ಉಸಿರಾಟದ ತೊಂದರೆಯಿಂದ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು

Date:

ಎನ್‌ಸಿಪಿ (ಶರದ್‌ಚಂದ್ರ ಪವಾರ್‌ ಬಣ) ಮುಖ್ಯಸ್ಥ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಶರದ್‌ ಪವಾರ್‌ (85) ಅವರನ್ನು ಸೋಮವಾರ (ಫೆ. 9) ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಪರೀತ ಕೆಮ್ಮು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -

​ಬಾರಾಮತಿಯಲ್ಲಿದ್ದ ಪವಾರ್‌ ಅವರಿಗೆ ಸೋಮವಾರ ಮಧ್ಯಾಹ್ನ ತೀವ್ರ ಸ್ವರೂಪದ ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಎದುರಾಯಿತು. ಕೂಡಲೇ ಅವರನ್ನು ಬಾರಾಮತಿಯಿಂದ ಖಾಸಗಿ ವಾಹನದಲ್ಲಿ ಪುಣೆಯ ‘ರೂಬಿ ಹಾಲ್‌ ಕ್ಲಿನಿಕ್‌’ಗೆ ಕರೆತರಲಾಯಿತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಗಳು ಬಂದ ನಂತರವಷ್ಟೇ ಮುಂದಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಬೇಕೇ ಅಥವಾ ಬೇಡವೇ ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ|ಮೋದಿ ರಾಜಿ ರಾಜಕಾರಣದಿಂದ ಭಾರತದ ಸ್ವಾಭಿಮಾನ- ಸಾರ್ವಭೌಮತೆಗೆ ಧಕ್ಕೆ

ಪವಾರ್‌ ಅವರ ಆರೋಗ್ಯದ ಕುರಿತು ಮಾಹಿತಿ ನೀಡಿರುವ ವೈದ್ಯರು, “ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿಲ್ಲ, ಬದಲಿಗೆ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

​ರೂಬಿ ಹಾಲ್‌ ಕ್ಲಿನಿಕ್‌ನ ಡಾ. ಅಭಿಜಿತ್‌ ಲೋಧಾ ಮಾತನಾಡಿ, “ಅತಿಯಾದ ದೈಹಿಕ ಶ್ರಮ ಮತ್ತು ಎದೆಯಲ್ಲಿ ಕಫ ಕಟ್ಟಿಕೊಂಡಿರುವುದರಿಂದ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಚಿಕಿತ್ಸೆ ಮುಂದುವರಿದಿದ್ದು, ಪರೀಕ್ಷಾ ವರದಿಗಳಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ಬಳಿಕ ಮುಂದಿನ ಚಿಕಿತ್ಸಾ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ತಿಳಿಸಿದ್ದಾರೆ.

​ಪವಾರ್‌ ಅವರೊಂದಿಗೆ ಪುತ್ರಿ ಹಾಗೂ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ, ಅಳಿಯ ಸದಾನಂದ ಸುಳೆ ಆಸ್ಪತ್ರೆಯಲ್ಲಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಮೊಮ್ಮಗ, ಶಾಸಕ ರೋಹಿತ್‌ ಪವಾರ್‌ ಆಸ್ಪತ್ರೆಗೆ ಧಾವಿಸಿದ್ದಾರೆ.
​

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...