ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್ ಇಮಾನ್ ಅವರಿಗೆ 2020ರ ಕೋಮು ಗಲಭೆ ಹಾಗೂ ಕಾನೂನುಬಾಹಿರ ಚಟುವಟಿಗೆಗಳಲ್ಲಿ ಸಂಬಂಧ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ.
ವಿಚಾರಣಾ ನ್ಯಾಯಾಲಯದಿಂದ ಜಾಮೀನು ನಿರಾಕರಣೆಯಾದ ನಂತರ ಪ್ರಕರಣದಲ್ಲಿ ವಿಧಿಸಬಹುದಾದ ಶಿಕ್ಷೆಯಲ್ಲಿ ಅರ್ಧಕ್ಕಿಂತ ಹೆಚ್ಚು ಶಿಕ್ಷೆಯನ್ನು ಇಮಾನ್ ಅವರು ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈತ್ ಹಾಗೂ ಮನೋಜ್ ಜೈನ್ ಅವರಿದ್ದ ಪೀಠ ಪ್ರಕರಣವನ್ನು ವಿಚಾರಣೆ ನಡೆಸಿದ ನಂತರ ಜಾಮೀನು ನೀಡಲು ಅನುಮತಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಸುಪರ್ದಿಗೊಪ್ಪಿಸುತ್ತಿದೆಯೇ ಸರಕಾರ?
ಇಮಾನ್ ಅವರು ಜಮೀಯಾ ಮಿಲಿಯಾ ಇಸ್ಲಾಮಿಯಾ ವಿವಿಯಲ್ಲಿ ಡಿಸೆಂಬರ್ 13, 2019 ರಂದು ಹಾಗೂ ಅಲಿಘರ್ ಮುಸ್ಲಿಂ ವಿವಿಯಲ್ಲಿ ಡಿಸೆಂಬರ್ 16, 2019 ರಂದು ಮಾಡಿದ ಭಾಷಣದಲ್ಲಿ ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳನ್ನು ವಿಭಜಿಸುವ ಬೆದರಿಕೆ ಹಾಕಿದ್ದರು ಎಂದು ಪ್ರಾಸಿಕ್ಯೂಷನ್ ವಾದವಾಗಿದೆ.
ಈ ಘಟನೆಯ ನಂತರ ದೆಹಲಿ ಪೊಲೀಸ್ ವಿಶೇಷ ತಂಡ ದೇಶದ್ರೋಹ ಹಾಗೂ ಕಾನೂನುಬಾಹಿರ ಚಟುವಟಿಕೆಯಡಿ ದೂರನ್ನು ದಾಖಲಿಸಲಾಗಿತ್ತು. 2020ರ, ಜನವರಿ 28 ರಿಂದ ಇಮಾಮ್ ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ಕಳೆದ ಫೆ. 17ರಂದು ಶಾರ್ಜೀಲ್ ಇಮಾನ್ ಅವರಗೆ ವಿಚಾರಣಾ ನ್ಯಾಯಾಲಯ ಜಾಮೀನನ್ನು ನಿರಾಕರಿಸಿತ್ತು.
