ಲೈಂಗಿಕ ದೌರ್ಜನ್ಯ | ದಲಿತ ಯುವತಿಯನ್ನು ಬಿಸಿ ಎಣ್ಣೆಯ ಕಡಾಯಿಗೆ ದೂಡಿದ ಕಾಮುಕರು

Date:

ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿದ ದಲಿತ ಯುವತಿಯನ್ನು ಕಾಮುಕರು ಬಿಸಿ ಎಣ್ಣೆಯಿದ್ದ ಕಡಾಯಿ ದೂಡಿ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅಕೆಯನ್ನು ದೆಹಲಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಿರಾಣಿ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಯುವತಿಯ ಸಹೋದರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಮತ್ತು ಕುಟುಂಬದ ಸದಸ್ಯರು ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್, ಸಹಚರರಾದ ರಾಜು ಮತ್ತು ಸಂದೀಪ್ ಸಂತ್ರಸ್ತೆಗೆ ಕಿರುಕುಳ ನೀಡಿದ್ದಾರೆ. ಆಕೆ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಜಾತಿ ನಿಂದನೆ ಮಾಡಿ, ಆಕೆಯನ್ನು ಬಿಸಿ ಎಣ್ಣೆಯಿದ್ದ ಕಡಾಯಿಗೆ ತಳ್ಳಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೆಹಲಿಯ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿರುವ ಸಂತ್ರಸ್ತೆ, “18 ವರ್ಷದ ಆರೋಪಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ. ಅದನ್ನು ವಿರೋಧಿಸಿದ್ದಕ್ಕೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಡಾಯಿಗೆ ತಳ್ಳಿದರು” ಎಂದು ಹೇಳಿದ್ದಾರೆ.

ಯುವತಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಭಾಗದಲ್ಲಿ ಸುಟ್ಟ ಗಾಯಗಳಾಗಿವೆ. ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂತ್ರಸ್ತೆಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ, ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತನಿಕೆ ನಡೆಯುತ್ತಿದೆ ಎಂದು ಬಾಗ್‌ಪತ್ ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....