ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಕಸ್ಟಡಿ ಸಾವು: ಐವರು ಪೊಲೀಸರು ಕಾರಣ!

Date:

ಮಹಾರಾಷ್ಟ್ರದ ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅಕ್ಷಯ್ ಶಿಂಧೆ ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಆತನನ್ನು ಎನ್‌ಕೌಂಟರ್‌ ಮಾಡಿ, ಹತ್ಯೆಗೈಯಲು ಐವರು ಪೊಲೀಸರು ಕಾರಣ ಎಂದು ನ್ಯಾಯಾಂಗ ತನಿಖೆ ಹೇಳಿದೆ.

- Advertisement -

ಆರೋಪಿ ಅಕ್ಷಯ್ ಶಿಂಧೆಯನ್ನು ಪೊಲೀಸರು ನಕಲಿ ಎನ್‌ಕೌಂಟರ್‌ ಮಾಡಿದ್ದಾರೆಂದು ಆರೋಪಿಯ ತಂದೆ ಅಣ್ಣಾ ಶಿಂಧೆ ಆರೋಪಿಸಿದ್ದರು. ಪೊಲೀಸರ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಿತ್ತು. ಇದೀಗ, ತನಿಖೆ ಪೂರ್ಣಗೊಂಡಿದ್ದು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ನ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ವರದಿಯಲ್ಲಿ, ಆರೋಪಿ ಅಕ್ಷಯ್ ಶಿಂಧೆ ಸಾವಿಗೆ ಐವರು ಪೊಲೀಸರು ಕಾರಣ ಎಂದು ಹೇಳಲಾಗಿದೆ. ವರದಿಯನ್ನು ಪರಿಶೀಲಿಸಿರುವ ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ನೀಲಾ ಗೋಖಲೆ ಅವರಿದ್ದ ಪೀಠ, ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

“ವರದಿಯ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲು ನೀವು (ಸರ್ಕಾರ) ಬದ್ಧರಾಗಿದ್ದೀರಿ. ಈ ಪ್ರಕರಣವನ್ನು ಯಾವ ಸಂಸ್ಥೆ ತನಿಖೆ ನಡೆಸುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸಬೇಕು” ಎಂದು ಕೋರ್ಟ್‌ ಹೇಳಿದೆ.

2024ರ ಆಗಸ್ಟ್‌ನಲ್ಲಿ, ಬದ್ಲಾಪುರ ಶಾಲೆಯ ಶೌಚಾಲಯದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಘಟನೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ಪ್ರತಿಭಟನೆಗಳು ನಡೆದಿದ್ದವು. ಪ್ರಕರಣ ಸಂಬಂಧ ಶಾಲೆಯ ಸಹಾಯಕ ಸಿಬ್ಬಂದಿ ಅಕ್ಷಯ್ ಶಿಂಧೆಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಿಚಾರಣೆಗಾಗಿ ತಲೋಜ್‌ ಕಾರಾಗೃಹಕ್ಕೆ ಕರೆದೊಯ್ಯುವಾಗ ಸೆಪ್ಪಂಬರ್ 23ರಂದು ಪೊಲೀಸರು ಎನ್‌ಕೌಂಟರ್‌ ಮಾಡಿ, ಹತ್ಯೆಗೈದಿದ್ದರು. ಪ್ರತಿಭಟನೆ ಮತ್ತು ಸಾರ್ವಜನಿಕ ಆಕ್ರೋಶ ತಣಿಸಲು ಎನ್‌ಕೌಂಟರ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...