ಪಹಲ್ಗಾಮ್ ದಾಳಿಗೆ ಪ್ರತಿರೋಧವಾಗಿ ಭಾರತ ಆಪರೇಷನ್ ಸಿಂಧೂರ ಆರಂಭಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರತಿದಾಳಿ ನಡೆಸಿದ್ದು ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು ಪ್ರವಾಸಿಗರು ಸೇರಿದಂತೆ ಒಟ್ಟು 26 ಮಂದಿಯ ಕೊಲೆಯಾಗಿದೆ. ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ನಡೆಸಿದ ಈ ದಾಳಿಯಗೆ ಪ್ರತಿರೋಧವಾಗಿ ಭಾರತ ಈಗ ಆಪರೇಷನ್ ಸಿಂಧೂರ ನಡೆಸಿದೆ.
ಇದನ್ನು ಓದಿದ್ದೀರಾ? BREAKING NEWS | ಆಪರೇಷನ್ ಸಿಂಧೂರ: ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳ ಪತನ
ಆಪರೇಷನ್ ಸಿಂಧೂರ ನಡೆಸಿ ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂಬ ವರದಿಯಿದೆ.
ಇದೀಗ ಪಾಕಿಸ್ತಾನದ ಸೇನೆಯು ಜಮ್ಮು ಕಾಶ್ಮೀರದ ಗಡಿರೇಖೆಯಲ್ಲಿ ದಾಳಿ ನಡೆಸಿದ್ದು ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ನಾಗರಿಕರೂ ಸೇರಿದ್ದಾರೆ ಎಂದು ವರದಿಯಾಗಿದೆ.
