ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: 2ನೇ ಮರಣೋತ್ತರ ಪರೀಕ್ಷೆಗೆ ಕೋರ್ಟ್ ನಕಾರ

Date:

ನಿವೃತ್ತ ನ್ಯಾಯಾಧೀಶರ ಸೊಸೆ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ಹಿನ್ನಡೆಯಾಗಿದ್ದು, ಎರಡನೇ ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಲು ಭೋಪಾಲ್ ನ್ಯಾಯಾಲಯ ನಿರಾಕರಿಸಿದೆ. ಆದರೆ, ಮೃತದೇಹವನ್ನು ಸಂರಕ್ಷಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಈ ನಡುವೆ, ತ್ವಿಶಾ ಕುಟುಂಬಸ್ಥರು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಖುದ್ದಾಗಿ ಭೇಟಿಯಾಗಿ ನ್ಯಾಯಕ್ಕಾಗಿ ಆಗ್ರಹಿಸಿ ಮಾತುಕತೆ ನಡೆಸಿದ್ದಾರೆ. ಮರು ಮರಣೋತ್ತರ ಪರೀಕ್ಷೆ ಹಾಗೂ ಶವ ಸಂರಕ್ಷಣೆಗೆ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಭಾಗಶಃ ಮಾತ್ರ ಅಂಗೀಕರಿಸಿದೆ ಎಂದು ಕುಟುಂಬದ ಪರ ವಕೀಲ ಅಂಕುರ್ ಪಾಂಡೆ ತಿಳಿಸಿದ್ದಾರೆ.

- Advertisement -

​ಕಳೆದ ಮೇ 12ರಂದು ತ್ವಿಶಾ ಶರ್ಮಾ ಅವರು ಭೋಪಾಲ್‌ನಲ್ಲಿರುವ ತಮ್ಮ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರ ಮೊದಲ ಮರಣೋತ್ತರ ಪರೀಕ್ಷೆಯನ್ನು ಭೋಪಾಲ್‌ನ ಏಮ್ಸ್ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವಿಗೆ ಪ್ರಚೋದನೆ ನೀಡಿದ ಗಂಭೀರ ಆರೋಪದ ಮೇಲೆ ತ್ವಿಶಾ ಪತಿ ಸಮರ್ಥ್ ಸಿಂಗ್ ಹಾಗೂ ಅತ್ತೆ ಗಿರಿಬಾಲಾ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಪ್ರಕರಣದ ಕುರಿತು ವಿಶೇಷ ತನಿಖಾ ದಳ (ಎಸ್‌ಐಟಿ) ಕೂಲಂಕಷವಾಗಿ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಜಿಮ್ನಾಸ್ಟಿಕ್ ಹಗ್ಗದ ಕುಣಿಕೆ, ದೇಹದ ಮೇಲೆ ಗಾಯದ ಗುರುತು: ತ್ವಿಶಾ ಸಾವಿನ ಸುತ್ತ ಅನುಮಾನದ ಹುತ್ತ

​ಮೂಲತಃ ನೋಯ್ಡಾದವರಾದ ತ್ವಿಶಾ ಕುಟುಂಬವು ಪೊಲೀಸ್ ತನಿಖೆಯಲ್ಲಿ ಭಾರಿ ಲೋಪವಾಗಿದೆ ಎಂದು ಆರೋಪಿಸಿದ್ದು, ಸ್ವತಂತ್ರ ವೈದ್ಯಕೀಯ ಮಂಡಳಿಯಿಂದ ಹೊಸದಾಗಿ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಪಟ್ಟು ಹಿಡಿದಿತ್ತು. ಮೊದಲ ಪರೀಕ್ಷೆ ವೇಳೆ ನೇಣಿಗೆ ಬಳಸಿದ ವಸ್ತುವನ್ನು ಒದಗಿಸಿಲ್ಲ ಮತ್ತು ಎಫ್‌ಐಆರ್ ದಾಖಲಿಸುವಲ್ಲಿ ಪೊಲೀಸರು ಉದ್ದೇಶಪೂರ್ವಕ ವಿಳಂಬ ಮಾಡಿದ್ದಾರೆ ಎಂದು ತ್ವಿಶಾ ತಂದೆ ನವನಿಧಿ ಶರ್ಮಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಣಿನ ವಸ್ತುವನ್ನು ಪರಿಶೀಲಿಸದೆಯೇ ಮರಣೋತ್ತರ ವರದಿ ಬಿಡುಗಡೆ ಮಾಡಲಾಗಿದ್ದು, ಸಾಕ್ಷ್ಯ ನಾಶದ ಪ್ರಯತ್ನ ನಡೆದಿದೆ ಎಂದು ಅವರು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...