ಅದಾನಿ- ಹಿಂಡನ್‌ಬರ್ಗ್ ಪ್ರಕರಣ | ಸೆಬಿಗೆ ಹೆಚ್ಚುವರಿ ಆರು ತಿಂಗಳು ನೀಡದ ಸುಪ್ರೀಂ ಕೋರ್ಟ್‌

Date:

  • ಅದಾನಿ- ಹಿಂಡನ್‌ಬರ್ಗ್ ಪ್ರಕರಣ ತನಿಖೆಗೆ ಹೆಚ್ಚುವರಿ ಕಾಲಾವಕಾಶವಿಲ್ಲ
  • ಆಗಸ್ಟ್‌ವರೆಗೆ ಸಮಯಾವಕಾಶ ನೀಡಬಹುದು ಎಂದ ಸುಪ್ರೀಂಕೋರ್ಟ್‌

ಹಣಕಾಸು ದುರ್ವ್ಯವಹಾರಗಳಿಗೆ ಸಂಬಂಧಿಸಿ ಅದಾನಿ- ಹಿಂಡನ್‌ಬರ್ಗ್ ಪ್ರಕರಣದ ತನಿಖೆಗೆ ಭಾರತೀಯ ಷೇರು ವಿನಿಮಯ ಮಂಡಳಿ ಅಥವಾ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (ಸೆಬಿ) ಹೆಚ್ಚುವರಿ ಆರು ತಿಂಗಳ ಕಾಲಾವಕಾಶ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

“ಈ ಹೊತ್ತಿನಲ್ಲಿ ಆರು ತಿಂಗಳ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಮಾಡುವ ಕೆಲಸದಲ್ಲಿ ಚುರುಕುತನ ಇರಬೇಕು. ತಂಡವನ್ನು ರಚಿಸಿ. ಆಗಸ್ಟ್ ಮಧ್ಯಭಾಗದವರೆಗೂ ಸಮಯ ಕೊಡಬಹುದು. ಅದರೊಳಗೆ ವರದಿ ಸಲ್ಲಿಸಿ. ಆರು ತಿಂಗಳನ್ನು ಕನಿಷ್ಠ ಸಮಯವಾಗಿ ನೀಡಲು ಸಾಧ್ಯವಿಲ್ಲ. ಸೆಬಿ ಅನಿರ್ದಿಷ್ಟಾವಧಿ ಧೀರ್ಘ ಸಮಯ ತೆಗೆದುಕೊಳ್ಳಬಾರದು ಮತ್ತು ಅವರಿಗೆ 3 ತಿಂಗಳು ಕೊಡಬಹುದು” ಎಂದು ಭಾರತೀಯ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ನೋಂದಣಿ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ (ನಿವೃತ್ತ) ಎ ಎಂ ಸಪ್ರೆ ಸಮಿತಿಯಿಂದ ವರದಿಯನ್ನು ಪಡೆದುಕೊಂಡಿರುವುದನ್ನು ವಿಚಾರಣೆ ಸಂದರ್ಭ ದೃಢಪಡಿಸಿದೆ. ಸಮಿತಿಯ ವರದಿ ಪರಿಗಣಿಸಿದ ನಂತರ, ತನಿಖೆಗೆ ಅವಧಿ ವಿಸ್ತರಣೆ ಕೋರಿದ ಅರ್ಜಿ ಬಗ್ಗೆ ಮೇ 15ರಂದು ತೀರ್ಮಾನ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅದಾನಿ ಸಮೂಹದ ಮೇಲಿನ ಹಣಕಾಸು ದುರ್ವ್ಯವಹಾರಗಳ ಆರೋಪದ ತನಿಖೆ ನಡೆಸಲು ಆರು ತಿಂಗಳ ಕಾಲ ಅವಧಿಯನ್ನು ವಿಸ್ತರಿಸಬೇಕು ಎಂದು ಸೆಬಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲ ಅವರಿದ್ದ ನ್ಯಾಯ ಪೀಠವು ಶುಕ್ರವಾರ ವಿಚಾರಣೆ ನಡೆಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...