ನಿಂದಿಸುವುದನ್ನು, ಗದರಿಸುವುದು ಆತ್ಮಹತ್ಯೆ ಪ್ರಚೋದನೆಯೆಂದು ಪರಿಗಣಿಸಲಾಗದು ಎಂದು ಹೇಳಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಗದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣವನ್ನು ಖುಲಾಸೆಗೊಳಿಸಿದೆ.
ತಮಿಳುನಾಡಿನ ಶಾಲೆಯೊಂದರಲ್ಲಿ ಶಾಲೆ ಮತ್ತು ಹಾಸ್ಟೆಲ್‌ನ ಉಸ್ತುವಾರಿ ವಹಿಸಿದ್ದ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ ದೂರಿನ ಮೇರೆಗೆ ವಿದ್ಯಾರ್ಥಿಯೊಬ್ಬನನ್ನು ಗದರಿಸಿದ್ದರು. ಇದಾದ ಬೆನ್ನಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಇದನ್ನು ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಗದರಿಸುವುದರಿಂದ ಇಂತಹ ದುರಂತ ಉಂಟಾಗುತ್ತದೆ ಎಂದು ಯಾವುದೇ ಸಾಮಾನ್ಯ ವ್ಯಕ್ತಿ ಊಹಿಸಲೂ ಸಾಧ್ಯವಿಲ್ಲ ಎಂದಿದೆ.
ಈ ಮೂಲಕ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಿಂದ ಶಿಕ್ಷಕನನ್ನು ಮುಕ್ತಗೊಳಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
“ವಿಷಯವನ್ನು ಸಂಪೂರ್ಣವಾಗಿ ಪರಿಗಣಿಸಿದ ನಂತರ ನಾವು ಹಸ್ತಕ್ಷೇಪ ಮಾಡಲು ಸೂಕ್ತವಾದ ಪ್ರಕರಣವೆಂದು ತಿಳಿದುಬಂದಿದೆ. ಇನ್ನೋರ್ವ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ವಿದ್ಯಾರ್ಥಿಗೆ ಗದರಿಸಲಾಗಿದ್ದು ಇದರಿಂದ ಅಂತಹ ದುರಂತ ಸಂಭವಿಸುತ್ತದೆ ಎಂದು ಯಾವುದೇ ಸಾಮಾನ್ಯ ವ್ಯಕ್ತಿ ಊಹಿಸಲು ಸಾಧ್ಯವಿಲ್ಲ” ಎಂದು ಪೀಠ ಹೇಳಿದೆ.
“ಮೃತ ವಿದ್ಯಾರ್ಥಿ ಮಾಡಿದ ತಪ್ಪನ್ನು ಮತ್ತೆ ಮಾಡದಂತೆ ಶಿಕ್ಷಕ ತಿಳಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಅವರದ್ದಾಗಿದರುವ ಕಾರಣ ಗದರಿಸಿದ್ದಾರೆ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
