ದೇಶದ್ರೋಹದ ಪಿತೂರಿ ಆರೋಪ: ಆಸಿಯಾ ಅಂದ್ರಾಬಿಗೆ ಜೀವಾವಧಿ, ಸಹಚರರಿಗೆ 30 ವರ್ಷ ಜೈಲು

Date:

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಇಂದು (ಮಾ.24) ತೀರ್ಪು ನೀಡಿದೆ. ಇದೇ ಪ್ರಕರಣದಲ್ಲಿ ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮೀದಾ ಮತ್ತು ನಹೀದಾ ನಸ್ರೀನ್‌ಗೆ ತಲಾ 30 ವರ್ಷಗಳ ಜೈಲು ಶಿಕ್ಷೆ ವಿಧಿಸಿ ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ತೀರ್ಪು ಪ್ರಕಟಿಸಿದ್ದಾರೆ.

- Advertisement -

1987ರಲ್ಲಿ ‘ದುಖ್ತರನ್-ಎ-ಮಿಲ್ಲತ್’ (DeM) ಎಂಬ ಮಹಿಳಾ ಪ್ರತ್ಯೇಕತಾವಾದಿ ಸಂಘಟನೆಯನ್ನು ಸ್ಥಾಪಿಸಿದ್ದರು ಆಸಿಯಾ ಅಂದ್ರಾಬಿ. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವ ಉದ್ದೇಶದೊಂದಿಗೆ ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದು, ಭಯೋತ್ಪಾದಕ ಸಂಘಟನೆಯ ಸದಸ್ಯೆಯಾಗಿದ್ದುಕೊಂಡು ಅಂತಹ ಗುಂಪುಗಳಿಗೆ ಬೆಂಬಲ ನೀಡಿದ ಗಂಭೀರ ಆರೋಪಗಳ ಮೇಲೆ 2018ರ ಏಪ್ರಿಲ್‌ನಲ್ಲಿ ಈಕೆಯನ್ನು ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕರಣ ಸಂಬಂಧ 2026ರ ಜನವರಿ 14ರಂದು ನ್ಯಾಯಾಲಯವು ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರನ್ನು ಅಪರಾಧಿಗಳೆಂದು ಘೋಷಿಸಿತ್ತು. ಭಯೋತ್ಪಾದನಾ ಕೃತ್ಯಗಳಿಗೆ ಸಂಚು ರೂಪಿಸುವುದು ಮತ್ತು ದೇಶದ ವಿರುದ್ಧ ಯುದ್ಧ ಸಾರುವ ಉದ್ದೇಶ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಮತ್ತು ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಇವರು ಶಿಕ್ಷೆಗೆ ಅರ್ಹರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

1967ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ (UAPA) ಮೊದಲ ಅನುಸೂಚಿಯ ಅಡಿಯಲ್ಲಿ ನಿಷೇಧಕ್ಕೊಳಗಾಗಿರುವ ʼದುಖ್ತರನ್-ಎ-ಮಿಲ್ಲತ್ʼ (DeM), ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ನೇರ ನೆರವು ಮತ್ತು ಕುಮ್ಮಕ್ಕಿನೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಕಾಶ್ಮೀರದ ಸಾಮಾನ್ಯ ಜನರನ್ನು ಭಾರತ ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯಕ್ಕೆ ಪ್ರಚೋದಿಸುವುದು ಮತ್ತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವುದು ಈ ಸಂಘಟನೆಯ ಮುಖ್ಯ ಗುರಿಯಾಗಿತ್ತು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಪ್ರತಿ ಮನೆಗೆ 2 ಉಚಿತ ಎಲ್‌ಪಿಜಿ ಸಿಲಿಂಡರ್: ಮಧ್ಯಪ್ರಾಚ್ಯ ಯುದ್ಧದ ನಡುವೆ ದೆಹಲಿ ಬಜೆಟ್ ಘೋಷಣೆ

ಎನ್‌ಐಎ ಸಲ್ಲಿಸಿರುವ ಚಾರ್ಜ್‌ಶೀಟ್ ಪ್ರಕಾರ, ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರು ಟ್ವಿಟ್ಟರ್, ಫೇಸ್‌ಬುಕ್, ಯೂಟ್ಯೂಬ್ ಮತ್ತು ಪಾಕಿಸ್ತಾನದ ದೂರದರ್ಶನ ವಾಹಿನಿಗಳನ್ನು ಬಳಸಿಕೊಂಡು ಭಾರತದ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಹಾಗೂ ದೇಶದ್ರೋಹದ ಸಂದೇಶಗಳನ್ನು ಹರಡುತ್ತಿದ್ದರು. ಸುಶಿಕ್ಷಿತರಾಗಿದ್ದೂ ಸಮಾಜದಲ್ಲಿ ಅಶಾಂತಿ ಮತ್ತು ಬಂಡಾಯ ಮೂಡಿಸಲು ಇವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು ಎಂಬುದು ತನಿಖೆಯಲ್ಲಿ ದೃಢಪಟ್ಟಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...