ವೈದ್ಯನಿಂದ ಲೈಂಗಿಕ ಕಿರುಕುಳ; 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನ

Date:

ತಿರುಪತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದ ವೆಲ್ಲೂರಿನ ಪೆರ್ನಾಂಪೇಟೆಯ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

- Advertisement -

ಯುವತಿ ಕಳೆದ ನಾಲ್ಕು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 15 ರಂದು ಆಸ್ಪತ್ರೆಯ ಸಂಸ್ಥಾಪಕನ ಮಗ, ವೈದ್ಯ ನಿವೇತನ್ (28) ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಿರುಕುಳದ ವಿಷಯವನ್ನು ಹೊರಗೆ ಯಾರಿಗೂ ಹೇಳದಂತೆ ಆರೋಪಿ ಬೆದರಿಕೆಯನ್ನೂ ಹಾಕಿದ್ದಾನೆ. ಘಟನೆಯ ನಂತರವೂ ಯುವತಿ ಮೂರು ದಿನಗಳ ಕಾಲ ಕೆಲಸ ಮುಂದುವರೆಸಿದ್ದರು. ಆದರೆ, ನಂತರ ಆಸ್ಪತ್ರೆಗೆ ಹೋಗುವುದನ್ನು ನಿಲ್ಲಿಸಿದ್ದರು ಎಂದು ವರದಿಯಾಗಿದೆ.

ಹಠಾತ್ತನೆ ಕೆಲಸಕ್ಕೆ ಹೋಗುವುದನ್ನು ನಿಲ್ಲಿದ್ದರ ಬಗ್ಗೆ ಪೋಷಕರು ಪ್ರಶ್ನಿಸಿದ್ದಾರೆ. ಆದರೂ, ಆಕೆ ಷೋಷಕರಿಗೆ ಘಟನೆ ಬಗ್ಗೆ ತಿಳಿಸಿಲ್ಲ. ಆದರೆ, ಮಂಗಳವಾರ ರಾತ್ರಿ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಪೆರ್ನಂಬುಟ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ಆಕೆ ತಮ್ಮ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೆರ್ನಂಬುಟ್ ಪೊಲೀಸರು, ತನಿಖೆಗಾಗಿ ಪ್ರಕರನವನ್ನು ತಿರುಪತ್ತೂರಿನ ಒಮರಾಬಾದ್ ಪೊಲೀಸರಿಗೆ ವರ್ಗಾಯಿಸಿದ್ದಾರೆ.

ತಲೆಮರೆಸಿಕೊಂಡಿರುವ ಡಾ. ನಿವೇತನ್ ವಿರುದ್ಧ ಐಪಿಸಿಯ ಸೆಕ್ಷನ್ 354 (ಎ) ಮತ್ತು 506 (1) ಮತ್ತು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ ವ್ಯಾಪಾರಕ್ಕೆ ₹10,000 ಕೋಟಿ ನಷ್ಟದ ಆತಂಕ; ರಾಹುಲ್‌ ಗಾಂಧಿಗೆ ರ್ಯಾಲಿ ಮುಂದೂಡಲು CTI ಮನವಿ

ದೀಪಾವಳಿ ಹಬ್ಬದ ಖರೀದಿ ಭರಾಟೆಯ ನಡುವೆಯೇ ನವೆಂಬರ್‌ 1ರಂದು ದೆಹಲಿಯ ರಾಮಲೀಲಾ...

ಜಾಮಿಯಾ ಮಿಲಿಯಾ ವಿವಿಯಲ್ಲಿ ‘ವಿದ್ಯಾರ್ಥಿ ಸಂಘ’ದ ಚುನಾವಣೆಗಾಗಿ ಪ್ರತಿಭಟನೆ: ಬೆಂಬಲ ನೀಡಿದ್ದ ಕಾಂಗ್ರೆಸ್‌, ಎಸ್‌ಪಿ ಸಂಸದರ ಬಂಧನ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ (JMISU) ಚುನಾವಣೆಯನ್ನು...