊ ಹಾಗೂ ಫೋಟೋಗಳನ್ನು#SchoolThikKaro ಹ್ಯಾಶ್‌ಟ್ಯಾಗ್ ಬಳಸಿ ಎಕ್ಸ್ (ಟ್ವಿಟರ್), ಇನ್‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್ ಸೇರಿದಂತೆ ವಿವಿಧ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅವರು ಸೂಚಿಸಿದ್ದರು. ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವುದು, ಶಿಥಿಲಗೊಂಡ ಕಟ್ಟಡಗಳ ಸರಿಪಡಿ ಸುವಿಕೆ ಮತ್ತು ಶೈಕ್ಷಣಿಕ ವಾತಾವರಣವನ್ನು ಸುಧಾರಿಸಲು ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಇಲಾಖೆಯ ಗಮನ ಸೆಳೆಯುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ.

ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಹಲವು ಯುವಕರು ಮತ್ತು ಸಾರ್ವಜನಿಕರು ಈಗಾಗಲೇ ತಮ್ಮ ವ್ಯಾಪ್ತಿಯ ಶೋಚನೀಯ ಸ್ಥಿತಿಯಲ್ಲಿರುವ ಶಾಲೆಗಳ ವಿಡಿಯೋಗಳನ್ನು ಚಿತ್ರೀಕರಿಸಿ ಶೇರ್ ಮಾಡಲು ಪ್ರಾರಂಭಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಾಗರಿಕರು ನೇರವಾಗಿ ಭಾಗವಹಿಸುವ ಈ ಮಾದರಿ ಡಿಜಿಟಲ್ ಹೋರಾಟಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಅಭಿಯಾನವು ಕೇವಲ ಒಂದು ಹ್ಯಾಷ್‌ಟ್ಯಾಗ್ ಆಗಿ ಉಳಿಯದೆ, ಸಾರ್ವಜನಿಕರ ನೇರ ಭಾಗವಹಿಸುವಿಕೆಯೊಂದಿಗೆ ಬೃಹತ್ ಡಿಜಿಟಲ್ ಚಳವಳಿಯಾಗಿ ಮಾರ್ಪಟ್ಟಿದೆ.

ಶಿಥಿಲಗೊಂಡ ಗೋಡೆಗಳು ಮತ್ತು ಸೋರುವ ಛಾವಣಿ, ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಅಭಾವ, ಬೆಂಚ್, ಡೆಸ್ಕ್ ಮತ್ತು ಕಪ್ಪುಹಲಗೆಗಳ ಕೊರತೆ ಇವುಗಳ ವಿಡಿಯೋ ಹಾಗೂ ಫೋಟೋಗಳನ್ನು ಸೆರೆಹಿಡಿದು ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ರಜೆಗಳೇ ಸ್ವತಃ ವರದಿಗಾರರಾಗಿ (Citizen Journalism) ಕಾರ್ಯನಿರ್ವಹಿಸುತ್ತಿರುವುದು ಆಡಳಿತ ಯಂತ್ರಕ್ಕೆ ದೊಡ್ಡ ಮಟ್ಟದ ಸವಾಲು ಮತ್ತು ಎಚ್ಚರಿಕೆಯ ಸಂದೇಶ ನೀಡಿದೆ.

ಪ್ರತಿಯೊಂದು ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕೋಟ್ಯಂತರ ರೂಪಾಯಿ ಮೀಸಲಿಟ್ಟರೂ, ಶಾಲೆಗಳ ಸ್ಥಿತಿ ಬದಲಾಗುತ್ತಿಲ್ಲ ಏಕೆ? ಎಂಬ ತೀಕ್ಷ್ಣ ಪ್ರಶ್ನೆಯನ್ನು ಸಾರ್ವಜನಿಕರು ಈ ಅಭಿಯಾನದ ಮೂಲಕ ಎತ್ತುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...