ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಪಂಜಾಬ್‌ನಲ್ಲಿ ಆಪ್‌ಗೆ ಇಬ್ಬರು ಶಾಸಕರ ರಾಜೀನಾಮೆ

Date:

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನವೇ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಹಿನ್ನಡೆಯಾಗಿದೆ. ಸನೌರ್ ಕ್ಷೇತ್ರದ ಶಾಸಕ ಹರ್ಮೀತ್ ಸಿಂಗ್ ಪಠಾಣ್‌ಮಜ್ರಾ ಹಾಗೂ ಸಮಾನಾ ಕ್ಷೇತ್ರದ ಶಾಸಕ ಚೇತನ್ ಸಿಂಗ್ ಜೌರಮಜ್ರಾ ಅವರು ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

- Advertisement -

​ಮುಂಬರುವ ವಿಧಾನಸಭಾ ಚುನಾವಣೆಗೆ ಎಎಪಿ ಶನಿವಾರವಷ್ಟೇ 40 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಈ ಇಬ್ಬರು ಹಾಲಿ ಶಾಸಕರು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರಲಿಲ್ಲ. ಟಿಕೆಟ್ ಕೈತಪ್ಪುವ ಸ್ಪಷ್ಟ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಶಾಸಕರು ಇದೀಗ ಪಕ್ಷದಿಂದ ಹೊರಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

​ಮಾಜಿ ಸಚಿವರೂ ಆಗಿರುವ ಚೇತನ್ ಸಿಂಗ್ ಜೌರಮಜ್ರಾ ಅವರು ಪಂಜಾಬ್ ಆಪ್ ಅಧ್ಯಕ್ಷ ಅಮನ್ ಅರೋರಾ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದು, ಸಾಮಾಜಿಕ ಜಾಲತಾಣದ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಇವರ ಸಮಾನಾ ಕ್ಷೇತ್ರಕ್ಕೆ ಕಳೆದ ಸೆಪ್ಟೆಂಬರ್‌ನಲ್ಲಿ ಮಾಜಿ ಸಚಿವ ಸುರ್ಜಿತ್ ಸಿಂಗ್ ರಖ್ರಾ ಅವರನ್ನು ಪಕ್ಷದ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಮುಂಬರುವ ಚುನಾವಣೆಯಲ್ಲಿ ರಖ್ರಾ ಅವರೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗುವ ಸಾಧ್ಯತೆಗಳಿದ್ದವು.

Advertisements

​ಮತ್ತೊಂದೆಡೆ, ಸನೌರ್ ಶಾಸಕ ಹರ್ಮೀತ್ ಸಿಂಗ್ ಪಠಾಣ್‌ಮಜ್ರಾ ಅವರು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪಕ್ಷದ ನಾಯಕತ್ವ ಹಾಗೂ ಸರ್ಕಾರದ ಕಾರ್ಯವೈಖರಿಯ ವಿರುದ್ಧ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಾ, ಘರ್ಷಣೆಯ ಹಾದಿ ಹಿಡಿದಿದ್ದರು.

​ಪಠಾಣ್‌ಮಜ್ರಾ ವಿರುದ್ಧ ಕಳೆದ ವರ್ಷ ಜೀರಕ್‌ಪುರದಲ್ಲಿ ಅತ್ಯಾಚಾರ ಪ್ರಕರಣವೊಂದು ದಾಖಲಾಗಿತ್ತು. ತಾನು ವಿಚ್ಛೇದನ ಪಡೆದಿರುವುದಾಗಿ ನಂಬಿಸಿ 2021ರಲ್ಲಿ ಮಹಿಳೆಯೊಬ್ಬರನ್ನು ವಿವಾಹವಾದ ಆರೋಪ ಇವರ ಮೇಲಿತ್ತು. ಈ ಪ್ರಕರಣದಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಇವರನ್ನು ಆರು ತಿಂಗಳ ಬಳಿಕ ಮಾರ್ಚ್‌ನಲ್ಲಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು. ನಂತರ, ಮೇ ತಿಂಗಳಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಡಧ್ವಜ ಅಧಿಕೃತಗೊಳಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ಕನ್ನಡಿಗರ ಭಾವನೆಯ ಹೆಗ್ಗುರುತಾಗಿರುವ ಹಳದಿ-ಕೆಂಪು ಬಾವುಟ. ಈ ನಾಡಧ್ವಜಕ್ಕೆ ಅಧಿಕೃತ ಮಾನ್ಯತೆ...

‘ಇಂಡಿಯಾ’ ಒಕ್ಕೂಟದ ರ‍್ಯಾಲಿಯಿಂದ ಸಿಜೆಪಿ ಅಂತರ: ನಾವು ತಟಸ್ಥ ಎಂದ ದೀಪ್ಕೆ

​'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತೃಣಮೂಲ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ ನಕ್ಷೆಯನ್ನೇ ಬದಲಿಸಿದ ಐತಿಹಾಸಿಕ ದಿನ!

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ...

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...