10 ಕೋಟಿ ಕೊಡುವುದಾಗಿ ನಂಬಿಸಿ 2.5 ಕೋಟಿ ದೋಚಿದ ಸ್ವಯಂಘೋಷಿತ ದೇವಮಾನವ

Date:

ಸ್ವಯಂಘೋಷಿತ ದೇವಮಾನವ ಸೇರಿದಂತೆ ಮೂವರು ಸೇರಿ ಆಂಧ್ರ ಪ್ರದೇಶದ ಮಹಿಳೆಯೊಬ್ಬರಿಗೆ ಸುಮಾರು 2.5 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ಈ ಸಂಬಂಧ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ನಿವಾಸಿ ಎಂ. ಕುಮುದಾ ನೀಡಿದ ದೂರಿನ ಮೇರೆಗೆ, ಸಿಸಿಬಿ ಪೊಲೀಸರು ಸ್ವಯಂಘೋಷಿತ ದೇವಮಾನವ ಅಫ್ಸರ್ ಪಾಷಾ, ಶಂಕರ್ ಹಾಗೂ ಭರತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೂರಿನ ಪ್ರಕಾರ, ತಮ್ಮ ಪತಿ, ಅತ್ತೆ ಹಾಗೂ ಭಾವನಿಗೆ ಸೇರಿದ ಚಾಮರಾಜಪೇಟೆಯ ಆಸ್ತಿಯನ್ನು ಅಡಮಾನವಿಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಕುಮುದಾ 2022ರಲ್ಲಿ ಪ್ರಯತ್ನಿಸುತ್ತಿದ್ದರು. ಇದೇ ವೇಳೆ ಸ್ನೇಹಿತರೊಬ್ಬರ ಮೂಲಕ ಭರತ್ ಮತ್ತು ಶಂಕರ್ ಪರಿಚಯವಾಗಿದ್ದು, ಅವರು ಸಾಲ ಕೊಡಿಸುವುದಾಗಿ ಭರವಸೆ ನೀಡಿದ್ದರು. ಬಳಿಕ ಇಬ್ಬರೂ ಆಗಾಗ ಕುಮುದಾ ಅವರ ಮನೆಗೆ ಭೇಟಿ ನೀಡುತ್ತಿದ್ದರು.

2023ರ ನವೆಂಬರ್‌ನಲ್ಲಿ ಕುಮುದಾ ಅವರ ಮಗ ಅಪಘಾತಕ್ಕೀಡಾದ ಬಳಿಕ, ಮನೆಯಲ್ಲಿನ “ನಕಾರಾತ್ಮಕ ಶಕ್ತಿ”ಯಿಂದಲೇ ಈ ಘಟನೆ ನಡೆದಿದೆ ಎಂದು ಭರತ್ ಹೇಳಿದ್ದಾನೆ. ಸಮಸ್ಯೆಗಳನ್ನು ಪರಿಹರಿಸಬಲ್ಲ ವ್ಯಕ್ತಿ ಎಂದು ಹೇಳಿ ಸ್ವಯಂಘೋಷಿತ ದೇವಮಾನವ ಅಫ್ಸರ್ ಪಾಷಾನನ್ನು ಪರಿಚಯಿಸಿದ್ದಾನೆ. ಅಫ್ಸರ್ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಸುಮಾರು 8 ಲಕ್ಷ ರೂ. ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಾದ ಬಳಿಕ ಮನೆ ಮಾರಾಟ ಅಥವಾ ಬ್ಯಾಂಕ್ ಸಾಲದ ಕುರಿತು ಕುಮುದಾ ಚರ್ಚಿಸಿದಾಗ, ತಮಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ (ಆರ್‌ಬಿಐ) 505 ಕೋಟಿ ರೂ. ಬರಬೇಕಿದೆ ಎಂದು ಅಫ್ಸರ್ ಹೇಳಿದ್ದಾನೆ ಎನ್ನಲಾಗಿದೆ. ಮನೆ ಮಾರಾಟ ಮಾಡಿ 2.5 ಕೋಟಿ ರೂ. ನೀಡಿದರೆ, ಆರ್‌ಬಿಐಯಿಂದ ಹಣ ಬಂದ ಬಳಿಕ 10 ಕೋಟಿ ರೂ. ಹಿಂದಿರುಗಿಸುವುದಾಗಿ ವಾಟ್ಸಾಪ್ ಸಂದೇಶಗಳ ಮೂಲಕ ಭರವಸೆ ನೀಡಿದ್ದಾನೆ ಎಂದು ಕುಮುದಾ ಆರೋಪಿಸಿದ್ದಾರೆ.

ಆರ್‌ಬಿಐ ನೀಡಿದೆ ಎಂದು ಹೇಳಲಾದ ಪ್ರಮಾಣಪತ್ರ ಹಾಗೂ ಅದರಲ್ಲಿ ಅಫ್ಸರ್‌ನ ಫೋಟೋ ಇರುವ ದಾಖಲೆಗಳನ್ನು ನಂಬಿದ ಕುಮುದಾ, ತಮ್ಮ ಮನೆಯನ್ನು 8.5 ಕೋಟಿ ರೂ.ಗೆ ಮಾರಾಟ ಮಾಡಿದ್ದರು. ಬಳಿಕ ಸುಮಾರು 2.5 ಕೋಟಿ ರೂ. ಮೌಲ್ಯದ ನಗದು ಹಾಗೂ ಚಿನ್ನವನ್ನು ಹಂತ ಹಂತವಾಗಿ ಅಫ್ಸರ್‌ಗೆ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಹಬ್ಬದ ಸೀಸನ್‌ಗೆ ಬೆಲೆ ಏರಿಕೆ ಶಾಕ್! ಟೂತ್‌ಪೇಸ್ಟ್‌ನಿಂದ ಪೇಂಟ್‌ವರೆಗೆ ಹಲವು ವಸ್ತುಗಳು ದುಬಾರಿ

ಆದರೆ ಭರವಸೆ ನೀಡಿದಂತೆ ಹಣವನ್ನು ಹಿಂದಿರುಗಿಸದ ಅಫ್ಸರ್‌ನ್ನು ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಈ ಕುರಿತು ಶಂಕರ್ ಮತ್ತು ಭರತ್ ಅವರನ್ನು ಸಂಪರ್ಕಿಸಿದರೂ ಸ್ಪಂದಿಸಿಲ್ಲ ಎಂದು ಕುಮುದಾ ಆರೋಪಿಸಿದ್ದಾರೆ. ಅಲ್ಲದೆ, ಹಣ ಕೇಳಿದಾಗ ಅಫ್ಸರ್ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು, ಆರೋಪಿಗಳಾದ ಅಫ್ಸರ್ ಪಾಷಾ, ಶಂಕರ್ ಹಾಗೂ ಭರತ್ ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...