ಜೈಪುರ | ಪತಿಯಿಂದ ಲಂಚ ಸ್ವೀಕಾರ: ಜೈಪುರ ಮೇಯರ್‌ ವಜಾ

Date:

ರಾಜಸ್ಥಾನ ಸರ್ಕಾರ ತಡರಾತ್ರಿಯ ಆದೇಶದಲ್ಲಿ ಜೈಪುರ ಮಹಾನಗರ ಪಾಲಿಕೆ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಅಮಾನತುಗೊಳಿಸಿದೆ. ಈಕೆಯ ಪತಿ ಸುಶೀಲ್ ಗುರ್ಜರ್ ಅವರನ್ನು ನಿನ್ನೆ(ಆಗಸ್ಟ್ 5) ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು ಗುತ್ತಿಗೆ ನೀಡುವ ಕೆಲಸಕ್ಕೆ 2 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಬಂಧಿಸಿತ್ತು.

ಜೈಪುರ ಮೇಯರ್ ನಿವಾಸದಲ್ಲಿ ಅವರ ಪತಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಮೇಯರ್‌ ನಿವಾಸದಿಂದ 40 ಲಕ್ಷ ರೂ. ನಗದು ಕೂಡ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಮೇಯರ್ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಮೇಯರ್‌ ವಜಾಗೊಳಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಲಂಚ ಪಡೆದ ಪ್ರಕರಣದಲ್ಲಿ ಎಸಿಬಿ ಸುಶೀಲ್ ಗುರ್ಜಾರ್ ಸಹಿತ ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ಸುಶೀಲ್ ಗುರ್ಜರ್ ತನ್ನ ಸಹಾಯಕರಾದ ನಾರಾಯಣ್ ಸಿಂಗ್ ಮತ್ತು ಅನಿಲ್ ದುಬೆ ಮೂಲಕ ಪ್ಲಾಟ್‌ಗಾಗಿ ಗುತ್ತಿಗೆ ಅರ್ಜಿಯನ್ನು ತ್ವರಿತವಾಗಿ ಅಂಗೀಕರಿಸಲು ದೂರುದಾರರಿಂದ 2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಅಧಿಕಾರಿಗಳು ಬಲೆ ಬೀಸಿ ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ‘ಇಂಡಿಯಾ’ ಮೂರನೇ ಸಭೆ

ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು ಮೇಯರ್ ಅವರ ಪತಿಯನ್ನು ಬಂಧಿಸಿರುವುದು ಭ್ರಷ್ಟಾಚಾರವನ್ನು ಹತ್ತಿಕ್ಕಲು ಸರ್ಕಾರ ಗಂಭೀರವಾಗಿದೆ ಎಂಬುದರ ಸೂಚನೆಯಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

“ರಾಜಸ್ಥಾನದಲ್ಲಿ ಮಾತ್ರ ಎಸಿಬಿ ಈ ರೀತಿ ಕೆಲಸ ಮಾಡುತ್ತದೆ. ಬೇರೆ ರಾಜ್ಯಗಳ ರೀತಿ ಅನುಮತಿ ಪಡೆದು ಕೆಲಸ ಮಾಡುವುದಿಲ್ಲ. ನಾವು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ರಾಜಸ್ಥಾನ ಲೋಕಸೇವಾ ಆಯೋಗದ ಸದಸ್ಯರನ್ನು ಮತ್ತು ಈಗ ಮೇಯರ್ ಅವರ ಪತಿಯನ್ನು ಬಂಧಿಸಿದ್ದೇವೆ” ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಕೃಷ್ಣಾ ನದಿ ಸೇತುವೆ ಕಾಮಗಾರಿ | ಅಂದಾಜು ವೆಚ್ಚ ₹60ರಿಂದ ₹99 ಕೋಟಿಗೆ ಏರಿಕೆ: ಡಿಕೆ ಶಿವಕುಮಾರ್

"ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ...

ಪಶ್ಚಿಮ ಬಂಗಾಳ | ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಬಿಜೆಪಿ ನಾಯಕನ ಬಂಧನ

ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನನ್ನು...