ಲೈಂಗಿಕ ಕಿರುಕುಳ ಪ್ರಕರಣ | ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋದ ನಿರ್ಮಾಪಕ ರಂಜಿತ್

Date:

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ರಂಜಿತ್ ವಿರುದ್ಧ ಬಂಗಾಳಿ ನಟಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ರಂಜಿತ್ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಟಿ ನೀಡಿರುವ ದೂರಿನ ಆಧಾರದ ಮೇಲೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸರು ಐಪಿಸಿಯ ಸೆಕ್ಷನ್ 354 ರ ಅಡಿಯಲ್ಲಿ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿ ರಂಜಿತ್ 2009ರಲ್ಲಿ ಸಿನಿಮಾ ಬಗ್ಗೆ ಚರ್ಚಿಸಲು ನಟಿಯನ್ನು ತನ್ನ ಫ್ಲಾಟ್‌ಗೆ ಕರೆಸಿದ್ದರು. ಈ ವೇಳೆ, ನಟಿಯೊಂದಿಗೆ ರಂಜಿತ್ ಅನುಚಿತವಾಗಿ ವರ್ತಿಸಿದ್ದಾರೆ. ಅಸಭ್ಯವಾಗಿ ಆಕೆಯ ಕೈಯನ್ನು ಹಿಡಿದಿದ್ದರು. ಲೈಂಗಿಕ ಉದ್ದೇಶದಿಂದ ಆಕೆಯ ದೇಹದ ಇತರ ಭಾಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದರು.

ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿರುವ ರಂಜಿತ್ ಹೈಕೋರ್ಟ್‌ ಮೊರೆಹೋಗಿದ್ದಾರೆ. ದೌರ್ಜನ್ಯ ನಡೆದಿದೆ ಎನ್ನಲಾದ 15 ವರ್ಷಗಳ ಬಳಿಕ ನಟಿ ದೂರು ದಾಖಲಿಸಿರುವ ಬಗ್ಗೆ ಅವರು ಪಶ್ನಿಸಿದ್ದಾರೆ.

ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ತನ್ನನ್ನು ತೆಗೆದುಹಾಕಬೇಕೆಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಯಸಿವೆ. ಅಲ್ಲದೆ, ಆ ಚಿತ್ರದಲ್ಲಿ ನಟಿಸಲು ಆಯ್ಕೆಯಾಗದ ನಿರಾಶೆಯಿಂದ ನಟಿ ದೂರು ನೀಡಿದ್ದಾರೆ ಎಂದು ರಂಜಿತ್ ಪ್ರತ್ಯಾರೋಪ ಮಾಡಿದ್ದಾರೆ.

ಸಿನಿಮಾ ಬಗ್ಗೆ ಚರ್ಚಿಸುವ ವೇಳೆ ನಟಿಯೊಂದಿಗೆ ಸಹ ನಿರ್ದೇಶಕರಾದ ಶಂಕರ್ ರಾಮಕೃಷ್ಣನ್ ಮತ್ತು ಗಿರೀಶ್ ದಾಮೋದರನ್ ಹಾಗೂ ನಿರ್ಮಾಪಕ ಸುಬೈರ್ ಮತ್ತು ಕಚೇರಿ ಸಹಾಯಕ ಬಿಜು ಸೇರಿದಂತೆ ಇತರರು ಫ್ಲಾಟ್‌ನಲ್ಲಿದ್ದರು. ಸಿನಿಮಾ ಬಗ್ಗೆ ಶಂಕರ್ ರಾಮಕೃಷ್ಣನ್ ಅವರೊಂದಿಗೂ ಚರ್ಚೆ ನಡೆದಿತ್ತು. ಆದರೆ, ದೂರಿನಲ್ಲಿ ಅವರ ಉಪಸ್ಥಿತಿಯನ್ನು ಕೈಬಿಟ್ಟಿರುವುದು ದುರುದ್ದೇಶಪೂರಿತ ಉದ್ದೇಶಗಳನ್ನು ಸೂಚಿಸುತ್ತದೆ ಎಂದು ರಂಜಿತ್ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಲಯಾಳಂ ಚಿತ್ರರಂಗದಲ್ಲಿ ಮತ್ತೆ ಸಂಚಲನ; ನಟ ಜಯಸೂರ್ಯ ವಿರುದ್ಧ ನಟಿ ಸೋನಿಯಾ #MeToo ಆರೋಪ

ಸದ್ಯ, ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 354ನೇ ಸೆಕ್ಷನ್ ಅಡಿಯಲ್ಲಿ ಅಪರಾಧ ಸಾಬೀತಾದರೆ, ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.

ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ರಂಜಿತ್, ತಮ್ಮ ಆರೋಗ್ಯ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಅವರು ಹಲವಾರು ಕಾಯಿಲೆಗಳಿಂದ ಬಳಲುತ್ತಿದ್ದು, ಇತ್ತೀಚೆಗೆ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸೆಗೂ ಒಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ. ತಮಗೆ ಸರಿಯಾದ ವೈದ್ಯಕೀಯ ಆರೈಕೆಯ ಅಗತ್ಯವಿದ್ದು, ಜಾಮೀನು ನೀಡಬೇಕೆಂದು ಕೋರಿದ್ದಾರೆ. ಆಪಾದಿತ ಘಟನೆಯು 15 ವರ್ಷಗಳ ಹಿಂದೆ ನಡೆದಿದ್ದು, ಕಸ್ಟಡಿ ವಿಚಾರಣೆ ಅನಗತ್ಯವಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...