ಗುಟ್ಕಾ ಜಾಹೀರಾತು | ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

Date:

ಗುಟ್ಕಾ ಬ್ರ್ಯಾಂಡ್‌ ಒಂದಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತು ನೀಡಿದ ಆರೋಪದ ಮೇಲೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ ಅವರಿಗೆ ಜೈಪುರದ ಜಿಲ್ಲಾ ಗ್ರಾಹಕ ಆಯೋಗ ಸಮನ್ಸ್ ಜಾರಿಗೊಳಿಸಿದೆ.

- Advertisement -

ಐಐಎಫ್‌ಎ ಅವಾರ್ಡ್‌ನ ಬೆಳ್ಳಿ ಮಹೋತ್ಸವ ಆಚರಣೆಗಾಗಿ ಶಾರುಖ್‌ ಖಾನ್ ಜೈಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನೋಟಿಸ್ ನೀಡಲಾಗಿದೆ. ಕೇಸರಿ ಮಿಶ್ರಿತ ಗುಟ್ಕಾವನ್ನು ಪ್ರಚಾರ ಮಾಡುವ ಜಾಹೀರಾತಿನಲ್ಲಿ ಜನರನ್ನು ತಪ್ಪುದಾರಿಗೆಳೆದಿರುವ ಕುರಿತು ಮಾರ್ಚ್ 19ರೊಳಗೆ ಪ್ರತಿಕ್ರಿಯಿಸುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬೀದರ್‌ | ₹3 ಲಕ್ಷ ಮೌಲ್ಯದ ಗುಟ್ಕಾ ಜಪ್ತಿ : ನಾಲ್ವರ ವಿರುದ್ದ ಪ್ರಕರಣ ದಾಖಲು

ಅಜಯ್ ದೇವಗನ್, ಟೈಗರ್ ಶ್ರಾಫ್ ಮತ್ತು ಗುಟ್ಕಾ ಉತ್ಪಾದನಾ ಕಂಪನಿಯ ಅಧ್ಯಕ್ಷರಿಗೂ ಇದೇ ರೀತಿಯ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಗ್ರಾಹಕ ಹಕ್ಕುಗಳ ಕಾರ್ಯಕರ್ತ ಯೋಗೇಂದ್ರ ಸಿಂಗ್ ಬಡಿಯಾಲ್ ಸಲ್ಲಿಸಿದ ದೂರಿನ ನಂತರ ಆಯೋಗದ ಅಧ್ಯಕ್ಷೆ ಗ್ಯಾರ್ಸಿಲಾಲ್ ಮೀನಾ ಮತ್ತು ಸದಸ್ಯೆ ಹೇಮ್ಲತಾ ಅಗರ್ವಾಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಗುಟ್ಕಾ ತಯಾರಕರಾದ ಜೆಬಿ ಇಂಡಸ್ಟ್ರೀಸ್ ತನ್ನ ಜಾಹೀರಾತುಗಳಲ್ಲಿ ‘ಕಣ ಕಣದಲ್ಲೂ ಕೇಸರಿಯಿದೆ’ ಎಂದು ಹೇಳುವ ಮೂಲಕ ದಾರಿತಪ್ಪಿಸುವ, ಸುಳ್ಳು ಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕೇಸರಿ ಒಂದು ಕಿಲೋಗ್ರಾಂಗೆ ಸುಮಾರು 4 ಲಕ್ಷ ರೂ.ಗಳಷ್ಟು ಬೆಲೆ ಬಾಳುತ್ತದೆ. ಆದರೆ ಈ ಗುಟ್ಕಾ ಪ್ಯಾಕೆಟ್‌ಗೆ ಕೇವಲ 5 ರೂಪಾಯಿಯಂತೆ ಮಾರಾಟವಾಗುತ್ತದೆ. ಹಾಗಾಗಿ ಕಣ ಕಣದಲ್ಲಿ ಕೇಸರಿಯಿದೆ ಎಂದು ಹೇಳುವುದು ಸುಳ್ಳು, ಅವಾಸ್ತವಿಕ ಎಂದು ಅರ್ಜಿದಾರರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

ಅದಕ್ಕೂ ಮುಖ್ಯವಾಗಿ ಉತ್ಪನ್ನವು ಕೇಸರಿಯನ್ನು ಹೊಂದಿಲ್ಲ ಅಥವಾ ಅದರ ಪರಿಮಳವನ್ನೂ ಹೊಂದಿಲ್ಲ ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ. ಆದರೂ ಕೂಡಾ ಸೆಲೆಬ್ರೆಟಿಗಳು ಈ ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಇದು ಗ್ರಾಹಕರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದಿದ್ದಾರೆ.

ಇಂತಹ ಮೋಸಗೊಳಿಸುವ ಜಾಹೀರಾತುಗಳು ಗುಟ್ಕಾ ಸೇವನೆಯನ್ನು ಪ್ರೋತ್ಸಾಹಿಸುವುದಲ್ಲದೆ ಆರೋಗ್ಯದ ಅಪಾಯಗಳನ್ನು ಸಹ ಉಂಟುಮಾಡುತ್ತವೆ ಎಂದು ದೂರುದಾರರು ವಾದಿಸಿದ್ದಾರೆ. ಹಾಗೆಯೇ ಜನರ ಆರೋಗ್ಯದ ಮೇಲೆ ಗುಟ್ಕಾ ಪರಿಣಾಮವನ್ನು ಉಲ್ಲೇಖಿಸಿ, ಇಂತಹ ದಾರಿತಪ್ಪಿಸುವ ಪ್ರಚಾರ ನಿಷೇಧಿಸುವಂತೆ ಅರ್ಜಿದಾರರು ಒತ್ತಾಯಿಸಿದ್ದಾರೆ.

ಇನ್ನು ಪಾನ್ ಮಸಾಲಾ ಉತ್ಪನ್ನಗಳ ಪ್ರಚಾರ ಮಾಡಿ ಕಾನೂನು ಅಡಿ ಈ ಮೂವರು ನಟರುಗಳು ಸಿಲುಕಿರುವುದು ಇದೇ ಮೊದಲಲ್ಲ. ಫೆಬ್ರವರಿಯಲ್ಲಿ, ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಮತ್ತು ವಿಮಲ್ ಪಾನ್ ಮಸಾಲಾ ತಯಾರಕರಿಗೆ ಇದೇ ರೀತಿಯ ಪ್ರಕರಣದಲ್ಲಿ ಕೋಟಾ ಗ್ರಾಹಕ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತು.

ಕೋಟಾದ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಪಾನ್ ಮಸಾಲಾ ಜಾಹೀರಾತುಗಳನ್ನು ನಿಷೇಧಿಸುವಂತೆ ಕೋಟಾದ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ಆಯೋಗಕ್ಕೆ ಅರ್ಜಿ ಸಲ್ಲಿಸಿದರು. ಈ ಪ್ರಕರಣದಲ್ಲೂ ನೋಟಿಸ್ ಜಾರಿ ಮಾಡಲಾಗಿತ್ತು. ಮುಂದಿನ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ನಿಗದಿಪಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...