ಶಾಲೆಯಲ್ಲಿ ಲೈಂಗಿಕ ಶಿಕ್ಷಣ | ಸಂಸ್ಕೃತಿಗೆ ಮಾರಕ ಎಂದಿದ್ದ ಬಿಜೆಪಿಯೇ ಸುಪ್ರೀಂ ಕೋರ್ಟ್‌ಗೆ ಅರಿಕೆ

Date:

ಭಾರತದಲ್ಲಿ ದಶಕಗಳಿಂದ ಲೈಂಗಿಕ ಶಿಕ್ಷಣದ ಸುತ್ತ ಇದ್ದ ತಡೆಯೊಡ್ಡುವಿಕೆ (Taboo) ಅಂತ್ಯವಾಗುವ ಲಕ್ಷಣಗಳು ಕಾಣಿಸುತ್ತಿವೆ. ಇನ್ನು ಮುಂದೆ ಲೈಂಗಿಕ ಶಿಕ್ಷಣವು ಶಾಲಾ ಪಠ್ಯಕ್ರಮದ ಅವಿಭಾಜ್ಯ ಅಂಗವಾಗಲಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ರಾಷ್ಟ್ರೀಯ ತಜ್ಞರ ಸಮಿತಿಯ ಶಿಫಾರಸಿನಂತೆ ಶಾಲೆ ಮತ್ತು ಕಾಲೇಜುಗಳಲ್ಲಿ “ಸಮಗ್ರ ಲೈಂಗಿಕ ಶಿಕ್ಷಣ” (Comprehensive Sex Education)ವನ್ನು ಪರಿಚಯಿಸಲು ತಾವು ಸಿದ್ಧರಿರುವುದಾಗಿ ತಿಳಿಸಿದೆ.

- Advertisement -

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹದೇವನ್ ಅವರಿದ್ದ ಪೀಠದ ಮುಂದೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು, ತಜ್ಞರ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಈಗಾಗಲೇ ಒಪ್ಪಿಕೊಂಡಿದ್ದು, ನ್ಯಾಯಾಲಯದ ಅಂತಿಮ ಅನುಮೋದನೆ ದೊರೆತ ತಕ್ಷಣವೇ ದೇಶಾದ್ಯಂತ ಇದನ್ನು ಜಾರಿಗೆ ತರಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಪೋಕ್ಸೊ (POCSO) ಕಾಯ್ದೆಯಡಿ ಅಪ್ರಾಪ್ತ ವಯಸ್ಕರ ಗರ್ಭಧಾರಣೆ ಮತ್ತು ಹದಿಹರೆಯದವರ ಪ್ರಣಯ ಪ್ರಕರಣಗಳನ್ನು ಕ್ರಿಮಿನಲ್ ಅಪರಾಧಗಳೆಂದು ಪರಿಗಣಿಸುತ್ತಿರುವ ಇಂದಿನ ಸನ್ನಿವೇಶದಲ್ಲಿ, ಇಂತಹ ಪ್ರಕರಣಗಳನ್ನು ತಡೆಯಲು ಮತ್ತು ವೈಜ್ಞಾನಿಕ ಅರಿವನ್ನು ಮೂಡಿಸಲು ಈ ಶಿಕ್ಷಣ ಅತ್ಯಗತ್ಯ ಎಂದು ನ್ಯಾಯಾಲಯವು ಬಲವಾಗಿ ಪ್ರತಿಪಾದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ರಚಿಸಲಾದ 26 ಸದಸ್ಯರ ತಜ್ಞರ ಸಮಿತಿಯು, ‘ಸಮಗ್ರ ಲೈಂಗಿಕ ಶಿಕ್ಷಣ’ ಹಾಗೂ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ’ಯನ್ನು ಶಾಲಾ ಪಠ್ಯಕ್ರಮದ ಅವಿಭಾಜ್ಯ ಅಂಗವನ್ನಾಗಿ ಮಾಡಬೇಕೆಂದು ಶಿಫಾರಸು ಮಾಡಿದೆ. ಈ ಕಾರ್ಯಕ್ರಮವು ಪ್ರಾಥಮಿಕ ಹಂತದಿಂದಲೇ ಆರಂಭವಾಗಲಿದ್ದು, ಮಕ್ಕಳಿಗೆ ಸುರಕ್ಷತೆ, ದೇಹದ ಭಾಗಗಳ ಕುರಿತ ಅರಿವು ಮತ್ತು ನೈರ್ಮಲ್ಯದ ಬಗ್ಗೆ ವಾರಕ್ಕೆ ಎರಡು ಬಾರಿ ಕನಿಷ್ಠ 15-20 ನಿಮಿಷಗಳ ಮೀಸಲು ತರಗತಿಗಳನ್ನು ನಡೆಸುವುದು ಕಡ್ಡಾಯವಾಗಿದೆ. ಅಲ್ಲದೆ, ಶಿಕ್ಷಕರು ಮತ್ತು ಪೋಷಕರಿಗೂ ಮಕ್ಕಳ ಬೆಳವಣಿಗೆಯ ಹಂತಗಳ ಕುರಿತು ಅರಿವು ಮೂಡಿಸುವ ವಿಶೇಷ ಸಭೆಗಳನ್ನು ನಡೆಸಲು ವರದಿಯಲ್ಲಿ ಸೂಚಿಸಲಾಗಿದೆ. ಈ ಎಲ್ಲ ಬದಲಾವಣೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಯ ತತ್ವಗಳಿಗೆ ಅನುಗುಣವಾಗಿ ಜಾರಿಗೆ ತರಲಾಗುವುದು ಎಂದು ಸರ್ಕಾರ ತಿಳಿಸಿದೆ.

