ರಾಜಿಯಾದರೂ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದು ಪಡಿಸಲಾಗದು: ಸುಪ್ರೀಂ ಕೋರ್ಟ್

Date:

ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿಯಾದರೂ ಕೂಡಾ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಈ ಮೂಲಕ ಹೊಂದಾಣಿಕೆ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದು ಎಂಬ ರಾಜಸ್ಥಾನ ಹೈಕೋರ್ಟ್‌ನ ತೀರ್ಪನ್ನು ತಳ್ಳಿಹಾಕಿದೆ.

- Advertisement -

ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಪಿ.ವಿ.ಸಂಜಯ್ ಕುಮಾರ್ ಅವರಿದ್ದ ಪೀಠವು ತೀರ್ಪು ನೀಡಿದೆ. “ಈ ಸಂಬಂಧ ಆದೇಶವನ್ನು ರದ್ದುಗೊಳಿಸಲಾಗಿದೆ. ಎಫ್‌ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಕಾನೂನಿನ ಪ್ರಕಾರ ಮುಂದುವರಿಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ ಅರ್ಧದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿ ಮಾಡಿಕೊಂಡರೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ ಸೆಕ್ಷನ್ 482ರ ಅಡಿಯಲ್ಲಿ ಹೈಕೋರ್ಟ್ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದೇ ಎಂಬುದಕ್ಕೆ ಬಹುನಿರೀಕ್ಷಿತ ತೀರ್ಪು ಇದಾಗಿದೆ. 15 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ.

ಆರೋಪಿಗಳು ಮತ್ತು ಬಾಲಕಿಯ ಕುಟುಂಬದ ನಡುವೆ ರಾಜಿಯಾದ ನಂತರ, ಆರೋಪಿಗಳು ಪ್ರಕರಣವನ್ನು ರದ್ದುಗೊಳಿಸಲು ರಾಜಸ್ಥಾನ ಹೈಕೋರ್ಟ್‌ನ ಮಧ್ಯಸ್ಥಿಕೆಯನ್ನು ಕೋರಿದ್ದರು. ಹೈಕೋರ್ಟ್ ಅರ್ಜಿಯನ್ನು ಸ್ವೀಕರಿಸಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಆಕ್ಷೇಪಿಸಿ ರಾಮ್‌ಜಿ ಲಾಲ್ ಬೈರ್ವಾ ಎಂಬವರು ಅರ್ಜಿ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...