ಸುದ್ದಿ ವಾಹಿನಿಗಳ ಸ್ವಯಂ ನಿಯಂತ್ರಣವನ್ನು ಬಿಗಿಗೊಳಿಸಬೇಕು: ಸುಪ್ರೀಂ ಕೋರ್ಟ್‌

Date:

ಟಿವಿ ಸುದ್ದಿ ವಾಹಿನಿಗಳ ಸ್ವಯಂ-ನಿಯಂತ್ರಣ ಮತ್ತು ಮೇಲ್ವಿಚಾರಣೆಯ ಕಾರ್ಯವಿಧಾನವನ್ನು ಮತ್ತಷ್ಟು ‘ಬಿಗಿಗೊಳಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅದಕ್ಕಾಗಿ, ಹೊಸ ಮಾರ್ಗಸೂಚಿಗಳನ್ನು ಸಿದ್ದಪಡಿಸಲು ನ್ಯೂಸ್ ಬ್ರಾಡ್‌ಕಾಸ್ಟರ್‌ ಅಂಡ್ ಡಿಜಿಟಲ್ ಅಸೋಸಿಯೇಷನ್‌ಗೆ (ಎನ್‌ಬಿಡಿಎ) ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

- Advertisement -

ಟಿವಿ ಚಾನೆಲ್‌ಗಳ ಸ್ವಯಂ ನಿಯಂತ್ರಣದ ಕುರಿತು ಅವಲೋಕನ ಮಾಡಬೇಕೆಂದು ಮಹಾರಾಷ್ಟ್ರ ಬಾಂಬೆ ಹೈಕೋರ್ಟ್‌ ಹೇಳಿತ್ತು. ಆ ಆದೇಶದ ವಿರುದ್ಧ ಎನ್‌ಬಿಡಿಎ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಚಾರಣೆ ವೇಳೆ, ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಎನ್‌ಬಿಡಿಎ ತನ್ನ ಮಾಜಿ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿಗಳಾದ ಎ.ಕೆ ಸಿಕ್ರಿ ಮತ್ತು ಆರ್.ವಿ ರವೀಂದ್ರನ್ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂಬ ಎನ್‌ಬಿಡಿಎ ಹೇಳಿಕೆಯನ್ನು ಗಮನಿಸಿದೆ.

ಎಕೆ ಸಿಕ್ರಿ ಮತ್ತು ಆರ್‌ವಿ ರವೀಂದ್ರನ್ ಅವರೊಂದಿಗೆ ಎನ್‌ಬಿಡಿಎ ನಡೆಸಿದ ಸಭೆಗಳ ಬಗ್ಗೆ ಎನ್‌ಬಿಡಿಎ ಪರ ವಾದ ಮಂಡಿಸಿದ ವಕೀಲ ಅರವಿಂದ್ ದಾತರ್, “ಸಂಪೂರ್ಣ ಮಾರ್ಗಸೂಚಿಗಳನ್ನು ಮರುಪರಿಶೀಲಿಸಲಾಗುತ್ತಿದೆ” ಎಂದು ಹೇಳಿದರು.

ನಿಯಮಗಳ ಅಡಿಯಲ್ಲಿ ನೋಂದಾಯಿಸಲು ಎನ್‌ಬಿಡಿಎ ವಿಫಲವಾದ ಬಗ್ಗೆ ಕೇಂದ್ರವು ನ್ಯಾಯಾಲಯದಲ್ಲಿ ಗಮನಸೆಳೆದಿತ್ತು. ಹೀಗಾಗಿ, ನ್ಯೂಸ್ ಬ್ರಾಡ್‌ಕಾಸ್ಟರ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಬಿಎಫ್‌ಐ) ಪರವಾಗಿ ಹಾಜರಾದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, “2022ರ ನಿಯಮಗಳ ಪ್ರಕಾರ ಕೇಂದ್ರದಲ್ಲಿ ನೋಂದಾಯಿಸಲಾದ ಏಕೈಕ ನಿಯಂತ್ರಣ ಸಂಸ್ಥೆ ಎನ್‌ಬಿಡಿಎ” ಎಂದು ಹೇಳಿದರು.

ವಾದವನ್ನು ಆಲಿಸಿದ ನ್ಯಾಯಾಲಯ, ಪೂರ್ಣ ಪ್ರಮಾಣದ ಹೊಸ ಮಾರ್ಗಸೂಚಿಗಳನ್ನು ರಚಿಸಲು ನಾಲ್ಕು ವಾರಗಳ ಅವಕಾಶ ನೀಡಿದ್ದು, ವಿಚಾರಣೆಯಲ್ಲಿ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...