ಕೋವಿಡ್‌ ವೇಳೆ ಬಿಜೆಪಿಗೆ ₹52 ಕೋಟಿ ನೀಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಅದಾರ್‌ ಪೂನಾವಾಲ: ವರದಿ

Date:

ಮೊದಲ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ‘ಕೋವಿಶೀಲ್ಡ್ ಲಸಿಕೆ’ಯನ್ನು ಬಿಡುಗಡೆ ಮಾಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್‌ ಪೂನಾವಾಲ ಅವರು ಬಿಜೆಪಿಗೆ ಎಲೆಕ್ಟೋರಲ್ ಬಾಂಡ್‌ನ ಮೂಲಕ ಸುಮಾರು ₹52 ಕೋಟಿ ನೀಡಿರುವುದಾಗಿ ವರದಿಯಾಗಿದೆ.

- Advertisement -

ಈ ಬಗ್ಗೆ ವರದಿ ಪ್ರಕಟಿಸಿರುವ ರಾಯಿಟರ್ಸ್ ಸುದ್ದಿ ಸಂಸ್ಥೆ ಪ್ರಕಾರ, ಈ ಭಾರೀ ಮೊತ್ತದ ಹಣವನ್ನು ಬಿಜೆಪಿಗೆ ದೇಣಿಗೆ ರೂಪದಲ್ಲಿ ನೀಡಲಾಗಿದೆ. 2022ರ ಆಗಸ್ಟ್‌ನ ಒಂದೇ ತಿಂಗಳಲ್ಲಿ ಈ ಗಮನಾರ್ಹ ದೇಣಿಗೆ ನೀಡಿದೆ ಎಂದು ವರದಿಯಾಗಿದೆ. 48 ಗಂಟೆಗಳಲ್ಲಿ 50 ಕೋಟಿ ದೇಣಿಗೆ ನೀಡಿದ್ದರೆ, ಉಳಿದ ಎರಡು ಕೋಟಿ ಮೊತ್ತವನ್ನು ಮುಂದಿನ 15 ದಿನಗಳ ಅವಧಿಯಲ್ಲಿ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಕಮಿಷನ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಗಳನ್ನು ಪರಿಶೀಲಿಸಿದ ನಂತರ ಈ ಮಾಹಿತಿಯನ್ನು ರಾಯಿಟರ್ಸ್ ಬಹಿರಂಗಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಆಗಸ್ಟ್ 2022 ರಲ್ಲಿ, ಔಷಧೀಯ ಕಂಪನಿಯಾದ ಸೀರಮ್ ಮೂರು ಕಂತುಗಳಲ್ಲಿ ಒಟ್ಟು 52.5 ಕೋಟಿಯನ್ನು ಪುಡೆಂಟ್ ಟ್ರಸ್ಟ್‌ಗೆ ವರ್ಗಾಯಿಸಿತ್ತು. ಆಗಸ್ಟ್ 1 ರಂದು 40 ಕೋಟಿ, ಆಗಸ್ಟ್ 2ರಂದು 10 ಕೋಟಿ ಮತ್ತು ಆಗಸ್ಟ್ 17 ರಂದು 2.5 ಕೋಟಿಯಷ್ಟು ಮೊತ್ತವನ್ನು ಪುಡೆಂಟ್ ಟ್ರಸ್ಟ್ ಮುಖಾಂತರ ಬಿಜೆಪಿಗೆ ದೇಣಿಗೆ ರೂಪದಲ್ಲಿ ವರ್ಗಾಯಿಸಿತ್ತು” ಎಂದು ತಿಳಿಸಿದೆ.

Advertisements

ಕೋವಿಡ್‌ನ ಸಂದರ್ಭದಲ್ಲಿ ಲಸಿಕೆ ತಯಾರಿಸುವಂತೆ ಸೀರಮ್ ಇನ್‌ಸ್ಟಿಟ್ಯೂಟ್‌ಗೆ ಕೇಂದ್ರ ಸರ್ಕಾರವು ಏಕಸ್ವಾಮ್ಯ ಹಕ್ಕು ನೀಡಿತ್ತು. ಯಾವುದೇ ಇತರ ಕಂಪನಿ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಲಸಿಕೆಗಳನ್ನು ತಯಾರಿಸಲು ಅನುಮತಿಸಿರಲಿಲ್ಲ. ಇದಕ್ಕೆ ಪ್ರತಿಯಾಗಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕೂಡ ಬಿಜೆಪಿಗೆ ₹52 ಕೋಟಿ ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.

2011 ರಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್‌ನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಅದಾರ್ ಪೂನಾವಾಲ್ಲಾ ಅವರು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚು ಸುದ್ದಿಯಲ್ಲಿದ್ದರು. ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ್ದ ಸೀರಮ್ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಿದರು. ಇದನ್ನು ಕೇಂದ್ರ ಸರ್ಕಾರವು ಲಕ್ಷಾಂತರ ಜನರಿಗೆ ವಿತರಿಸಿತ್ತು.

ಚುನಾವಣಾ ಬಾಂಡ್

ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್​ ಐತಿಹಾಸಿಕ ತೀರ್ಪು ನೀಡಿತ್ತು. ಮಾರ್ಚ್ 13ರೊಳಗೆ ದೇಣಿಗೆಯ ವಿವರಗಳನ್ನು ಸಾರ್ವಜನಿಕಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. 2017ರಲ್ಲಿ ನರೇಂದ್ರ ಮೋದಿ ಸರ್ಕಾರ ತಂದಿದ್ದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್​ ಚಾಟಿ ಬಳಿಕ ಎಚ್ಚೆತ್ತುಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಭಾರತೀಯ ಚುನಾವಣಾ ಆಯೋಗಕ್ಕೆ ಎಲ್ಲ ಚುನಾವಣಾ ಬಾಂಡ್​ಗಳ ಡೇಟಾವನ್ನು ಸಲ್ಲಿಸಿದೆ. ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್ 15ರಂದು ಸಾರ್ವಜನಿಕರಿಗಾಗಿ ಪ್ರಕಟಿಸುವ ನಿರೀಕ್ಷೆ ಇದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...