ಶಾಲೆಯಲ್ಲಿ ದೌರ್ಜನ್ಯ | ಎಣ್ಣೆ ಹಚ್ಚಿಲ್ಲವೆಂದು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ

Date:

ಕೂದಲಿಗೆ ಎಣ್ಣೆ ಹೆಚ್ಚಿಲ್ಲವೆಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಕೂದಲನ್ನು ಕತ್ತರಿಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕೃತ್ಯ ಎಸಗಿದ ಶಿಕ್ಷಕನನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.

- Advertisement -

ಗುಜರಾತ್‌ನ ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಕೂದಲನ್ನು ಶಿಕ್ಷಕ ಬ್ಲೇಡ್‌ನಿಂದ ಕತ್ತರಿಸಿ, ದೌರ್ಜನ್ಯ ಎಸಗಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದು, ಶಿಕ್ಷಕನನ್ನು ವಜಾಗೊಳಿಸಿ ಶಾಲೆಯ ನಿರ್ದೇಶಕಿ ಶಶಿಬೆನ್ ದಾಸ್ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಶಾಲೆಯಲ್ಲಿ ಶಿಕ್ಷೆಯ ರೀತಿ ಹೀನವಾಗಿದೆ. ಒಂದು ಪುಸ್ತಕ ಮರೆತು ಹೋದರೂ, ಮಕ್ಕಳಿಗೆ ದಂಡ ಹಾಕಿ, ಶಿಕ್ಷೆ ವಿಧಿಸಲಾಗುತ್ತಿದೆ. ಮಕ್ಕಳು ಶಾಲೆಗೆ ಹೋಗುವುದಕ್ಕೂ ಹೆದರುತ್ತಿದ್ದಾರೆ ಎಂದು ವಿದ್ಯಾರ್ಥಿನಿಯ ತಾಯಿ ಅಂಜಲಿಬೆನ್‌ ಗಂಧಾ ಹೇಳಿದ್ದಾರೆ.

“ನಮ್ಮ ಶಾಲೆಯ ಮಕ್ಕಳು ಉದ್ದವಾದ ಕೂದಲು ಬೆಳೆಸಲು ಅವಕಾಶ ನೀಡುವುದಿಲ್ಲ. ಕೂದಲು ಉದ್ದವಾಗಿ ಬೆಳೆಯದಂತೆ ನೋಡಿಕೊಳ್ಳಲು ಮಕ್ಕಳ ಪೋಷಕರಿಗೆ ಸೂಚಿಸುತ್ತೇವೆ. ಆದರೆ, ದೈಹಿಕ ಶಿಕ್ಷಕರೇ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಆದ್ದರಿಂದ, ನಾವು ಅವರನ್ನು ವಜಾಗೊಳಿಸಿದ್ದೇವೆ” ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸೌಜನ್ಯ ಕೊಲೆಯ ಪ್ರಮುಖ ಸಾಕ್ಷಿಯಾಗುವರೇ ಚಿನ್ನಯ್ಯ? ವಿಡಿಯೋದಲ್ಲಿದೆ ಅಚ್ಚರಿಯ ಹೇಳಿಕೆ

“ಶಾಲೆಗಳಲ್ಲಿ ಮಕ್ಕಳ ಮೇಲಿನ ಇಂತಹ ದೌರ್ಜನ್ಯಗಳು ನಡೆಯದಂತೆ, ತಡೆಯಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ. ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ವಿಪುಲ್ ಮೆಹ್ತಾ ಹೇಳಿದ್ದಾರೆ.

ಶಾಲೆಗಳಲ್ಲಿ ಶಿಸ್ತಿನ ಹೆಸರಿನಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಗಂಭೀರ ಸಮಸ್ಯೆ. ಶಿಸ್ತಿನ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಅವಮಾನಿಸುವುದು ಮತ್ತು ಮಾನಸಿಕ ಕಿರುಕುಳ ನೀಡುವುದು ನಡೆಯುತ್ತಲೇ ಇದೆ. ಇಂತಹ ಕ್ರಮಗಳು ವಿದ್ಯಾರ್ಥಿಗಳ ಆತ್ಮಗೌರವಕ್ಕೆ ಧಕ್ಕೆ ತರುವುದಲ್ಲದೆ, ಅವರ ಮಾನಸಿಕ ಆರೋಗ್ಯದ ಮೇಲೆ ದೀರ್ಘಕಾಲೀನ ಪರಿಣಾಮ ಬೀರುತ್ತವೆ. ಶಿಸ್ತು ಕಾಪಾಡುವ ಉದ್ದೇಶದಿಂದ ತೆಗೆದುಕೊಳ್ಳುವ ಕ್ರಮಗಳು ಮಕ್ಕಳಲ್ಲಿ ಭಯ, ಆತಂಕ ಹಾಗೂ ಶಿಕ್ಷಣದಿಂದ ದೂರ ಉಳಿಯುವಂತೆ ಮಾಡುವ ಸಾಧ್ಯತೆಗಳಿವೆ. ಇಂತಹ ದೌರ್ಜನ್ಯಗಳನ್ನು ತಡೆಗಟ್ಟಲು ಶಾಲೆಗಳು ಸಕಾರಾತ್ಮಕ ಶಿಸ್ತಿನ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಸರ್ಕಾರವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...