ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ ಬಹುಮಾನ: ಶಿವಸೇನಾ ನಾಯಕ

Date:

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯಲ್ಲಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್‌ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಬಗ್ಗೆ ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗಾಗಿ ಅವರ ನಾಲಗೆ ಕತ್ತರಿಸುವಂತೆ ಸಿಎಂ ಏಕನಾಥ್ ಶಿಂಧೆ ಬಣದ ಶಾಸಕ ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ. ಮಹಾರಾಷ್ಟ್ರದಲ್ಲಿ ಶಿಂಧೆ ನೇತೃತ್ವದ ಸರ್ಕಾರದ ಪಾಲುದಾರನಾಗಿರುವ ಬಿಜೆಪಿ, ಈ ಹೇಳಿಕೆಯನ್ನು ಅನುಮೋದಿಸುವುದಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿದೇಶದಲ್ಲಿ ಇದ್ದಾಗ, ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ತಾವು ರದ್ದುಗೊಳಿಸಲು ಬಯಸಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಕಾಂಗ್ರೆಸ್‌ನ ನೈಜ ಮುಖವನ್ನು ಬಯಲುಗೊಳಿಸಿದ್ದಾರೆ” ಎಂದು ಸುದ್ದಿಗಾರರ ಜತೆ ಮಾತನಾಡುವ ವೇಳೆ ಸಂಜಯ್ ಗಾಯಕ್‌ವಾಡ್ ಟೀಕಿಸಿದ್ದಾರೆ.

“ಇತ್ತೀಚಿನ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಮೀಸಲಾತಿಯನ್ನು ಅಂತ್ಯಗೊಳಿಸುವ ಬಗ್ಗೆ ಮಾತನಾಡಿದ್ದರು. ಇದು ಮೀಸಲಾತಿಯನ್ನು ವಿರೋಧಿಸುವ ಅವರ ಅಂತರ್ಗತ ಮನಸ್ಥಿತಿಯನ್ನು ತೋರಿಸುತ್ತದೆ. ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸಿದವರಿಗೆ ನಾನು 11 ಲಕ್ಷ ರೂ ಬಹುಮಾನ ನೀಡುತ್ತೇನೆ” ಎಂದು ಗಾಯಕ್‌ವಾಡ್ ಘೋಷಿಸಿದ್ದಾರೆ. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹರಿಯಾಣ ಚುನಾವಣೆ | ನಾನೇ ಅತ್ಯಂತ ಹಿರಿಯ ಶಾಸಕ; ಬಿಜೆಪಿ ಗೆದ್ದರೆ ಸಿಎಂ ಹುದ್ದೆಗೆ ಹಕ್ಕು ಮಂಡನೆ: ಅನಿಲ್ ವಿಜ್

“ರಾಹುಲ್ ಗಾಂಧಿ ಅವರ ಹೇಳಿಕೆಗಳು ಜನರಿಗೆ ಮಾಡಿರುವ ಅತಿ ದೊಡ್ಡ ವಿಶ್ವಾಸಘಾತುಕತನವಾಗಿದೆ. ಮರಾಠರು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ. ಆದರೆ ಅದಕ್ಕೂ ಮುನ್ನವೇ ಮೀಸಲಾತಿ ಲಾಭವನ್ನು ಮುಗಿಸುವ ಬಗ್ಗೆ ಗಾಂಧಿ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಅಂತರ ಕಾಯ್ದುಕೊಂಡ ಬಿಜೆಪಿ
ಗಾಯಕ್‌ವಾಡ್ ಅವರ ಹೇಳಿಕೆಗಳಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. “ಗಾಯಕ್‌ವಾಡ್ ಅವರ ಹೇಳಿಕೆಯನ್ನು ನಾನು ಬೆಂಬಲಿಸುವುದಿಲ್ಲ ಅಥವಾ ಅನುಮೋದಿಸುವುದಿಲ್ಲ. ಆದರೆ, ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರು ಮೀಸಲಾತಿಯು ಅಭಿವೃದ್ಧಿಗೆ ತೊಡಕು ಉಂಟುಮಾಡುತ್ತದೆ ಎಂದು ವಿರೋಧ ವ್ಯಕ್ತಪಡಿಸಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ” ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಂಕುಲೆ ಹೇಳಿದ್ದಾರೆ.

ಕಾಂಗ್ರೆಸ್ ಆಕ್ರೋಶ
“ಸಮಾಜದಲ್ಲಿ ಮತ್ತು ರಾಜಕೀಯದಲ್ಲಿ ಬದುಕಲು ಸಂಜಯ್ ಗಾಯಕ್‌ವಾಡ್ ಅವರಿಗೆ ಯೋಗ್ಯತೆ ಇಲ್ಲ. ಗಾಯಕ್‌ವಾಡ್ ಅವರ ವಿರುದ್ಧ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರು ಶಿಕ್ಷಾರ್ಹ ನರಹತ್ಯೆ ಪ್ರಕರಣ ದಾಖಲಿಸುತ್ತಾರೆಯೇ ಎನ್ನುವುದನ್ನು ನೋಡಬೇಕು. ಇಂತಹ ಜನರು ರಾಜ್ಯ ರಾಜಕಾರಣವನ್ನು ಹಾಳು ಮಾಡಿದ್ದಾರೆ” ಎಂದು ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಕಿಡಿಕಾರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...