ಅದಾನಿ ಗ್ರೂಪ್‌ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಪತಿ ಭಾಗಿ: ಹಿಂಡನ್‌ಬರ್ಗ್ ಸ್ಪೋಟಕ ವರದಿ

Date:

Advertisements

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ ಕಳೆದ ರಾತ್ರಿ ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ.

ಹಿಂಡನ್‌ಬರ್ಗ್ ಶನಿವಾರ ಮಾಡಿರುವ ಪೋಸ್ಟ್‌ನಲ್ಲಿ “ಭಾರತದಲ್ಲಿ ಶೀಘ್ರದಲ್ಲೇ ದೊಡ್ಡದೊಂದು ಸಂಭವಿಸುತ್ತದೆ” ಎಂದು ಹೇಳು ಮೂಲಕ ಮತ್ತೊಂದು ವರದಿ ಬಿಡುಗಡೆಯ ಸುಳಿವು ನೀಡಿತ್ತು.

ಅದರಂತೆ ರಾತ್ರಿ ವೇಳೆಗೆ ಅದಾನಿ ಗ್ರೂಪ್ ಮತ್ತು ಸೆಬಿ ಮುಖ್ಯಸ್ಥರ ನಡುವೆ ಸಂಬಂಧವಿದೆ. ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ಘಟಕಗಳಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಪಾಲು ಹೊಂದಿದ್ದಾರೆ ಎಂದು ವಿಸ್ಲ್‌ಬ್ಲೋವರ್‌ನಿಂದ ಪಡೆದ ದಾಖಲೆಗಳು ತೋರಿಸುತ್ತವೆ ಎಂದು ಹಿಂಡನ್‌ಬರ್ಗ್ ರಿಸರ್ಚ್ ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಅದಾನಿ ಕುರಿತ ನಮ್ಮ ಸಂಶೋಧನೆ ಬಗ್ಗೆ ಅತ್ಯಂತ ಹೆಮ್ಮೆಯಿದೆ: ಸೆಬಿಗೆ ಹಿಂಡನ್ಬರ್ಗ್ ಪ್ರತಿಕ್ರಿಯೆ

ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ. ಈ ಆರೋಪಗಳು ಆಧಾರರಹಿತವಾಗಿದೆ. ನಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ. ಸೆಬಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಹಿಂಡನ್‌ಬರ್ಗ್ ಈಗ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

ಹಿಂಡನ್‌ಬರ್ಗ್ 2023ರ ಜನವರಿಯಲ್ಲಿ ಬಿಲಿಯನೇರ್ ಗೌತಮ್ ಅದಾನಿಯ ಅದಾನಿ ಗ್ರೂಪ್‌ನ ಷೇರುಪೇಟೆ ವಂಚನೆಗಳ ಬಗ್ಗೆ ವರದಿಯನ್ನು ಬಹಿರಂಗಪಡಿಸಿತ್ತು. ಈ ವರದಿಯಿಂದಾಗಿ ಅದಾನಿ ಗ್ರೂಪ್‌ನ ಸಮೂಹ ಷೇರುಗಳು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಇದೀಗ ಕೊಂಚ ಸುಧಾರಿಸಿಕೊಳ್ಳುತ್ತಿದ್ದಂತೆ ಮತ್ತೆ ಅದಾನಿ ಗ್ರೂಪ್‌ ಮತ್ತು ಸೆಬಿ ಸಂಬಂಧದ ವರದಿಯನ್ನು ಹಿಂಡನ್‌ಬರ್ಗ್ ಪ್ರಕಟಿಸಿದೆ. ಈ ವರದಿ ಮತ್ತೆ ಅದಾನಿ ಸಮೂಹ ಷೇರುಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಳ್ಳ, ಪೊಲೀಸ್, ಲಾಯರ್,ಜಡ್ಜ್, ಎಲ್ಲ ಇವರೇ. ಪ್ರತಿಭಾವಂತರು, ತುಂಬಾ ಮೆರಿಟೋರಿಯಸ್. ಮೀಸಲಾತಿಯ ಅಗತ್ಯವೇ ಇಲ್ಲ. ಇವರ ಬದುಕು, ಹಣಕಾಸಿನ ವಿವರಗಳು ತೆರೆದ ಬದುಕು. ಪಾರದರ್ಶಕ.

    ಇನ್ನು ಇವರ ಪ್ರತಿಭೆಯನ್ನು ಹೋಗಳೋಕೆ ,ಕೊಂಡಾಡೋಕೆ ಇವರದ್ದೇ ವಂದಿಮಾಗಧರು, ಮಾಧ್ಯಮ, ಜಾಲತಾಣಗಳು. ಅಪೂರ್ವ ಸಂಸ್ಕೃತಿ, ಅಪೂರ್ವ ಸಾಧನೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು,...

Download Eedina App Android / iOS

X