ಮಹಿಳೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವ ಬಂಧನ

Date:

ಒಡಿಶಾದ ಮತ್‌ಕರ್ಗೋಳದಲ್ಲಿ ಆಶ್ರಮ ನಡೆಸುತ್ತಿದ್ದ ಸ್ವಯಂ ಘೋಷಿತ ದೇವಮಾನವನನ್ನು ಕಾಮಿಕ್ಯಾನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮತ್‌ಕರ್ಗೋಳದಲ್ಲಿ ಮದನ್ ಮೋಹನ್ ಪರಿದಾ (45) ಆರೋಪಿ.

- Advertisement -

ಕಳೆದ 15 ವರ್ಷಗಳಿಂದ, ಪರಿದಾ ಗ್ರಾಮದಲ್ಲಿ ‘ಮುರಳಿ ಮನೋಹರ್ ಆಶ್ರಮ’ ನಡೆಸುತ್ತಿದ್ದು, ಆಶ್ರಮದಲ್ಲಿ ಅತ್ಯಾಚಾರ ನಡೆಸಿರುವುದಾಗಿ 35 ವರ್ಷದ ದೂರು ನೀಡಿದ್ದಾರೆ. ಆಶ್ರಮದಲ್ಲಿ ಹಲವು ಮಹಿಳೆಯರು ಇದ್ದರು. ಸಂತ್ರಸ್ತೆ ವಿಚ್ಛೇದಿತಳು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಭಾರೀ ಪ್ರತಿಭಟನೆಯಾದರೆ ಮಾತ್ರ ತ್ವರಿತ ವಿಚಾರಣೆಯೇ?!

ಆಗಸ್ಟ್ 4ರಂದು ಆಶ್ರಮದಲ್ಲಿ ಮಲಗಿದ್ದಾಗ ಪರಿದಾ ಮಹಿಳೆಯ ಕೋಣೆಗೆ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಾಗೆಯೇ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೂ ಮಹಿಳೆ ಇತರರಿಗೆ ಮತ್ತು ಗ್ರಾಮಸ್ಥರಿಗೆ ಅತ್ಯಾಚಾರ ಬಗ್ಗೆ ತಿಳಿಸಿದ್ದು, ಗ್ರಾಮಸ್ಥರು ಮಾತುಕತೆ ನಡೆಸಿ ಇತ್ಯರ್ಥಪಡಿಸಲು ಪ್ರಯತ್ನಿಸಿದರು. ಆದರೆ ಮಾತುಕತೆ ವಿಫಲವಾಗಿದೆ ಎಂದು ಹೇಳಲಾಗಿದೆ.

ಇದಾದ ಬಳಿಕ ಮಹಿಳೆ ಕಾಮಿಕ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರು ಆಶ್ರಮದ ಸಿಬ್ಬಂದಿಯ ವಿಚಾರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪೊಲೀಸರು ಆಶ್ರಮವನ್ನು ಸಹ ಸೀಲ್ ಮಾಡಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...