ಬಿಜೆಪಿಯ ಮುಂದಾಳು, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನು ಓದಿದ್ದೀರಾ? ಆರೋಗ್ಯದಲ್ಲಿ ಏರುಪೇರು; ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು
ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ. ವಿನಿತ್ ಸೂರಿ ಅವರು ಅಡ್ವಾಣಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.
96 ವರ್ಷದ ಎಲ್‌ಕೆ ಅಡ್ವಾಣಿ ಅವರು ಈ ಹಿಂದೆಯೂ ಹಲವು ಬಾರಿ ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
