ಅತ್ಯಾಚಾರ ಆರೋಪದಲ್ಲಿ ಬಂಧಿಸಲ್ಪಟ್ಟ ಸ್ವಯಂಘೋಷಿತ ದೇವಮಾನವ ಅಶೋಕ್ ಮೇಲೆ ದಾಖಲಾಗಿತ್ತು ಆತ್ಮಹತ್ಯೆ ಪ್ರಚೋದನೆ ಪ್ರಕರಣ

Date:

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧದ ಹಲವು ಪ್ರಕರಣಗಳೀಗ ಬಹಿರಂಗವಾಗುತ್ತಿದೆ. 2022ರಲ್ಲಿ ವ್ಯಕ್ತಿಯೊಬ್ಬನಿಗೆ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪವೂ ಖರತ್ ಮೇಲಿತ್ತು ಎಂಬುದು ತಿಳಿದುಬಂದಿದೆ. ಆದರೆ ಖರತ್ ಹೆಸರನ್ನು ಚಾರ್ಜ್‌ಶೀಟ್‌ನಿಂದ ತೆಗೆದು ಹಾಕಿ ಕ್ಲೀನ್ ಚಿಟ್‌ ನೀಡಲಾಗಿತ್ತು ಎಂಬುದೂ ಬಹಿರಂಗವಾಗಿದೆ.

- Advertisement -

37 ವರ್ಷದ ವಿಕಾಸ್ ರಾಮದಾಸ್ ದಿವಾಟೆ 2022ರಲ್ಲಿ ಶಿರಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆಗೆ ತಮ್ಮ ಅತ್ತೆ, ಮಾವಂದಿರು ಮತ್ತು ‘ಕ್ಯಾಪ್ಟನ್’ ಎಂದು ಉಲ್ಲೇಖಿಸಿ ಮಾಜಿ ಮರ್ಚೆಂಟ್ ನೇವಿ ಅಧಿಕಾರಿ ಖರತ್ ಹೆಸರನ್ನೂ ಡೆತ್‌ ನೋಟ್‌ನಲ್ಲಿ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಬಂಧನದ ಬಳಿಕ ದೂರು ದಾಖಲಿಸಲು 50ಕ್ಕೂ ಅಧಿಕ ಕರೆ!

“ನಾನು ವಿಕಾಸ್ ರಾಮದಾಸ್ ದಿವಾಟೆ. ನಾನು ನೇಣು ಬಿಗಿದುಕೊಂಡು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ನನ್ನ ಸಾವಿಗೆ ಕಾರಣ ನಾಸಿಕ್‌ನ ‘ಕ್ಯಾಪ್ಟನ್’ ಖರತ್. ನನ್ನ ಅತ್ತೆ ಮಾವ ಕೂಡ ಕಾರಣ” ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿತ್ತು.

ಹಾಗೆಯೇ, “ಖರತ್ ನನಗೆ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಆ ಎಲ್ಲ ಕರೆಗಳು ನನ್ನ ಮೊಬೈಲ್ ಫೋನ್‌ನಲ್ಲಿ ದಾಖಲಾಗಿವೆ. ನನ್ನ ಮರಣದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಬರೆದಿದ್ದಾರೆ. ಅದರ ಜತೆಗೆ ತಮ್ಮ ಮೊಬೈಲ್ ಫೋನ್‌ ಅನ್‌ಲಾಕ್ ಮಾಡಲು ಬೇಕಾದ ಪಾಸ್‌ಕೋಡ್ ಕೂಡಾ ಉಲ್ಲೇಖಿಸಿದ್ದಾರೆ.

