ಉತ್ತರ ಪ್ರದೇಶ | 14 ತಿಂಗಳಲ್ಲಿ ಒಂಬತ್ತು ಮಹಿಳೆಯರ ಕೊಂದ ‘ಸರಣಿ ಹಂತಕ’ ಬಂಧನ

Date:

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರನ್ನು ಕೊಂದ ‘ಸರಣಿ ಹಂತಕ’ ಕುಲದೀಪ್‌ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

- Advertisement -

ಕಳೆದ ವರ್ಷದಲ್ಲಿ ಶಾಹಿ-ಶೀಶ್‌ಗಢ ಪ್ರದೇಶದಲ್ಲಿ ಒಂಬತ್ತು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಈ ಅಪರಾಧಗಳ ಹಿಂದೆ ಓರ್ವ ವ್ಯಕ್ತಿಯೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು. ಈ ಮಹಿಳೆಯರೆಲ್ಲರು ಧರಿಸಿದ ಸೀರೆ ಅಥವಾ ಬಟ್ಟೆಯಿಂದಲೇ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಉತ್ತರ ಪ್ರದೇಶ

ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳನ್ನು ಒಳಗೊಂಡ 25 ಕಿಮೀ ವ್ಯಾಪ್ತಿಯಲ್ಲಿ ಈ ಘಟನೆಗಳು ಸಂಭವಿಸಿವೆ. ಮೃತರು 45ರಿಂದ 55 ವರ್ಷ ವಯಸ್ಸಿನವರಾಗಿದ್ದು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಇದನ್ನು ಓದಿದ್ದೀರಾ? 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಸರಣಿ ಕೊಲೆ ಶಂಕೆ

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಪೊಲೀಸರು, “ಉತ್ತರ ಪ್ರದೇಶದ ಬರೇಲಿಯ ನಿವಾಸಿ ಕುಲದೀಪ್ 2014ರಲ್ಲಿ ವಿವಾಹವಾಗಿದ್ದು, ಆತನ ನಡವಳಿಕೆಯಿಂದ ಬೇಸತ್ತ ಪತ್ನಿ ಆತನನ್ನು ತೊರೆದಿದ್ದಳು. ಅದರಿಂದಾಗಿ ಆತನಿಗೆ ಮಹಿಳೆಯರ ಮೇಲೆ ದ್ವೇಷದ ಭಾವನೆ ಬೆಳೆದಿದೆ. ಬಳಿಕ ಮಹಿಳೆಯರ ಕೊಲೆ ಮಾಡಲು ಆರಂಭಿಸಿದ” ಎಂದು ತಿಳಿಸಿದ್ದಾರೆ.

“ನಿರ್ಜನ ಸ್ಥಳಗಳಲ್ಲಿ ಇರುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಸಂಪರ್ಕಕ್ಕೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದ. ಮಹಿಳೆಯರು ನಿರಾಕರಿಸಿದಾಗ ಅವರ ಮೇಲೆ ಆಕ್ರೋಶಗೊಂಡು ಅವರ ಸೀರೆಗಳನ್ನು ಬಳಸಿ ಕತ್ತು ಹಿಸುಕಿ ಕೊಲ್ಲುತ್ತಿದ್ದ. ಕೊಲೆಯ ನಂತರ, ಸಂತ್ರಸ್ತರ ಲಿಪ್‌ಸ್ಟಿಕ್, ಬಿಂದಿ, ಸೀರೆಯ ತುಂಡು, ಕುಪ್ಪಸದ ತುಂಡನ್ನು ಇಟ್ಟುಕೊಳ್ಳುತ್ತಿದ್ದ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...