ಒಡಿಶಾದ ಮತ್‌ಕರ್ಗೋಳದಲ್ಲಿ ಆಶ್ರಮ ನಡೆಸುತ್ತಿದ್ದ ಸ್ವಯಂ ಘೋಷಿತ ದೇವಮಾನವನನ್ನು ಕಾಮಿಕ್ಯಾನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮತ್‌ಕರ್ಗೋಳದಲ್ಲಿ ಮದನ್ ಮೋಹನ್ ಪರಿದಾ (45) ಆರೋಪಿ.
ಕಳೆದ 15 ವರ್ಷಗಳಿಂದ, ಪರಿದಾ ಗ್ರಾಮದಲ್ಲಿ ‘ಮುರಳಿ ಮನೋಹರ್ ಆಶ್ರಮ’ ನಡೆಸುತ್ತಿದ್ದು, ಆಶ್ರಮದಲ್ಲಿ ಅತ್ಯಾಚಾರ ನಡೆಸಿರುವುದಾಗಿ 35 ವರ್ಷದ ದೂರು ನೀಡಿದ್ದಾರೆ. ಆಶ್ರಮದಲ್ಲಿ ಹಲವು ಮಹಿಳೆಯರು ಇದ್ದರು. ಸಂತ್ರಸ್ತೆ ವಿಚ್ಛೇದಿತಳು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಭಾರೀ ಪ್ರತಿಭಟನೆಯಾದರೆ ಮಾತ್ರ ತ್ವರಿತ ವಿಚಾರಣೆಯೇ?!
ಆಗಸ್ಟ್ 4ರಂದು ಆಶ್ರಮದಲ್ಲಿ ಮಲಗಿದ್ದಾಗ ಪರಿದಾ ಮಹಿಳೆಯ ಕೋಣೆಗೆ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಾಗೆಯೇ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೂ ಮಹಿಳೆ ಇತರರಿಗೆ ಮತ್ತು ಗ್ರಾಮಸ್ಥರಿಗೆ ಅತ್ಯಾಚಾರ ಬಗ್ಗೆ ತಿಳಿಸಿದ್ದು, ಗ್ರಾಮಸ್ಥರು ಮಾತುಕತೆ ನಡೆಸಿ ಇತ್ಯರ್ಥಪಡಿಸಲು ಪ್ರಯತ್ನಿಸಿದರು. ಆದರೆ ಮಾತುಕತೆ ವಿಫಲವಾಗಿದೆ ಎಂದು ಹೇಳಲಾಗಿದೆ.
ಇದಾದ ಬಳಿಕ ಮಹಿಳೆ ಕಾಮಿಕ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಆಶ್ರಮದ ಸಿಬ್ಬಂದಿಯ ವಿಚಾರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪೊಲೀಸರು ಆಶ್ರಮವನ್ನು ಸಹ ಸೀಲ್ ಮಾಡಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
