ಬಿಜೆಪಿಗೆ ಮತ್ತೆ ರಾಜೀನಾಮೆ ನೀಡಿದ ಶೆಹಜಾದ್ ಪೂನಾವಾಲಾ: ವೈಯಕ್ತಿಕ, ಆರ್ಥಿಕ ಕಷ್ಟ ಉಲ್ಲೇಖ

Date:

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಸ್ಥಾನಕ್ಕೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಕೋರಿದ್ದಾರೆ.

- Advertisement -

ಈ ಹಿಂದೆ ಜುಲೈ 30ರಂದು ಅವರು ಮೊದಲ ಬಾರಿಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಪಕ್ಷದ ನಾಯಕತ್ವವು ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿ, ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿತ್ತು. ಇದೀಗ ಪೂನಾವಾಲಾ ಪಕ್ಷದಿಂದ ಹೊರನಡೆಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ತೀವ್ರವಾದ ತುರ್ತು ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳಿಂದಾಗಿ ತಾವು ರಾಜಕೀಯದಿಂದ ಹೊರಬಂದು ಖಾಸಗಿ ವಲಯಕ್ಕೆ ಮರಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನೂ ಓದಿ: ಬಿಜೆಪಿ ತೊರೆಯಲಿದ್ದಾರೆಯೇ ಶೆಹಜಾದ್ ಪೂನಾವಾಲಾ? ‘ಎಕ್ಸ್’ ಖಾತೆಯಲ್ಲಿ ಬದಲಾವಣೆ

ಎಕ್ಸ್ (X) ಪೋಸ್ಟ್‌ನಲ್ಲಿ ಶೆಹಜಾದ್ ಪೂನಾವಾಲಾ ಬರೆದುಕೊಂಡಿದ್ದೇನು?

ಈ ಸಂಬಂಧ ಎಕ್ಸ್‌ನಲ್ಲಿ ಶೆಹಜಾದ್ ಪೂನಾವಾಲಾ ಪೋಸ್ಟ್ ಒಂದರನ್ನು ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಿತಿನ್ ನಬಿನ್ ಸೇರಿದ್ದಂತೆ ಹಲವರನ್ನು ಟ್ಯಾಗ್ ಮಾಡಿದ್ದಾರೆ. “ಅತ್ಯಂತ ನಮ್ರತೆ, ಪ್ರೀತಿ ಮತ್ತು ಕೃತಜ್ಞತೆಯಿಂದ ನಾನು ಬಿಜೆಪಿ ಹಾಗೂ ನಿತಿನ್ ನಬಿನ್ ಅವರಿಗೆ ಮತ್ತೊಮ್ಮೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅದನ್ನು ಸ್ವೀಕರಿಸಬೇಕಾಗಿ ವಿನಂತಿಸಿದ್ದೇನೆ. ನನಗೆ ದೊರೆತ ಮಾರ್ಗದರ್ಶನ, ಪ್ರೀತಿ, ಗೌರವ ಮತ್ತು ವೇದಿಕೆಗೆ ನಾನು ಎಂದೆಂದಿಗೂ ಋಣಿ” ಎಂದು ಬರೆದುಕೊಂಡಿದ್ದಾರೆ.

“ನನ್ನ ಜುಲೈ 30ರ ಪತ್ರದ ಮುಂದುವರಿದ ಭಾಗವಾಗಿ ಇದನ್ನು ಪರಿಗಣಿಸಿ. ಜುಲೈನಲ್ಲಿ ತೀವ್ರ ಆರ್ಥಿಕ ಮತ್ತು ವೈಯಕ್ತಿಕ ಕಾರಣಗಳಿಂದಾಗಿ ನಾನು ರಾಜೀನಾಮೆ ನೀಡಿದ್ದಾಗ, ಪಕ್ಷವು ಅದನ್ನು ತಕ್ಷಣ ಸ್ವೀಕರಿಸದೇ ಮರುಪರಿಶೀಲಿಸಲು ಕೋರಿದ್ದು ನನಗೆ ಅತ್ಯಂತ ಭಾವುಕ ಕ್ಷಣವಾಗಿತ್ತು. ಆದರೆ ಸುದೀರ್ಘ ಚಿಂತನೆಯ ನಂತರ, ರಾಷ್ಟ್ರೀಯ ವಕ್ತಾರ ಹುದ್ದೆ ಮತ್ತು ಸಕ್ರಿಯ ಸದಸ್ಯತ್ವದಿಂದ ಬಿಡುಗಡೆ ಹೊಂದುವ ನನ್ನ ಅಂತಿಮ ನಿರ್ಧಾರಕ್ಕೆ ಬಂದಿದ್ದೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕರ ಮಾರ್ಗದರ್ಶನ, ಪ್ರೀತಿ, ಗೌರವ ಮತ್ತು ವೇದಿಕೆಗೆ ಚಿರಋಣಿಯಾಗಿದ್ದಾರೆ. ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿ, ನಿತಿನ್ ನಬಿನ್, ಅಮಿತ್ ಶಾ, ಬಿಎಲ್ ಸಂತೋಷ್, ಜೆಪಿ ನಡ್ಡಾ, ರಾಜನಾಥಸಿಂಗ್, ನಿತಿನ್ ಗಡ್ಕರಿ ಮತ್ತು ನಮ್ಮ ಎಲ್ಲಾ ಹಿರಿಯ ನಾಯಕರು ಮತ್ತು ಸಂಘ ಪರಿವಾರ ನನ್ನನ್ನು ನಂಬಿದ್ದಕ್ಕಾಗಿ ಧನ್ಯವಾದ” ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ನನ್ನ ಆರ್ಥಿಕ ಹಾಗೂ ವೈಯಕ್ತಿಕ ಪರಿಸ್ಥಿತಿಗಳಿಂದಾಗಿ ನಾನು ಖಾಸಗಿ ವಲಯಕ್ಕೆ ಮರಳುತ್ತಿದ್ದೇನೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಬಿಜೆಪಿಯ ಕಾರ್ಯಗಳಿಗೆ ನನ್ನ ಬೆಂಬಲ ಯಾವ ರೂಪದಲ್ಲಾದರೂ ಮುಂದುವರಿಯಲಿದೆ. ನಾನು ವ್ಯವಸ್ಥೆಯನ್ನು ತೊರೆಯುತ್ತಿದ್ದೇನೆ ಹೊರತು ವ್ಯಕ್ತಿ ಅಥವಾ ವಿಚಾರವನ್ನಲ್ಲ. ಭಾರತದಲ್ಲಾಗಲೀ ಅಥವಾ ಬೇರೆ ಯಾವುದೇ ಪಕ್ಷದಲ್ಲಾಗಲೀ ನನ್ನಂತಹ ಒಬ್ಬ ಯುವ, ಪಸ್ಮಾಂದ ಮುಸ್ಲಿಂ ಹಾಗೂ ರಾಜಕೀಯ ಹಿನ್ನೆಲೆಯಿಲ್ಲದ ವ್ಯಕ್ತಿಗೆ ಇಂತಹ ಅವಕಾಶ ಸಿಗಲು ಸಾಧ್ಯವಿರಲಿಲ್ಲ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...