ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

Date:

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೆರಳಾ ಪ್ರದೇಶ ಕಾಂಗ್ರೆಸ್ ಸಮಿತಿ ಆರು ತಿಂಗಳ ಕಾಲ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಪಕ್ಷದ ಶಿಸ್ತಿನ ಸಮಿತಿ ಭಾನುವಾರ ಸಭೆ ನಡೆಸಿ ಈ ನಿರ್ಧಾರಕ್ಕೆ ಬಂದು, ಶಾಸಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ.

- Advertisement -

ಪಾಲಕ್ಕಾಡ್ ಕ್ಷೇತ್ರದ ಶಾಸಕನಾಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ವಿರುದ್ಧ ಹಲವಾರು ಮಹಿಳೆಯರು ಲೈಂಗಿಕ ಅನುಕೂಲ ಬೇಡಿಕೆ ಇಟ್ಟಿದ್ದು, ಗರ್ಭಪಾತಕ್ಕೆ ಒತ್ತಾಯಿಸಿದ್ದಾರೆಯೆಂಬ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಮಹಿಳೆಯರು ಈವರೆಗೆ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸದ ಕಾರಣ ಪ್ರಕರಣ ದಾಖಲಾಗಿಲ್ಲ. ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಅವರನ್ನು ಶಾಸನಸಭಾ ಕಾರ್ಯಗಳಿಂದಲೂ ತಾತ್ಕಾಲಿಕವಾಗಿ ದೂರವಿಡುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಪಕ್ಷದ ಹಲವು ನಾಯಕರು, ವಿಶೇಷವಾಗಿ ಮಹಿಳಾ ನಾಯಕರು, ರಾಹುಲ್ ಅವರು ಪಾಲಕ್ಕಾಡ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ರಾಹುಲ್ ರಾಜೀನಾಮೆ ನೀಡಿದರೆ ಉಪಚುನಾವಣೆಯಲ್ಲಿ ಬಿಜೆಪಿ ಲಾಭ ಪಡೆಯಬಹುದು ಎಂಬ ಆತಂಕ ಕಾಂಗ್ರೆಸ್ ಶಿಬಿರದಲ್ಲಿ ವ್ಯಕ್ತವಾಗಿದೆ. ಕಳೆದ ಮೂರು ಚುನಾವಣೆಗಳಲ್ಲಿ ಪಾಲಕ್ಕಾಡ್‌ನಲ್ಲಿ ಬಿಜೆಪಿ ಎರಡನೇ ಸ್ಥಾನ ಪಡೆದಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಪ್ರಸ್ತುತ, ರಾಹುಲ್ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಮಾತ್ರ ರಾಜೀನಾಮೆ ನೀಡಿದ್ದಾರೆ. ಕೇರಳದ ಮುಂದಿನ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ, ರಾಹುಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಚುನಾವಣಾ ಆಯೋಗವು ಉಪಚುನಾವಣೆ ನಡೆಸುವ ಬಗ್ಗೆ ತನ್ನ ವಿವೇಚನೆಯನ್ನು ಬಳಸಬಹುದು ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದ ಹಿನ್ನೆಲೆ, ಪಾಲಕ್ಕಾಡ್ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಬಿಜೆಪಿ ಲಾಭ ಪಡೆಯಬಹುದೆಂಬ ಆತಂಕ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗಿದೆ. ಕಳೆದ ಮೂರು ಚುನಾವಣೆಯಲ್ಲೂ ಬಿಜೆಪಿ ಎರಡನೇ ಸ್ಥಾನ ಪಡೆದಿರುವುದು ಈ ಭಯಕ್ಕೆ ಕಾರಣವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಕೇವಲ ಒಂದು ವರ್ಷದಷ್ಟೇ ಅವಧಿ ಉಳಿದಿರುವುದರಿಂದ ಉಪಚುನಾವಣೆ ನಡೆಸುವ ವಿಷಯ ಚುನಾವಣಾ ಆಯೋಗದ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.

ಇಲ್ಲಿಯವರೆಗೆ ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಹಿಳಾ ನಾಯಕಿಯರು ಸೇರಿ ಹಲವು ಮಂದಿ ಸಾರ್ವಜನಿಕವಾಗಿ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನಿಲಾ: ಪತ್ರಕರ್ತರ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಮೋದಿ ಪೇಚಾಟ; ವಿಡಿಯೋ ವೈರಲ್!

23ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು...

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

1.27 ಕೋಟಿ ಹಿಂದೂಗಳ ಹೆಸರು ಡಿಲೀಟ್- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...