ಭದ್ರತಾ ನೆಪ: ಫೋನ್ ಜಾಮರ್, ಬಿಳಿ ಪರದೆ ಬಳಸಿ ಪೊಲೀಸರು ಸೋನಮ್‌ರನ್ನು ಹೇಗೆ ಹೊತ್ತೊಯ್ದರು

Date:

ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ, ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಜಂತರ್‌ ಮಂತರ್‌ನಿಂದ ಹೊತ್ತೊಯ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಂಸತ್ತಿನ ಮುಂಗಾರು ಅಧಿವೇಶನದ ಭದ್ರತಾ ಸಿದ್ಧತೆಯ ನೆಪವೊಡ್ಡಿ, ಸ್ಥಳದಲ್ಲಿ ಮೊಬೈಲ್ ಸಂಪರ್ಕ ಸ್ಥಗಿತಗೊಳಿಸುವ ಫೋನ್ ಜಾಮರ್ ಅಳವಡಿಸಿ, ವೇದಿಕೆಯ ಸುತ್ತ ಬಿಳಿ ಪರದೆ ಹಾಕಿಕೊಂಡು ಸೋನಮ್‌ರನ್ನು ಬಲವಂತವಾಗಿ ಪೊಲೀಸರು ಕರೆದೊಯ್ದಿದ್ದಾರೆ. ಈ ಘಟನಾವಳಿಗಳ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

- Advertisement -

ಮೂಲಗಳ ಪ್ರಕಾರ, ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂಸತ್ ಭದ್ರತಾ ಅಭ್ಯಾಸ (Security Drill) ನಡೆಯಲಿದೆ ಎಂಬ ಮಾಹಿತಿ ನೀಡಲಾಗಿತ್ತು. ಬಳಿಕ ಎಲ್ಲರನ್ನು ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅಲ್ಲಿ, ಸೋನಮ್‌ರನ್ನು ಹೊತ್ತೊಯ್ಯುವ ಕುರಿತ ನಿಜವಾದ ಕಾರ್ಯಯೋಜನೆ ವಿವರಿಸಲಾಗಿದೆ. ವಾಂಗ್ಚುಕ್ ಅವರನ್ನು ಕೇವಲ 30 ಸೆಕೆಂಡ್‌ಗಳಲ್ಲಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಬೇಕೆಂದು ಸೂಚನೆ ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೊಲೀಸರ ಯೋಜನೆಯ ಪ್ರಮುಖ ಭಾಗವಾಗಿ ಪ್ರತಿಭಟನೆಯ ಸಂಘಟಕರ ದೈನಂದಿನ ಚಟುವಟಿಕೆಗಳನ್ನು ಗಮನಿಸಲಾಗಿತ್ತು. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರತಿದಿನ ಬೆಳಿಗ್ಗೆ ಕೆಲವೇ ನಿಮಿಷಗಳ ಕಾಲ ಸಮೀಪದ ಶೌಚಾಲಯಕ್ಕೆ ತೆರಳುವ ಸಮಯವನ್ನು ಪೊಲೀಸರು ಗುರುತಿಸಿದ್ದರು. ಅದೇ ಅವಧಿಯನ್ನು ಕಾರ್ಯಾಚರಣೆಗೆ ಆಯ್ಕೆ ಮಾಡಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಶನಿವಾರ ಬೆಳಿಗ್ಗೆ ಸುಮಾರು 6.30ರ ವೇಳೆಗೆ ದೀಪ್ಕೆ ಸ್ಥಳದಿಂದ ಹೊರಹೋದ ತಕ್ಷಣ ಪೊಲೀಸರು ವೇದಿಕೆಯನ್ನು ಸುತ್ತುವರಿದು, ಬಿಳಿ ಪರದೆಯನ್ನು ಮುಚ್ಚಿದರು. ಇದೇ ವೇಳೆ, ಫೋನ್‌ಗಳು ಕಾರ್ಯನಿರ್ವಹಿಸದಂತೆ ಜಾಮರ್‌ಗಳನ್ನು ಬಳಿಸಿದ್ದರು. ಪರಿಣಾಮ, ಸ್ಥಳದಲ್ಲಿದ್ದವರಿಗೆ ತಕ್ಷಣ ಮಾಹಿತಿ ರವಾನಿಸುವ ಅವಕಾಶವೂ ಸೀಮಿತವಾಗಿತ್ತು ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ನಾಲ್ಕೈದು ಪೊಲೀಸರು ವಾಂಗ್ಚುಕ್ ಅವರನ್ನು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ದರು. ನಂತರ ಪ್ರತಿಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಿತು.

ಈ ಬೆಳವಣಿಗೆಗೂ ಒಂದು ದಿನ ಮೊದಲು ದೆಹಲಿ ಪೊಲೀಸ್ ಆಯುಕ್ತರ ಬದಲಾವಣೆ ನಡೆದಿತ್ತು. ಸತೀಶ್ ಗೋಲ್ಛಾ ಅವರ ಸ್ಥಾನಕ್ಕೆ ಅನುರಾಗ್ ಕುಮಾರ್ ಅವರನ್ನು ಕೇಂದ್ರ ಗೃಹ ಸಚಿವಾಲಯ ನೇಮಿಸಿತ್ತು. ಹೊಸ ಪೊಲೀಸ್ ಆಯುಕ್ತರು ಅಧಿಕಾರ ಸ್ವೀಕರಿಸಿದ ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಂಗ್ಚುಕ್ ಅವರನ್ನು ತೆರವುಗೊಳಿಸುವ ಕಾರ್ಯತಂತ್ರ ರೂಪಿಸಿದ್ದರು ಎಂದು ವರದಿಗಳು ಹೇಳುತ್ತಿವೆ. ಈ ಹಿಂದೆಯೂ ಇದೇ ರೀತಿಯ ಕಾರ್ಯಯೋಜನೆ ರೂಪಿಸಲಾಗಿತ್ತು. ಆದರೆ, ಅವುಗಳ ಮಾಹಿತಿ ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಕೆಲವೇ ಹಿರಿಯ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ.

ಈ ಲೇಖನ ಓದಿದ್ದೀರಾ?: ರಾಮಮಂದಿರ ಲೂಟಿ | ಕಳುವಾಗಿದ್ದು ಹಣ ಮಾತ್ರವಲ್ಲ, ಜನರ ನಂಬಿಕೆಯೂ!

ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಪ್ರತಿಭಟನೆ ಮತ್ತಷ್ಟು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ವಾಂಗ್ಚುಕ್ ಅವರೊಂದಿಗೆ ತಕ್ಷಣ ಮಾತುಕತೆ ನಡೆಸಬೇಕು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿವೆ.

ಜಂತರ್ ಮಂತರ್‌ನಲ್ಲಿ ನಡೆದ ಈ ಮುಂಜಾನೆ ಕಾರ್ಯಾಚರಣೆ ಕೇವಲ ಪ್ರತಿಭಟನೆಯನ್ನು ತೆರವುಗೊಳಿಸುವ ಕ್ರಮವೇ ಅಥವಾ ಭಿನ್ನಮತದ ಧ್ವನಿಯನ್ನು ನಿಯಂತ್ರಿಸುವ ಪ್ರಯತ್ನವೇ ಎಂಬ ಪ್ರಶ್ನೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...