ಸಂಬಳ ‘ಕಟ್’ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ನನ್ನು ಗುಂಡಿಕ್ಕಿ ಕೊಂದ ಸೆಕ್ಯುರಿಟಿ

Date:

ರಜೆ ನಿರಾಕರಿಸಿದ್ದು ಮಾತ್ರವಲ್ಲದೆ, ಸಂಬಳವನ್ನೂ ಕಡಿತಗೊಳಿಸಿದ್ದಾರೆಂದು ಕುಪಿತಗೊಂಡ ಸೆಕ್ಯುರಿಟಿ ಸಿಬ್ಬಂದಿಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಬಲರಾಮ್ ನಗರದಲ್ಲಿರುವ ‘ಪಂಜಾಬ್ – ಸಿಂಧ್ ಬ್ಯಾಂಕ್’ (ಪಿಎಸ್‌ಬಿ) ಶಾಖೆಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಭಿಷೇಕ್ ಕುಮಾರ್ – ಮೃತ ಬ್ಯಾಂಕ್ ಮ್ಯಾನೇಜರ್‌. ಅವರು ಮೂಲತಃ ಬಿಹಾರದ ಪಾಟ್ನಾದವರು ಎಂದು ತಿಳಿದುಬಂದಿದೆ. ಆರೋಪಿಯನ್ನು ರವೀಂದರ್ ಹೂಡಾ ಎಂದು ಗುರುತಿಸಲಾಗಿದ್ದು, ಆತ ಬಾಗ್‌ಪತ್ ಜಿಲ್ಲೆಯ ಮನ್ಸೂರ್‌ಪುರದ ನಿವಾಸಿ ಎಂದು ವರದಿಯಾಗಿದೆ. ಘಟನೆ ಬೆನ್ನಲ್ಲೇ ಆರೋಪಿ ರವೀಂದರ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸೈನಿಕನಾಗಿರುವ ರವೀಂದರ್ ಕೂಡ, ತಮ್ಮ ನಿವೃತ್ತಿಯ ಬಳಿಕ ಪಿಎಸ್‌ಬಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು, ಸೋಮವಾರ ಮಧ್ಯಾಹ್ನ ಮ್ಯಾನೇಜರ್ ಅಭಿಷೇಕ್ ಕುಮಾರ್ ಅವರ ಕ್ಯಾಬಿನ್‌ಗೆ ನುಗ್ಗಿ, ರಜೆ ವಿಚಾರವಾಗಿ ಗಲಾಟೆ ಮಾಡಿದ್ದಾರೆ. ಮಾತಿ ಚಕಮಕಿ ನಡುವೆ ಕುಪಿತಗೊಂಡ ರವೀಂದರ್ ಬಂದೂಕಿನಿಂದ ಗುಂಡುಹಾರಿಸಿದ್ದಾರೆ. ಬಳಿಕ, ಬ್ಯಾಂಕ್‌ನಿಂದ ಪರಾರಿಯಾಗಿದ್ದಾರೆ.

ಬ್ಯಾಂಕ್‌ ಸಿಬ್ಬಂದಿಗಳು ಮ್ಯಾನೇಜರ್ ಅಭಿಷೇಕ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ವೇಳೆಗೆ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...