ಜೆಎಂಎಂ ಹಿರಿಯ ನಾಯಕ, ಜಾರ್ಖಂಡ್ ಸಚಿವ ಸುದಿವ್ಯ ಕುಮಾರ್ ಸೋನು ನಿಧನ

Date:

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಂಎಂ) ಹಿರಿಯ ನಾಯಕ, ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು (56) ಅವರು ಭಾನುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ಶನಿವಾರ ತಡರಾತ್ರಿ ಗಿರಿಡೀಹ್‌ನಲ್ಲಿರುವ ತಮ್ಮ ನಿವಾಸದಲ್ಲಿದ್ದಾಗ ಸುದಿವ್ಯ ಕುಮಾರ್ ಅವರಿಗೆ ಇದ್ದಕ್ಕಿದ್ದಂತೆ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸ್ಥಿತಿ ಗಂಭೀರವಾಗಿತ್ತು. ವೈದ್ಯರು ತುರ್ತು ಚಿಕಿತ್ಸೆ ನೀಡಲು ಯತ್ನಿಸಿದರಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇದನ್ನೂ ಓದಿ: ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ನಿಧನ

2019ರ ವಿಧಾನಸಭೆ ಚುನಾವಣೆಯಲ್ಲಿ ಗಿರಿಡೀಹ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಸುದಿವ್ಯ ಕುಮಾರ್, 2024ರ ಚುನಾವಣೆಯಲ್ಲೂ ಮರುಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಸಂಪುಟದಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ನಗರಾಭಿವೃದ್ಧಿ, ಪ್ರವಾಸೋದ್ಯಮ ಹಾಗೂ ಕ್ರೀಡಾ ಇಲಾಖೆಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಶಮನಗೊಳಿಸಲು ಸರ್ಕಾರ ರಚಿಸಿದ್ದ ಸಚಿವರ ಸಮಿತಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಸುದಿವ್ಯ ಕುಮಾರ್ ಸೋನು ನಿಧನಕ್ಕೆ ಗಣ್ಯರ ಸಂತಾಪ

ಸುದಿವ್ಯ ಕುಮಾರ್ ಸೋನು ಅವರ ಅಕಾಲಿಕ ಅಗಲಿಕೆಗೆ ಜಾರ್ಖಂಡ್ ರಾಜಕೀಯ ವಲಯ ತೀವ್ರ ಕಂಬನಿ ಮಿಡಿದಿದೆ. ಸಚಿವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, “ಸಹೋದರ ಸೋನು ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ಭರಿಸಲಾಗದ ನಷ್ಟ. ಅವರು ನನಗೆ ಬರಿ ರಾಜಕೀಯ ಸಹೋದ್ಯೋಗಿಯಷ್ಟೇ ಅಲ್ಲ, ಮಾರ್ಗದರ್ಶಕರಾಗಿದ್ದ ಹಿರಿಯ ಸಹೋದರನಂತಿದ್ದರು. ಪ್ರತ್ಯೇಕ ಜಾರ್ಖಂಡ್ ರಾಜ್ಯ ಹೋರಾಟದ ದಿನಗಳಿಂದಲೂ ಜೆಎಂಎಂ ಪಕ್ಷಕ್ಕಾಗಿ ಹಾಗೂ ರಾಜ್ಯದ ಹಕ್ಕುಗಳಿಗಾಗಿ ಶ್ರಮಿಸಿದ ಧೀರ ನಾಯಕ ಅವರಾಗಿದ್ದರು” ಎಂದು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ.

ಜೆಎಂಎಂ ಪಕ್ಷ, ರಾಜ್ಯದ ವಿವಿಧ ಸಚಿವರು ಮತ್ತು ವಿರೋಧ ಪಕ್ಷದ ನಾಯಕರು ಸುದಿವ್ಯ ಕುಮಾರ್ ಸೋನು ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...