ವಿಕಾಸ್ ಅವರ ಸಹೋದರ ರಾಜೇಂದ್ರ ಗುರುವಾರ ಈ ವಿಚಾರವನ್ನು ಮತ್ತೆ ಮುನ್ನಲೆಗೆ ತಂದಿದ್ದಾರೆ. “ಡೆತ್‌ನೋಟ್ ಮತ್ತು ಕುಟುಂಬದ ದೂರಿನ ಆಧಾರದ ಮೇಲೆ, ಖರತ್ ಹೆಸರನ್ನು ಎಫ್ಐಆರ್‌ನಲ್ಲಿ ದಾಖಲಿಸಲಾಗಿತ್ತು. ಅದಾದ ಬಳಿಕ ಅವರನ್ನು ರಕ್ಷಿಸಲು ಸತತ ಪ್ರಯತ್ನಗಳು ನಡೆದಿವೆ. ವಿಕಾಸ್ ‘ಸ್ವಯಂಘೋಷಿತ ದೇವಮಾನವ’ನ ವಿರುದ್ಧ ಕಿರುಕುಳ, ಬೆದರಿಕೆ ಆರೋಪ ಮಾಡಿದ್ದರೂ ಖರತ್ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿಲ್ಲ. ಅದಾದ ನಂತರ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಬಳಿಕ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಜೇಂದ್ರ ದೂರಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ‘ಶಿವನ ಅವತಾರ’ ಎಂದು ಹೇಳಿ ಅತ್ಯಾಚಾರ ಮಾಡಿದ್ದ ‘ದೇವಮಾನವ’ನ ಬಂಧನ

ಇನ್ನು ಈ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ಮತ್ತೆ ತೆರೆಯಲಾಗುತ್ತಿದೆ. ಖರತ್ ಪಾತ್ರವನ್ನು ತನಿಖೆ ಮಾಡಲಾಗುವುದು. ಖರತ್‌ನಿಂದ ಅನ್ಯಾಯಕ್ಕೆ ಒಳಗಾದವರು ಮುಂದೆ ಬಂದು ದೂರು ದಾಖಲಿಸಿ ಎಂದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

‘ಕ್ಯಾಪ್ಟನ್’ ಎಂದು ಕರೆಯಲಾಗುವ ಸ್ವಯಂಘೋಷಿತ ದೇವಮಾನವ ಅಶೋಕ್ ಖರತ್ ಅನ್ನು ಮಾರ್ಚ್ 17ರಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ. ಅದಾದ ಬಳಿಕ ಹಲವು ದೂರುಗಳು ಕೇಳಿಬಂದಿದೆ. ತನಿಖೆಯ ಸಮಯದಲ್ಲಿ, ಪೆನ್‌ಡ್ರೈವ್‌ನಲ್ಲಿದ್ದ ಲವು ಆಕ್ಷೇಪಾರ್ಹ ಕ್ಲಿಪ್‌ಗಳು ಸೇರಿದಂತೆ 58 ವೀಡಿಯೊಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನು ಖರತ್‌ಗೆ ರಾಜಕೀಯ ಸಂಪರ್ಕಗಳಿವೆ ಎಂಬ ಆರೋಪವೂ ಇದೆ. ಎನ್‌ಸಿಪಿ ನಾಯಕಿ ರೂಪಾಲಿ ಚಕಂಕರ್ ಹೆಸರೂ ಕೇಳಿಬಂದಿದೆ. ಖರತ್ ಜತೆಗಿರುವ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಈ ಆರೋಪಗಳ ಬೆನ್ನಲ್ಲೇ ರೂಪಾಲಿ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮತ್ತು ಪಕ್ಷದ ಮಹಿಳಾ ವಿಭಾಗದ ರಾಜ್ಯ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇವೆಲ್ಲವುದರ ನಡುವೆ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಖರತ್ ಬಂಧನದ ಬಳಿಕ ಹಲವು ಸಂತ್ರಸ್ತರು ದೂರು ನೀಡಲು ಮುಂದಾಗುತ್ತಿದ್ದಂತೆ ಇದರಿಂದ ಧೈರ್ಯ ತಂದುಕೊಂಡ 35 ವರ್ಷದ ಮಹಿಳೆಯೊಬ್ಬರು ಬೇರೊಬ್ಬ ಸ್ವಯಂಘೋಷಿತ ದೇವಮಾನವನಿಂದ ತನಗಾದ ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದರು. ತಾನು ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 40 ವರ್ಷದ ಆರೋಪಿ ಹೃಷಿಕೇಶ್ ವೈದ್ಯನನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿತ್ತು. ಆದರೆ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಆರೋಪವನ್ನು ನಿರಾಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...