ದಟ್ಟ ಮಂಜಿನಿಂದ ಸರಣಿ ಅಪಘಾತ; ಹೊತ್ತಿ ಉರಿದ 7 ಬಸ್‌ಗಳು

Date:

ದಟ್ಟ ಮಂಜು ಆವರಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, 7 ಬಸ್‌ಗಳು ಮತ್ತು ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳವಾರ ಮುಂಜಾನೆ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದ ನಂತರ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ, ಮೃತರ ದೇಹಗಳು ಸುಟ್ಟು ಕರಕಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಾಲ್ಡಿಯೊ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲಿಗಲ್ಲು 127ರ ಬಳಿ ಬೆಳಿಗ್ಗೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಭಾರೀ ಮಂಜು ಮತ್ತು ಕಡಿಮೆ ಗೋಚರತೆಯಿಂದಾಗಿ ಹಲವಾರು ವಾಹನಗಳು ಡಿಕ್ಕಿಹೊಡೆದುಕೊಂಡಿದ್ದು, ಜಖಂಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ವಿವರಿಸಿರುವ ಮಥುರಾ ಎಸ್‌ಎಸ್‌ಪಿ ಶ್ಲೋಕ್ ಕುಮಾರ್, “ದಟ್ಟವಾದ ಮಂಜಿನಿಂದಾಗಿ ಪರಿಪೂರ್ಣವಾಗಿ ರಸ್ತೆ ಗೋಚರಿಸದ ಕಾರಣ, ಎದುರಿದ್ದ ವಾಹನಗಳು ಕಾಣದೆ, ವಾಹನಗಳು ಡಿಕ್ಕಿಹೊಡೆದುಕೊಂಡು ಅಪಘಾತ ಸಂಭವಿಸಿದೆ. ಸುಮಾರು ಏಳು ಬಸ್‌ಗಳು ಮತ್ತು ಮೂರು ಸಣ್ಣ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯ ಆಡಳಿತ ಮತ್ತು ತುರ್ತು ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯ ನಡೆಸಿವೆ” ಎಂದು ಹೇಳಿದ್ದಾರೆ.

“ಇಲ್ಲಿಯವರೆಗೆ, ನಾಲ್ಕು ಸಾವುಗಳು ದೃಢಪಟ್ಟಿವೆ. ಸುಮಾರು 25 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಎಕ್ಸ್‌ಪ್ರೆಸ್‌ವೇಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ವಾಹಸ ಸಂಚಾರವನ್ನು ಪುನರಾರಂಭಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಮಥುರಾ ಗ್ರಾಮೀಣ ಎಸ್‌ಪಿ ಸುರೇಶ್ ಚಂದ್ರ ರಾವತ್ ಹೇಳುವಂತೆ, “ಮೊದಲು ಮೂರು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ನಂತರ ಏಳು ಬಸ್‌ಗಳು ಅಪಘಾತಕ್ಕೀಡಾಗಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿವೆ. ಎಲ್ಲ ಬಸ್‌ಗಳು ಬೆಂಕಿಗೆ ಆಹುತಿಯಾಗಿವೆ. ಹನ್ನೊಂದು ಅಗ್ನಿಶಾಮಕ ದಳಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

ಇದೇ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬನಾರ್ಸಿ ಗ್ರಾಮದ ಬಳಿ ಏಳರಿಂದ ಎಂಟು ವಾಹನಗಳನ್ನು ಒಳಗೊಂಡ ಮತ್ತೊಂದು ಅಪಘಾತ ವರದಿಯಾಗಿದೆ. ಆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳು ವರದಿಯಾಗಿಲ್ಲ. ಅಲ್ಲದೆ, ದೆಹಲಿ-ಆಲ್ವಾರ್ ರಸ್ತೆಯಲ್ಲಿ ಘಾಸೇಡಾ ಗ್ರಾಮದ ಬಳಿ ಹರಿಯಾಣ ರೋಡ್‌ವೇಸ್ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಯಾವುದೇ ಹಾನಿ ಸಂಭವಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಕಾಲಿಗೆ ಗುಂಡೇಟು; ಸಚಿವನ ವಿಕೃತ ಹೇಳಿಕೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ಭೀಕರ ದೌರ್ಜನ್ಯ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ...