ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 50 ವರ್ಷ ಕಠಿಣ ಜೈಲು ಶಿಕ್ಷೆ

Date:

ಅಪ್ರಾಪ್ತ ಬಾಲಕಿ ಮೇಲೆ ಪದೇ-ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಕೇರಳದ ನ್ಯಾಯಾಲಯವು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

- Advertisement -

ಕೇರಳದ ತಿರುವಳ್ಳಂಬನ ವೆಟ್ಟಕಲ್ಲು ನಿವಾಸಿ ಶೈನು (37) ಎಂಬಾತನಿಗೆ ತಿರುವಳ್ಳಂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಅಂಜು ಮೀರಾ ಬಿರ್ಲಾ ಅವರು ಕಠಿಣ ಜೈಲು ಶಿಕ್ಷೆ ಮತ್ತು 30,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಡಿಎನ್‌ಎ ಪರೀಕ್ಷೆಯಲ್ಲಿ ಶೈನು ಎಂಬಾತನೇ ಅಪರಾಧಿ ಎಂಬುದು ದೃಢಪಟ್ಟ ಹಿನ್ನೆಲೆ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

2018ರ ಡಿಸೆಂಬರ್ 31ರಂದು ಅಪರಾಧಿಯು ಮೊದಲ ಬಾರಿಗೆ ಕೃತ್ಯ ಎಸಗಿದ್ದನು. ಹೊಸ ವರ್ಷಾಚರಣೆಗೆ ಆರೋಪಿ ಮತ್ತು ಸಂತ್ರಸ್ತೆ ತಮ್ಮ ಸ್ನೇಹಿತರೊಂದಿಗೆ ಕೋವಲಂಗೆ ತೆರಳಿದ್ದರು. ಆನಂತರ, ಆರೋಪಿಯು ಅವರನ್ನು ತನ್ನ ಸಂಬಂಧಿಕರೊಬ್ಬರ ಮನೆಗೆ ಕರೆದೊಯ್ದಿದ್ದನು. ಅಲ್ಲಿ, ಸಂತ್ರಸ್ತ ಬಾಲಕಿ ಶೌಚಾಲಯಕ್ಕೆ ಹೋಗಬೇಕೆಂದು ತಿಳಿಸಿದಾಗ, ಆಕೆಯೊಂದಿಗೆ ತೆರಳಿದ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಆಕೆ ಕೂಗಲು ಪ್ರಯತ್ನಿಸಿದಾಗ, ಆತ ಆಕೆಯ ಬಾಯಿಗೆ ಬಟ್ಟೆ ತುರುಕಿದ್ದರು ಎಂದು ಆರೋಪಿಸಲಾಗಿತ್ತು.

ಸಾಮಾಜಿಕ ಕಳಂಕದ ಭೀತಿ ಹಾಗೂ ಸ್ನೇಹಿತರ ಮುಂದೆ ಮುಜುಗರಕ್ಕೊಳಗಾಗುವ ಭಯದಿಂದ ಸಂತ್ರಸ್ತೆಯು ತನ್ನ ಮೇಲಾದ ಕೃತ್ಯದ ಕುರಿತು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಆಕೆಯ ಮುಗ್ಧತೆಯನ್ನು ಬಳಸಿಕೊಂಡ ಅಪರಾಧಿ, 2019ರ ಜನವರಿ 12ರಂದು ಸಂತ್ರಸ್ತೆಯ ಮನೆಗೆ ನುಗ್ಗಿ ಆಕೆಯ ಮೇಲೆ ದೌರ್ಜನ್ಯ ಎಸಗಿದ್ದನೆಂದು ಹೇಳಲಾಗಿದೆ.

ಆ ನಂತರ, ಸಂತ್ರಸ್ತೆ ತನ್ನ ಮೇಲೆ ದೌರ್ಜನ್ಯದ ಕುರಿತು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಅಲ್ಲದೆ, ಡಿಎನ್‌ಎ ವಿಶ್ಲೇಷಣೆಯನ್ನೂ ನಡೆಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ, ಶಿಕ್ಷೆ ವಿಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...