‘ಶಿವಸೇನೆ ಯುಟಿಬಿ’ಯ 6 ಸಂಸದರ ಪಕ್ಷಾಂತರಕ್ಕೆ‌ ಸ್ಪೀಕರ್ ಸಮ್ಮತಿ; ಟಿಎಂಸಿ 20 ಬಂಡಾಯಗಾರರಿಗೆ ಪ್ರತ್ಯೇಕ ಆಸನ!

Date:

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದೇಶದ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ವಿಪಕ್ಷಗಳಲ್ಲಿ ಆಘಾತ ಉಂಟುಮಾಡಿದೆ.

- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಬಣಕ್ಕೆ ಸೇರ್ಪಡೆಗೊಂಡಿದ್ದ ಉದ್ಧವ್ ಠಾಕ್ರೆ (ಯುಬಿಟಿ) ಬಣದ ಆರು ಸಂಸದರ ಪಕ್ಷ ಬದಲಾವಣೆಯನ್ನು ಸ್ಪೀಕರ್ ಓಂ ಬಿರ್ಲಾ ಔಪಚಾರಿಕವಾಗಿ ಅಂಗೀಕರಿಸಿದ್ದಾರೆ. ಈ ಕುರಿತು ಲೋಕಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದು, 18ನೇ ಲೋಕಸಭೆಯಲ್ಲಿ ಪಕ್ಷದ ಪರಿಷ್ಕೃತ ಸ್ಥಾನಗಳನ್ನು ನವೀಕರಿಸಲಾಗಿದೆ. ಈ ಮೂಲಕ ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಬಲ ಮತ್ತಷ್ಟು ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜೊತೆಗೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಂಡಾಯ ಎದ್ದಿರುವ 20 ಟಿಎಂಸಿ ಸಂಸದರಿಗೆ ಸಂಸತ್ತಿನಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲು ಸ್ಪೀಕರ್ ಓಂ ಬಿರ್ಲಾ ನಿರ್ದೇಶನ ನೀಡಿದ್ದಾರೆ.

ಟಿಎಂಸಿಯ ಹಿರಿಯ ನಾಯಕ ಸುದೀಪ್ ಬಂಡೋಪಾಧ್ಯಾಯ ನೇತೃತ್ವದ ಈ ಬಂಡಾಯ ಗುಂಪು, ತಾವು ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (ಎನ್‌ಸಿಪಿಐ) ಜೊತೆ ವಿಲೀನಗೊಳ್ಳುವುದಾಗಿ ಸ್ಪೀಕರ್ ಕಚೇರಿಗೆ ಮನವಿ ಸಲ್ಲಿಸಿತ್ತು. ಆದರೆ, ವಿಲೀನ ಪ್ರಕ್ರಿಯೆ ನಡೆಯದಿದ್ದರೂ, ಈ ಬಂಡಾಯ ಸಂಸದರಿಗೆ ಪ್ರತ್ಯೇಕ ಆಸನ ಹಂಚಿಕೆಗೆ ಸ್ಪೀಕರ್ ಸಮ್ಮತಿಸಿದ್ದಾರೆ.

ಬಿಜೆಪಿಯ ಆಮಿಷ, ಬೆದರಿಕೆಗಳಿಂದ ಈ ಪಕ್ಷಾಂತರ, ಬಂಡಾಯಗಳು ನಡೆಯುತ್ತಿವೆ ಎಂದು ವಿಪಕ್ಷಗಳು ಆರೋಪಿಸಿವೆ. ಈ ನಡುವೆ, ಜುಲೈ 20 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನಕ್ಕೂ ಮುನ್ನ ಸರ್ಕಾರ ಕರೆಯುವ ಸಾಂಪ್ರದಾಯಿಕ ಸರ್ವಪಕ್ಷ ನಾಯಕರ ಸಭೆಗೆ ಬಂಡಾಯ ನಾಯಕ ಸುದೀಪ್ ಬಂಡೋಪಾಧ್ಯಾಯ ಮತ್ತು ಎನ್‌ಸಿಪಿಐ ಮುಖ್ಯ ಸಚೇತಕ ಡಾ. ಕಾಕೋಲಿ ಘೋಷ್ ದಸ್ತಿದಾರ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...