ಲೈಂಗಿಕ ದೌರ್ಜನ್ಯ ಆರೋಪಿ ‘ಎನ್‌ಕೌಂಟರ್’; ಘಟನೆ ಬಗ್ಗೆ ಸಿಐಡಿ ತನಿಖೆ

Date:

ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆ ಎಂಬಾತ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಎನ್‌ಕೌಂಟರ್‌ ಪೊಲೀಸರು ಪೂರ್ವನಿಯೋಜಿತ ಕೃತ್ಯವೆಂದು ಮೃತ ಆರೋಪಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಎನ್‌ಕೌಂಟರ್‌ ಘಟನೆ ಬಗ್ಗೆ ಮಹಾರಾಷ್ಟ್ರದ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ಆರಂಭಿಸಿದೆ.

- Advertisement -

ಬಂಧನಕ್ಕೊಳಗಾಗಿದ್ದ ಆರೋಪಿ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಗುಂಡು ಹಾರಿಸಿದ. ಬಳಿಕ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾಕಿಸಿದ್ದು, ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ಆತನ ಕುಟುಂಬಸ್ಥರು ಪೊಲೀಸರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ತಪ್ಪೊಪ್ಪಿಗೆ ನೀಡುವಂತೆ ಆತನಿಗೆ ಪೊಲೀಸರು ಒತ್ತಡ ಹೇರಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಕ್ಷಯ್ ಎನ್‌ಕೌಂಟರ್‌ ಘಟನೆಯ ಬಗ್ಗೆ ಸಿಐಡಿ ತನಿಖೆ ಆರಂಭಿಸಿದೆ. ಮಂಗಳವಾರ ಸಂಜೆ ವಿಧಿವಿಜ್ಞಾನ ತಜ್ಞರ ತಂಡವು ಪೊಲೀಸ್ ವಾಹನವನ್ನು ಪರೀಕ್ಷಿಸಿದೆ. ಅಲ್ಲದೆ, ಸಿಐಡಿ ಅಧಿಕಾರಿಗಳು ಅಕ್ಷಯ್ ಶಿಂಧೆಯ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮುಂಬ್ರಾ ಬೈಪಾಸ್‌ನಲ್ಲಿ ನಡೆದ ಘಟನಾ ಸ್ಥಳಕ್ಕೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದು, ಎನ್‌ಕೌಂಟರ್‌ ವೇಳೆ ಪೊಲೀಸ್‌ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿಂಧೆ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಥಾಣೆಯ ಕಲ್ವಾ ನಾಗರಿಕ ಆಸ್ಪತ್ರೆಯಿಂದ ಮುಂಬೈನ ಸರ್ಕಾರಿ ಜೆಜೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ಥಾಣೆ ಜಿಲ್ಲೆಯ ಬದ್ಲಾಪುರ್ ಪಟ್ಟಣದ ಶಾಲೆಯೊಂದರಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಅಕ್ಷಯ್ ಶಿಂಧೆ ಆರೋಪಿಯಾಗಿದ್ದರು. ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿತ್ತು. ಆಗಸ್ಟ್‌ 17ರಂದು ಆತನನ್ನು ಬಂಧಿಸಲಾಗಿತ್ತು.

ಸೋಮವಾರ ಸಂಜೆ ಥಾಣೆಯ ಮುಂಬ್ರಾ ಬೈಪಾಸ್ ಬಳಿ ಅಕ್ಷಯ್‌ನನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಪೊಲೀಸರ ಬಂದೂಕನ್ನು ಕಿತ್ತುಕೊಂಡು ಗುಂಡಿನ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಆತ ದಾಳಿ ಮಾಡಿದ ಬಳಿಕ, ಪೊಲೀಸ್ ಅಧಿಕಾರಿಯೊಬ್ಬರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಅಕ್ಷಯ್‌ನನ್ನು ಕಲ್ವಾ ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅಕ್ಷಯ್ ಸಾವನ್ನಪ್ಪಿದ್ದಾರೆ.

