ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

Date:

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು ಮತ್ತು ಕಾರ್ಯಕರ್ತರ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿ, ಆ ಮೊಬೈಲ್‌ಗಳಲ್ಲಿ ನಕಲಿ ಸಾಕ್ಷ್ಯಗಳನ್ನು ಅಳವಡಿಸಿದ ಸಂಶಯವಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕ ಸೌರವ್ ದಾಸ್ ಆರೋಪಿಸಿದ್ದಾರೆ. ಈ ಆರೋಪದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು, ನಿಯಾಮಾನುಸಾರವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

- Advertisement -

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೇರಿದಂತೆ ಹಲವು ಸಿಜೆಪಿ ನಾಯಕರನ್ನು ನಿನ್ನೆ ವಿಮಾನದಲ್ಲಿಯೇ ಬಂಧಿಸಲಾಗಿದೆ. ಇಂದು ನಾಯಕರನ್ನು ಬಿಡುಗಡೆ ಮಾಡಲಾಗಿದೆ. ಇದಾದ ಬಳಿಕ ಸೌರವ್ ದಾಸ್ ಸೇರಿದಂತೆ ಹಲವು ಪ್ರತಿಭಟನಾಕಾರರು ಮಾಧ್ಯಮಗಳ ಮುಂದೆ ಸರಣಿ ಆರೋಪಗಳನ್ನು ಮಾಡಿದ್ದಾರೆ. ಯಾವುದೇ ಜಪ್ತಿ ಮಹಜರು ನೀಡದೆ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಫೋನ್‌ಗಳ ದತ್ತಾಂಶಗಳನ್ನು ತಿದ್ದುಪಡಿ ಮಾಡುವ ಅಥವಾ ‘ಕ್ಲೋನಿಂಗ್’ ಮಾಡುವ ಅಪಾಯವಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಬಂಧನದ ವೇಳೆ ಪೊಲೀಸರು ನಮ್ಮ ಮೊಬೈಲ್ ಕಸಿದುಕೊಂಡು ನಕಲಿ ಸಾಕ್ಷ್ಯ ಅಳವಡಿಸಿರುವ ಸಂಶಯವಿದೆ: ಸಿಜೆಪಿ ನಾಯಕರ ಗಂಭೀರ ಆರೋಪ

ಈ ಆರೋಪಗಳನ್ನು ದೆಹಲಿ ಪೊಲೀಸ್ ಇಲಾಖೆ ತಳ್ಳಿಹಾಕಿದೆ. ಪೊಲೀಸ್ ಸಾರ್ವಜನಿಕ ಸಂಪರ್ಕಾಧಿಕಾರಿ ದೆಹಲಿ ಪೊಲೀಸರ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಮುಂಜಾಗ್ರತಾ ತಡೆ ಬಂಧನದ ಸಮಯದಲ್ಲಿ ನೆಟ್‌ವರ್ಕ್‌ಗೆ ಸಂಪರ್ಕಗೊಂಡಿರುವ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಭದ್ರತಾ ನಿಯಮಾವಳಿಯ ಭಾಗವಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಮುಂಜಾಗ್ರತಾ ಬಂಧನದ ಅವಧಿಯಲ್ಲಿ ವ್ಯಕ್ತಿಗತ ಫೋನ್ ಬಳಸಲು ಅವಕಾಶವಿಲ್ಲ. ಆದಾಗ್ಯೂ, ತಡೆ ಬಂಧನದಲ್ಲಿದ್ದವರಿಗೆ ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಇಲಾಖೆಯ ಅಧಿಕೃತ ಫೋನ್ ಸೌಲಭ್ಯ ಒದಗಿಸಲಾಗಿತ್ತು ಎಂದಿದ್ದಾರೆ.

ಹಾಗೆಯೇ ಯಾವುದೇ ವ್ಯಕ್ತಿಗೆ ತಮ್ಮ ಡಿಜಿಟಲ್ ಸಾಧನಗಳ ದುರುಪಯೋಗವಾಗಿದೆ ಎಂಬ ಸಂಶಯವಿದ್ದರೆ, ಅವರು ನ್ಯಾಯಾಲಯವನ್ನು ಸಂಪರ್ಕಿಸಿ ವಿಧಿವಿಜ್ಞಾನ ತಪಾಸಣೆಗೆ ಕೋರುವ ಕಾನೂನುಬದ್ಧ ಅವಕಾಶಗಳಿವೆ ಎಂದು ಪೊಲೀಸರು ಹೇಳಿದ್ದಾರೆ.

ಜಂತರ್ ಮಂತರ್, ಸೆಂಟ್ರಲ್ ದೆಹಲಿ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕ ಆಸ್ತಿಗೆ ಹಾನಿಯಾಗುವುದನ್ನು ತಡೆಯಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದ ಕಾರಣದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...