ಹರಿಯಾಣ | ಕಾರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

Date:

ಉತ್ತರಾಖಂಡ ಮೂಲದ ಒಂದೇ ಕುಟುಂಬದ ಏಳು ಮಂದಿಯ ಮೃತದೇಹವು ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

- Advertisement -

ಸುಮಾರು 12-13 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕಿಯರು, ಅವರ 14 ವರ್ಷ ವಯಸ್ಸಿನ ಸಹೋದರ, ಬಾಲಕಿಯರ ಪೋಷಕರು, ಅಜ್ಜ-ಅಜ್ಜಿ ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಕಾರಿನಲ್ಲಿ ಐವರ ಮೃತದೇಹ ಪತ್ತೆ; ಸಾಮೂಹಿಕ ಆತ್ಮಹತ್ಯೆ ಶಂಕೆ!

ಈ ಹಿಂದೆ ಕುಟುಂಬವು ಚಂಡೀಗಢದಲ್ಲಿ ವಾಸಿಸುತ್ತಿತ್ತು. ಇದೀಗ ಪಂಚಕುಲದಲ್ಲಿ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ ಎಂದು ಎಸಿಪಿ (ಪ್ರಧಾನ ಕಚೇರಿ) ವಿಕ್ರಮ್ ನೆಹ್ರಾ ಹೇಳಿದ್ದಾರೆ.

ಕಾರಿನ ‘ವಿಂಡ್ ಷೀಲ್ಡ್’ ಮರೆ ಮಾಚಲಾಗಿತ್ತು. ಇದು ವಿಚಿತ್ರವಾಗಿ ಕಂಡ ಕಾರಣ ವ್ಯಕ್ತಿಯೊಬ್ಬರು ಕಾರನ್ನು ಪರಿಶೀಲಿಸಿದ್ದಾರೆ. ಈ ವೇಳೆ ಕಾರಿನಲ್ಲಿ ಏಳು ಮಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಮಕ್ಕಳ ತಂದೆ ಮಾತ್ರ ಉಸಿರಾಡುತ್ತಿದ್ದರು. ಆದರೆ ಚಿಕಿತ್ಸೆಯ ಸಮಯದಲ್ಲಿ ಅವರೂ ಮೃತಪಟ್ಟಿದ್ದಾರೆ. ಸದ್ಯ ಲುಧಿಯಾನದಲ್ಲಿರುವ ಈ ಕುಟುಂಬದ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಪ್ರಕರಣವನ್ನು ಎಲ್ಲಾ ದೃಷ್ಟಿಕೋನಗಳಿಂದ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಚಂಡಿಮಂದಿರ್ ಠಾಣಾ ಅಧಿಕಾರಿ ರಾಮ್‌ಪಾಲ್ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಕುಟುಂಬಸ್ಥ ರಾಕೇಶ್ ಗುಪ್ತಾ, “ಅವರು ಸಾಲ ಪಡೆದಿರಬಹುದು. ಭಾಗೇಶ್ವರ ಧಾಮಕ್ಕೆ ಭೇಟಿ ನೀಡಲು ಅವರು ಬಂದಿದ್ದರು ಎಂದು ಪೊಲೀಸರು ನಮಗೆ ತಿಳಿಸಿದ್ದಾರೆ. ಕುಟುಂಬದಲ್ಲಿ ಕೊಂಚ ಸಮಸ್ಯೆ ಇತ್ತು. ಆದರೆ ನಾವು ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತಿದ್ದೆವು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...