ಹಾರುತ್ತಿರುವಾಗಲೇ ದಿಢೀರ್ 300 ಅಡಿ ಕುಸಿದ ಏರ್ ಇಂಡಿಯಾ ವಿಮಾನ: 12 ಪ್ರಯಾಣಿಕರಿಗೆ ಗಾಯ

Date:

ಥಾಯ್ಲೆಂಡ್‌ನ ಫುಕೆಟ್‌ನಿಂದ ನವದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಸೋಮವಾರ ಮಾರ್ಗಮಧ್ಯೆ ತೀವ್ರ ಹವಾಮಾನ ವೈಪರೀತ್ಯಕ್ಕೆ (Turbulence) ಸಿಲುಕಿದ್ದು, ಕನಿಷ್ಠ 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಆಕಾಶದಲ್ಲಿ ಹಾರಾಡುತ್ತಿದ್ದ ವಿಮಾನವು ಏಕಾಏಕಿ ಸುಮಾರು 300 ಅಡಿಯಷ್ಟು ಕೆಳಕ್ಕೆ ಕುಸಿದ ಪರಿಣಾಮ ವಿಮಾನದಲ್ಲಿ ತೀವ್ರ ಏರುಪೇರು ಉಂಟಾಗಿ ಈ ಅವಘಡ ಸಂಭವಿಸಿದೆ.

- Advertisement -

ಏರ್ ಇಂಡಿಯಾ ವಿಮಾನವು (AI2379) ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಕೆಳಗಿಳಿದಿದ್ದಾರೆ. ವಿಮಾನ ಏಕಾಏಕಿ ಕುಸಿದಾಗ ಸಣ್ಣಪುಟ್ಟ ಗಾಯಗಳಾಗಿದ್ದ 12 ಮಂದಿ ಪ್ರಯಾಣಿಕರನ್ನು ತಕ್ಷಣವೇ ವಿಮಾನ ನಿಲ್ದಾಣದಲ್ಲಿರುವ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಘಟನೆ ಕುರಿತು ಏರ್ ಇಂಡಿಯಾ ಸಂಸ್ಥೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. “ನಮ್ಮ ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಏರ್ ಇಂಡಿಯಾ ಯಾವಾಗಲೂ ಅತ್ಯುನ್ನತ ಆದ್ಯತೆ ನೀಡುತ್ತದೆ. ಘಟನೆಯಿಂದ ತೊಂದರೆಗೊಳಗಾದವರಿಗೆ ಅಗತ್ಯವಿರುವ ಎಲ್ಲಾ ನೆರವನ್ನು ನಾವು ಒದಗಿಸುತ್ತಿದ್ದೇವೆ. ಅಲ್ಲದೆ, ಈ ಘಟನೆಯ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ” ಎಂದು ಏರ್ ಇಂಡಿಯಾ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...