ತಮಿಳುನಾಡು | ಸರ್ಕಾರ-ರಾಜ್ಯಪಾಲರ ನಡುವಿನ ತಿಕ್ಕಾಟಕ್ಕೆ ಕಾರಣವಾದ ಸೆಂಥಿಲ್‌ ಬಾಲಾಜಿ ಬಂಧನ

Date:

  • ಉದ್ಯೊಗ ಹಗರಣದಲ್ಲಿ ಮೇ 31 ರಂದು ಸೆಂಥಿಲ್‌ ಬಾಲಾಜಿ ಬಂಧನ
  • ಜೂನ್‌ 23 ರಂದು ಸೆಂಥಿಲ್‌ರನ್ನು ಹಾಜರುಪಡಿಸುವಂತೆ ಸೂಚನೆ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧನ ಹಾಗೂ ಸಚಿವರಾಗಿ ಮುಂದುವರಿಯುವ ವಿಚಾರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ಅವರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.

- Advertisement -

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಸೆಂಥಿಲ್‌ ಅವರ ಖಾತೆಗಳ ಮರುಹಂಚಿಕೆ ಕುರಿತು ಗುರುವಾರ (ಜೂನ್‌ 15) ಆರ್‌.ಎನ್‌.ರವಿ ಅವರಿಗೆ ಶಿಫಾರಸು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಸೆಂಥಿಲ್‌ ಬಾಲಾಜಿ ಅವರು ಅಪರಾಧ ಮೊಕದ್ದಮೆಗಳನ್ನು ಎದುರಿಸುತ್ತಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವುದರಿಂದ ಇನ್ನು ಮುಂದೆ ಸಂಪುಟದ ಸಚಿವರಾಗಿ ಮುಂದುವರಿಯಲು ರಾಜ್ಯಪಾಲ ರವಿಯವರು ಒಪ್ಪಿಗೆ ನೀಡಿಲ್ಲ” ಎಂದು ರಾಜಭವನ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಇದಕ್ಕೆ ಕಿಡಿಕಾರಿರುವ ಡಿಎಂಕೆ, “ರಾಜ್ಯಪಾಲ ರವಿ ಅವರು ಬಿಜೆಪಿಯ ಒಬ್ಬ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿದೆ.

“ವಿದ್ಯುತ್, ಇಂಧನ ಅಭಿವೃದ್ಧಿ ಖಾತೆಗಳನ್ನು ಹಣಕಾಸು ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ತಂಗಂ ತೆನ್ನರಸು ಮತ್ತು ಅಬಕಾರಿ ಇಲಾಖೆಯನ್ನು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್‌.ಮುತ್ತುಸ್ವಾಮಿ ಅವರಿಗೆ ಮರು ಹಂಚಿಕೆ ಮಾಡುವ ಮುಖ್ಯಮಂತ್ರಿ ಶಿಫಾರಸನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

ಸ್ಟಾಲಿನ್‌ ಸರ್ಕಾರ ಕಳುಹಿಸಿದ ಅನೇಕ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲ ರವಿ ಅವರು ವಿಳಂಬ ಮಾಡುತ್ತಿರುವುದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಆಂತರಿಕ ತಿಕ್ಕಾಟಕ್ಕೆ ಕಾರಣವಾಗಿದೆ.

ಸೆಂಥಿಲ್‌ ಅವರನ್ನು ಉದ್ಯೋಗ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮೇ 31 ರಂದು ಬಂಧಿಸಿದೆ. ಸೆಂಥಿಲ್‌ ಅವರನ್ನು ಜೂನ್‌ 28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಆರೋಪಿಯೊಂದಿಗೆ ರಾಜಿಗೆ ಮುಂದಾದ ಗುಜರಾತ್‌ ಹೈಕೋರ್ಟ್‌ ನ್ಯಾಯಾಧೀಶ

ಸೆಂಥಿಲ್ ಬಾಲಾಜಿ ಅವರು ಸದ್ಯ ಶಸ್ತ್ರಚಿಕಿತ್ಸೆ ಸಂಬಂಧ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿಯೇ ಸೆಂಥಿಲ್‌ ವಿಚಾರಣೆ ನಡೆಸಲು ಚೆನ್ನೈ ನ್ಯಾಯಾಲಯ 8 ದಿನಗಳ ಕಾಲಾವಕಾಶ ನೀಡಿದೆ.

ಸೆಂಥಿಲ್‌ ಅವರನ್ನು ಜೂನ್‌ 23 ರಂದು ಹಾಜರುಪಡಿಸಲು ನ್ಯಾಯಾಲಯ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...