ದೆಹಲಿ ಲೋಕಸಭಾ ಸೀಟು ಹಂಚಿಕೆ: ಕಾಂಗ್ರೆಸ್ 3, ಎಎಪಿ 4ರಲ್ಲಿ ಸ್ಪರ್ಧೆ!

Date:

ಹಲವು ಸುತ್ತುಗಳ ಮಾತುಕತೆಯ ಬಳಿಕ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೋಕಸಭೆ ಕ್ಷೇತ್ರಗಳ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಹಾಗೂ ಅಮ್‌ ಆದ್ಮಿ ಪಕ್ಷಗಳು ಅಂತಿಮ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಉಭಯ ಪಕ್ಷಗಳು ನಾಲ್ಕು – ಮೂರು ಸೀಟು ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿವೆ. ಎಎಪಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎನ್ನಲಾಗಿದೆ.

“ಎರಡು ಪಕ್ಷಗಳ ನಡುವಣ ದೆಹಲಿಯ ಸೀಟು ಹಂಚಿಕೆ ಒಪ್ಪಂದ ಅಂತಿಮ ಹಂತ ತಲುಪಿದೆ. ಯಾವ ಕ್ಷೇತ್ರಗಳಲ್ಲಿ ಉಭಯ ಪಕ್ಷಗಳು ಸ್ಪರ್ಧಿಸಲಿವೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗೊಳಿಸುತ್ತೇವೆ” ಎಂದು ಎಎಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಈ ವಾರ ಎರಡು ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದವು. ದೆಹಲಿಯಲ್ಲಿ ಉತ್ತರ, ಪೂರ್ವ ಹಾಗೂ ಪಶ್ಚಿಮ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

ನಿನ್ನೆಯಷ್ಟೆ(ಫೆ.21) ಎಸ್‌ಪಿ ಹಾಗೂ ಕಾಂಗ್ರೆಸ್ ನಡುವೆ ಉತ್ತರ ಪ್ರದೇಶದ ಸೀಟು ಹಂಚಿಕೆ ಬಿಕ್ಕಟ್ಟು ಬಗೆಹರಿದಿತ್ತು. 80 ಲೋಕಸಭಾ ಸದಸ್ಯರಿರುವ ರಾಜ್ಯದಲ್ಲಿ ಕಾಂಗ್ರೆಸ್ 17 ಹಾಗೂ ಎಸ್‌ಪಿ 62 ಕ್ಷೇತ್ರಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಪಂಜಾಬ್‌ ರಾಜ್ಯದ ಎಲ್ಲ 13 ಸ್ಥಾನಗಳಲ್ಲೂ ಎಎಪಿ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರೀವಾಲ್ ಕಳೆದ ವಾರ ತಿಳಿಸಿದ್ದರು.

ಪಂಜಾಬ್‌ನಲ್ಲಿ ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 8, ಎಸ್‌ಎಡಿ 2, ಬಿಜೆಪಿ 2 ಹಾಗೂ ಎಎಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿತ್ತು. ಅದೇ ರೀತಿ ದೆಹಲಿಯಲ್ಲಿ ಎಲ್ಲ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...

ಕೇಂದ್ರೀಯ ಸಂಸ್ಥೆ ದುರುಪಯೋಗ ಪ್ರಶ್ನೆ; ಸಿಡಿಮಿಡಿಗೊಂಡ ಮೋದಿ, ಸ್ಕ್ರಿಪ್ಟ್‌ ಮಿಸ್ ಆಯ್ತ ಎಂದ ನೆಟ್ಟಿಗರು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ...

ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ...

ಹೈದರಾಬಾದ್‌ | ನವಜಾತ ಶಿಶುಗಳ ಬೃಹತ್ ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು: 11 ಮಕ್ಕಳ ರಕ್ಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಹೈದರಾಬಾದ್ ಪೊಲೀಸರು ನವಜಾತ ಶಿಶುಗಳ ಬೃಹತ್ ಕಳ್ಳಸಾಗಣೆ ಹಾಗೂ...