ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 7 ಹಿರಿಯ ವಿದ್ಯಾರ್ಥಿಗಳ ಬಂಧನ

Date:

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

- Advertisement -

ಕಾಮರೂಪದ ರಂಗಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಘಟನೆ ನಡೆದಿದೆ. ಸಂತ್ರಸ್ತ ಬಾಲಕ ಮತ್ತು ಆರೋಪಿಗಳು ಎಲ್ಲರೂ ಆಪ್ತಾಪ್ತರು. ಭಾರತದಾದ್ಯಂತ ಜವಾಹರ ನವೋದಯ ವಿದ್ಯಾಲಯಗಳನ್ನು ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ನವೋದಯ ವಿದ್ಯಾಲಯ ಸಮಿತಿ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಾಲಕನ ದೌರ್ಜನ್ಯದ ಬಗ್ಗೆ ಶಾಲೆಯ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹುಡುಗರನ್ನು ಬಂಧಿಸಿದ್ದಾರೆ.

ದೂರಿನ ಪ್ರಕಾರ, 6ನೇ ತರಗತಿಯ ಬಾಲಕ ಮತ್ತು ಆರೋಪಿಗಳು ರಂಗಿಯಾದ ಜವಾಹರ ನವೋದಯ ವಿದ್ಯಾಲಯದ ಬಾಲಕರ ಹಾಸ್ಟೆಲ್‌ನ ವಾಸಿಸುತ್ತಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಬಾಲಕನ ಮೇಲೆ ಮೂರು ತಿಂಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಬಾಲಕ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಪೋಷಕರು ಶಾಲಾ ಪ್ರಾಂಶುಪಾಲರಿಗೆ ತಿಳಿಸಿದ ಬಳಿಕ, ಪ್ರಕರಣ ದಾಖಲಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಮಾಲೆಗಾಂವ್ ಸ್ಫೋಟ ಪ್ರಕರಣ: 1,087 ವಿಚಾರಣೆಗಳು, ನಾನಾ ಆದೇಶಗಳ ನಡುವೆ ಸಂತ್ರಸ್ತರ ಹೋರಾಟ ನಡೆದದ್ದು ಹೀಗೆ!

ಆರೋಪಿಗಳ ವಿರುದ್ಧ ರಂಗಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಾಲಕರನ್ನು ಬಂಧಿಸಲಾಗಿದ್ದು, ಬಾಲಾಪರಾಧಿ ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ಬಾಲಾಪರಾಧ ಗೃಹಕ್ಕೆ ಕಳುಹಿಸಿದೆ. ಸಂತ್ರಸ್ತ ಬಾಲಕನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಗಳು ಮತ್ತು ಶಾಲಾ ಅಧಿಕಾರಿಗಳ ಹೇಳಿಕೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...