ಲಾಠಿಚಾರ್ಜ್‌ ವೇಳೆ ಉಪ ಜಿಲ್ಲಾಧಿಕಾರಿಗೆ ಹೊಡೆದ ಪೊಲೀಸ್‌; ವಿಡಿಯೋ ವೈರಲ್

Date:

ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಒಳಮೀಸಲಾತಿ ಜಾರಿಯಲ್ಲಿ ‘ಕ್ರೀಮಿ ಲೇಯಲ್’ ಕ್ರಮವನ್ನು ಅಳವಡಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧ ಬುಧವಾರ ‘ಭಾರತ್ ಬಂದ್‌’ಗೆ ಕರೆಕೊಡಲಾಗಿದ್ದು, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರದ ಪಾಟ್ನಾದಲ್ಲಿಯೂ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಈ ವೇಳೆ, ಪೊಲೀಸ್ ಅಧಿಕಾರಿಯೊಬ್ಬರು ಉಪ ಜಿಲ್ಲಾಧಿಕಾರಿಗೇ ಹೊಡೆದಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಿಹಾರ ಪೊಲೀಸರು ಅಪಹಾಸ್ಯಕ್ಕೀಡಾಗಿದ್ದಾರೆ.

- Advertisement -

ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ರಸ್ತೆ ಮಧ್ಯದಲ್ಲಿ ನಿಂತಿದ್ದ ಉಪ ಜಿಲ್ಲಾಧಿಕಾರಿಗೆ ಲಾಠಿಯಲ್ಲಿ ಹೊಡೆದಿದ್ದಾರೆ. ಮತ್ತೊಮ್ಮೆ ಹೊಡೆಯಲು ಮುಂದಾದಾಗ, ಇತರ ಪೊಲೀಸರು ಆತನನ್ನು ತಡೆದಿದ್ದಾರೆ. ಅವರು ಉಪ ಜಿಲ್ಲಾಧಿಕಾರಿ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ ಅಳವಡಿಕೆಯು ಮೀಸಲಾತಿ ರದ್ದತಿಗೆ ಮುನ್ನುಡಿಯಾಗಲಿದೆ. ಕ್ರೀಮಿ ಲೇಯರ್ ಅಳವಡಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ‘ಮೀಸಲಾತಿ ಬಚಾವೋ ಸಂಘರ್ಷ ಸಮಿತಿ’ ಬುಧವಾರ ‘ಭಾರತ್ ಬಂದ್’ಗೆ ಕರೆಕೊಟ್ಟಿತ್ತು. ಬಂದ್ ಭಾಗವಾಗಿ ಎಲ್ಲಡೆ ಪ್ರತಿಭಟನೆಗಳು ನಡೆದಿವೆ. ವಿಶೇಷವಾಗಿ ಬಿಹಾರದಲ್ಲಿ ಪ್ರತಿಭಟನೆಯು ತೀವ್ರ ಸ್ವರೂಪದಲ್ಲಿ ನಡೆದಿದೆ.

ಪಾಟ್ನಾದಲ್ಲಿ, ಪ್ರತಿಭಟನಾಕಾರರು ಪ್ರಮುಖ ರಸ್ತೆಗಳು ಮತ್ತು ರೈಲು ನಿಲ್ದಾಣಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೈಲು-ವಾಹನಗಳನ್ನು ತಡೆದಿದ್ದಾರೆ. ಪ್ರತಿಭಟನೆಯನ್ನು ನಿಭಾಯಿಸಲಾಗದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್‌ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...