ಗಾಜಾದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಂದು ಮಗುವನ್ನು ಕೊಲ್ಲಲಾಗುತ್ತಿದೆ: ಪ್ರಿಯಾಂಕಾ ಗಾಂಧಿ ಆಘಾತ

Date:

ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ”ಎಂತಹ ಶೋಚನೀಯ ಮತ್ತು ಅವಮಾನಕರ ಘಟನೆ. ಗಾಜಾದಲ್ಲಿ ಕೊಲ್ಲಲ್ಪಟ್ಟ 10 ಸಾವಿರ ಮಂದಿಯಲ್ಲಿ ಅರ್ಧದಷ್ಟು ಮಂದಿ ಮಕ್ಕಳಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ ಪ್ರತಿ ಹತ್ತು ನಿಮಿಷಕ್ಕೆ ಒಂದು ಮಗುವನ್ನು ಸಾಯಿಸಲಾಗಿದೆ. ಇನ್ನು ಆಮ್ಲಜನಕದ ಕೊರತೆಯಿಂದ ಇನ್ಕ್ಯುಬೇಟರ್‌ಗಳಿಂದ ತೆಗೆದುಹಾಕಿ ಸಾಯಲು ಬಿಡಲಾಗಿದೆ. ಈ ನರಹತ್ಯೆಯನ್ನು ಬೆಂಬಲಿಸುವವರಿಗೆ ಆಘಾತವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

”ಯುದ್ಧ ವಿರಾಮವಿಲ್ಲ, ಬಾಂಬುಗಳನ್ನು ಸುರಿಯಲಾಗುತ್ತಿದೆ. ಹೆಚ್ಚು ಹಿಂಸಾಚಾರ, ಹೆಚ್ಚು ಕೊಲೆ, ಹೆಚ್ಚೆಚ್ಚು ನೋವು. ಈ ವಿನಾಶವನ್ನು ಬೆಂಬಲಿಸುವ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಈ ಹಿಂಸೆ ಯಾವಾಗ ಕೊನೆಗೊಳ್ಳುತ್ತದೆ” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಯವಿಟ್ಟು ಬಿಟ್ಟುಬಿಡಿ, ನನಗೆ ನಾಲ್ಕು ಹೆಣ್ಣುಮಕ್ಕಳಿದ್ದಾರೆ ಎಂದು ಅಂಗಲಾಚಿದರೂ ಅತ್ಯಾಚಾರವೆಸಗಿದ ರಾಕ್ಷಸರು

ಹಮಾಸ್ ಹೋರಾಟಗಾರರು ಇಸ್ರೇಲಿ ಗಡಿ ಮೇಲೆ ಹಠಾತ್ ದಾಳಿ ನಡೆಸಿದಾಗ 1,200 ಕ್ಕೂ ಹೆಚ್ಚು ಇಸ್ರೇಲಿಗಳು ಕೊಲ್ಲಲ್ಪಟ್ಟರು. ಇದರಿಂದ ಪ್ರತಿದಾಳಿ ನಡೆಸಿದ ಇಸ್ರೇಲ್ ಪಡೆ ಅಮಾಯಕರನ್ನು ಲೆಕ್ಕಿಸದೆ ಸಾಮಾನ್ಯ ನಾಗರಿಕರನ್ನು ಹತ್ಯೆ ಮಾಡಿದೆ.

ಗಾಜಾದಲ್ಲಿ ಹಮಾಸ್ ಕೇಂದ್ರಿತ ಆರೋಗ್ಯ ಸಚಿವಾಲಯದ ಪ್ರಕಾರ ಇಸ್ರೇಲ್‌ ದಾಳಿಯಲ್ಲಿ 11 ಸಾವಿರಕ್ಕೂ ಹೆಚ್ಚು ಜನರನ್ನು ಕೊಲ್ಲಲಾಗಿದೆ. ಸತ್ತವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ ಎಂದು ಅಮೆರಿಕದ ವರದಿಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...