ದಶಕಗಳ ಕಾಲ ಲೈಂಗಿಕ ಶಿಕ್ಷಣವನ್ನು “ಭಾರತೀಯ ಸಂಸ್ಕೃತಿಗೆ ವಿರುದ್ಧ”, “ಪಶ್ಚಿಮದ ಸಂಸ್ಕೃತಿಯ ಹೇರಿಕೆ” ಎಂದು ವಿರೋಧಿಸುತ್ತಿದ್ದ ಸಂಘ ಪರಿವಾರ ಮತ್ತು ಬಿಜೆಪಿ ಈಗ ಶಾಲೆಗಳಲ್ಲಿ ಕಡ್ಡಾಯ ಲೈಂಗಿಕ ಶಿಕ್ಷಣಕ್ಕೆ ಒಪ್ಪಿ ನೀಡಿ, ಸುಪ್ರೀಂನಲ್ಲೂ ಅರಿಕೆ ಮಾಡಿಕೊಟ್ಟಿದೆ.

ಹಿಂದೆ ಲೈಂಗಿಕ ಶಿಕ್ಷಣವನ್ನು ಕೇವಲ ದೈಹಿಕ ಸಂಬಂಧಕ್ಕೆ ಸೀಮಿತಗೊಳಿಸಿ ನೋಡಲಾಗುತ್ತಿತ್ತು. ಆದರೆ, ಈಗ ಪೋಕ್ಸೊ (POCSO) ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ, ತಿಳಿವಳಿಕೆಯ ಕೊರತೆಯಿಂದಾಗಿ ಹಲವು ಅಪ್ರಾಪ್ತ ವಯಸ್ಕರು ನೈಜ ಅಪರಾಧಿಗಳಂತೆ ದಂಡನೆಗೆ ಒಳಗಾಗುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಿರಂತರವಾಗಿ ಈ ಬಗ್ಗೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿರುವುದು ಸರ್ಕಾರದ ಮೇಲೆ ದೊಡ್ಡ ಒತ್ತಡವನ್ನು ಸೃಷ್ಟಿಸಿದೆ.

ಇಂಟರ್ನೆಟ್ ಮತ್ತು ಸ್ಮಾರ್ಟ್ ಫೋನ್ ಯುಗದಲ್ಲಿ ಮಕ್ಕಳಿಗೆ ಲೈಂಗಿಕ ಮಾಹಿತಿಯು ವಿರೂಪಗೊಂಡ ರೀತಿಯಲ್ಲಿ ಸಿಗುತ್ತಿದೆ. ಇದನ್ನು ತಡೆಯಲು ಶಾಸ್ತ್ರೀಯ ಮತ್ತು ವೈಜ್ಞಾನಿಕ ಶಿಕ್ಷಣದ ಅಗತ್ಯವಿದೆ ಎಂಬ ಅರಿವು ಸರ್ಕಾರದ ಮಟ್ಟದಲ್ಲಿ ಮೂಡಿದೆ. ಮಕ್ಕಳ ಸುರಕ್ಷತೆಗಾಗಿ ‘ಸೇಫ್-ಅನ್ಸೇಫ್ ಟಚ್’ ಬಗ್ಗೆ ಹೇಳಿಕೊಡುವುದು ಅನಿವಾರ್ಯ ಎಂಬ ಜಾಗೃತಿ ಹೆಚ್ಚಾಗಿದೆ.

ಸರ್ಕಾರ ನೇಮಿಸಿದ ತಜ್ಞರ ಸಮಿತಿಯಲ್ಲಿನ ವೈದ್ಯಕೀಯ ತಜ್ಞರು ಮತ್ತು ಮನೋವಿಜ್ಞಾನಿಗಳು ನೀಡಿರುವ ವರದಿಗಳನ್ನು ನಿರ್ಲಕ್ಷಿಸುವುದು ಕಷ್ಟ. ಶಿಕ್ಷಣ ಮತ್ತು ಸುರಕ್ಷತೆಯ ವಿಚಾರದಲ್ಲಿ ವಿಜ್ಞಾನವನ್ನು ಆಧರಿಸಿಯೇ ನಿರ್ಧಾರ ತೆಗೆದುಕೊಳ್ಳಬೇಕಾದ ಪರಿಸ್ಥಿತಿಯಲ್ಲಿ ಸರ್ಕಾರ ಇದೆ.

ಇದನ್ನೂ ಓದಿ: ನೇಪಾಳ ಪಿಎಂ ಬಾಲೇನ್ ಶಾ ವಿರುದ್ಧ ಭುಗಿಲೆದ್ದ ಆಕ್ರೋಶ; ತಾವೇ ಆರಿಸಿದ ನಾಯಕನ ವಿರುದ್ಧ ಬೀದಿಗಿಳಿದ ಯುವಕರು

ಸೈದ್ಧಾಂತಿಕ ವಿರೋಧಕ್ಕಿಂತ ಹೆಚ್ಚಾಗಿ, ಮಕ್ಕಳ ಮೇಲಿನ ದೌರ್ಜನ್ಯಗಳ ತಡೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಹೊರೆ ತಗ್ಗಿಸುವ ಅನಿವಾರ್ಯತೆ ಈ ಬದಲಾವಣೆಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಆದರೆ, ಈ ಪಠ್ಯಕ್ರಮವನ್ನು ಶಾಲೆಗಳಲ್ಲಿ ಜಾರಿಗೆ ತರುವಾಗ ಅದು ಯಾವ ರೀತಿಯ ವಿಷಯಗಳನ್ನು ಒಳಗೊಂಡಿರುತ್ತದೆ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಸೈದ್ಧಾಂತಿಕ ನಿಲುವುಗಳು ಅದರಲ್ಲಿ ಹೇಗೆ ಪ್ರತಿಫಲಿಸುತ್ತವೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...