ಆದರೆ, ಪೊಲೀಸರ ಮೇಲೆ ಅಕ್ಷಯ್ ಗುಂಡು ಹಾರಿಸಿದರು. ಬಳಿಕ, ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಕೊಂದರು ಎಂಬ ಪೊಲೀಸರ ಹೇಳಿಕೆಯನ್ನು ಆತನ ಕುಟುಂಬಸ್ಥರು ಅಲ್ಲಗಳೆದಿದ್ದಾರೆ. “ಪೊಲೀಸರು ಬಲವಂತವಾಗಿ ಆತನಿಂದ ತಪ್ಪೊಪ್ಪಿಗೆ ಬರೆಸಿಕೊಂಡಿದ್ದಾರೆ. ಪೊಲೀಸರು ಆತನಿಂದ ಏನು ಬರೆಸಿಕೊಂಡರು ಎಂಬುದು ಅವರಿಗೆ ಮಾತ್ರವೇ ತಿಳಿದಿದೆ” ಎಂದು ಅಕ್ಷಯ್ ತಾಯಿ ಮತ್ತು ಆತನ ಚಿಕ್ಕಪ್ಪ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಉತ್ತರ ಪ್ರದೇಶ | ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ತನ್ನ ಮಕ್ಕಳೊಂದಿಗೆ ಸೇರಿ ಕೊಂದ ತಾಯಿ!

“ಅಕ್ಷಯ್ ಹತ್ಯೆ ಬಗ್ಗೆ ತನಿಕೆ ನಡೆಸಬೇಕು. ಅಕ್ಷಯ್ ಹತ್ಯೆ ಪೊಲೀಸರು ಮತ್ತು ಬದ್ಲಾಪುರ ಶಾಲಾ ಆಡಳಿತ ಮಂಡಳಿಯ ಪಿತೂರಿಯಿಂದ ನಡೆದಿದೆ” ಎಂದು ಅಕ್ಷಯ್ ತಂದೆ ಅಣ್ಣಾ ಶಿಂಧೆ ಆರೋಪಿಸಿದ್ದಾರೆ.

“ಕಸ್ಟಡಿಯಲ್ಲಿ ಪೊಲೀಸರು ಥಳಿಸುತ್ತಿದ್ದಾರೆ ಎಂದು ಅಕ್ಷಯ್ ಹೇಳಿಕೊಂಡಿದ್ದರು. ನನ್ನ ಮಗ ಪಟಾಕಿ ಸಿಡಿಸಲು ಮತ್ತು ರಸ್ತೆ ದಾಟಲು ಹೆದರುತ್ತಿದ್ದನು. ಆತ ಪೊಲೀಸರ ಮೇಲೆ ಹೇಗೆ ಗುಂಡು ಹಾರಿಸುತ್ತಾನೆ ಎಂದರೆ ನಂಬಲು ಸಾಧ್ಯವೇ. ಪೊಲೀಸರು ನಮ್ಮ ಮಗನನ್ನು ಕೊಂದಿದ್ದಾರೆ. ಶಾಲೆಯ ಆಡಳಿತವನ್ನು ಸಹ ತನಿಖೆಗೆ ಒಳಪಡಿಸಬೇಕು” ಎಂದು ಅಕ್ಷಯ್ ತಾಯಿ ಒತ್ತಾಯಿಸಿದ್ದಾರೆ.

“ಅಕ್ಷಯ್ ತಪ್ಪು ಮಾಡಿದ್ದರೆ ಆರೋಪಿತ ಪ್ರಕರಣದಲ್ಲಿ ವಿಚಾರಣೆಗಾಗಿ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಬೇಕಾಗಿತ್ತು. ಅಕ್ಷಯ್ ವಿರುದ್ಧದ ಆರೋಪಗಳು ಸಾಬೀತಾಗಿಲ್ಲ. ಪೊಲೀಸರು ಅವನನ್ನು ಏಕೆ ಕೊಂದರು” ಎಂದು ಅವರು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...