ಶಾಕಿಂಗ್: 1,500 ಜನಸಂಖ್ಯೆಯ ಗ್ರಾಮದಲ್ಲಿ 3 ತಿಂಗಳಲ್ಲೇ 27,000 ಜನನಗಳು ದಾಖಲು! ಬೃಹತ್ ಸೈಬರ್ ವಂಚನೆ?

Date:

1,500 ಜನಸಂಖ್ಯೆ ಇರುವ ಗ್ರಾಮವೊಂದರಲ್ಲಿ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗಿನ ಮೂರು ತಿಂಗಳಲ್ಲಿ ಬರೋಬ್ಬರಿ 27,397 ಜನನಗಳಾಗಿವೆ (ಹೆರಿಗೆ) ಎಂದು ನಾಗರಿಕ ನೋಂದಣಿ ವ್ಯವಸ್ಥೆಯಲ್ಲಿ (ಸಿಆರ್‌ಎಸ್) ದಾಖಲಿಸಲಾಗಿದೆ. ಇದು, ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಮಾತ್ರವಲ್ಲದೆ, ಬೃಹತ್ ಸೈಬರ್ ವಂಚನೆ ಕುರಿತು ಎಚ್ಚರಿಕೆಯನ್ನೂ ನೀಡುತ್ತಿದೆ.

- Advertisement -

ಈ ಆಘಾತಕಾರಿ ಪ್ರಹಸನವು ಮಹಾರಾಷ್ಟ್ರದ ಯತ್ಮಲ್ ಜಿಲ್ಲೆಯ ಅರ್ನಿ ತಾಲೂಕಿನ ಶೆಂಡುರ್ಸಾನಿ ಗ್ರಾಮ ಪಂಚಾಯತಿಯ ದಾಖಲೆಗಳು ಕಂಡುಬಂದಿದೆ. ಕಳವಳಕಾರಿಯಾಗಿ, ಶೆಂಡುರ್ಸಾನಿ ಗ್ರಾಮ ಪಂಚಾಯತಿಯ ಸಿಆರ್‌ಎಸ್ ಐಡಿಯನ್ನು (MH18241RE) ಮುಂಬೈನಲ್ಲಿ ಆಪರೇಟ್ ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಇದೊಂದು ಸೈಬರ್ ಅಪರಾಧಿದ ಕೃತ್ಯವೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅಸಂಗತ ದತ್ತಾಂಶ ಬೆಳಕಿಗೆ ಬಂದ ಬಳಿಕ, ಯತ್ಮಲ್ ಜಿಲ್ಲಾ ಆರೋಗ್ಯ ಅಧಿಕಾರಿಗಳು ಯವತ್ಮಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗ್ರಾಮ ಪಂಚಾಯತಿಯ ಕಂಪ್ಯೂಟರ್ ಆಪರೇಟರ್‌ ಐಡಿಯನ್ನು ಯಾರೋ ದುರುಪಯೋಗ ಮಾಡಿಕೊಂಡಿದ್ದಾರೆ. ಈ ದಾಖಲೆಗಳಲ್ಲಿ ಕಂಡುಬರುವ ಹೆಸರುಗಳಲ್ಲಿ 99.99% ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಹಾಗೂ ಇತರ ಪ್ರದೇಶಗಳ ಜನರಿಗೆ ಸೇರಿವೆ. ಈ ಎಲ್ಲ ಜನನ ನೋಂದಣಿ ಮತ್ತು ನಮೂದುಗಳನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ತಮ್ಮದೇ ಸರ್ಕಾರವನ್ನು ಒತ್ತಾಯಿಸಿದೆ.

ಸರ್ಕಾರದ ನಿರ್ದೇಶನಗಳ ಪ್ರಕಾರ, ಅಕ್ರಮ ಜನನ ಮತ್ತು ಮರಣ ನೋಂದಣಿಗಳನ್ನು ಗುರುತಿಸಲು ಮತ್ತು ರದ್ದುಗೊಳಿಸಲು ಪರಿಶೀಲನಾ ಅಭಿಯಾನ ನಡೆಯುತ್ತಿದೆ. ಈ ಕಾರ್ಯದ ಸಮಯದಲ್ಲಿ, ಅರ್ನಿ ತಾಲೂಕು ಆರೋಗ್ಯ ಅಧಿಕಾರಿಗಳು CRS ಸಾಫ್ಟ್‌ವೇರ್‌ನಲ್ಲಿ ಸೆಪ್ಟೆಂಬರ್ ಮತ್ತು ನವೆಂಬರ್ 2025ರ ನಡುವೆ ದಾಖಲಾದ 27,397 ಜನನ ನಮೂದುಗಳು ಮತ್ತು ಏಳು ಮರಣ ನಮೂದುಗಳನ್ನು ಕಂಡುಹಿಡಿದಿದ್ದಾರೆ. ಇವುಗಳಲ್ಲಿ ಬಹುತೇಕ ಎಲ್ಲವೂ ಗ್ರಾಮದ ಹೊರಗಿನ ಅಂಕಿಅಂಶಗಳಾಗಿವೆ.

ಈ ಲೇಖನ ಓದಿದ್ದೀರಾ?: ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

ಜಿಲ್ಲಾ ಪರಿಷತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂದರ್ ಪಟ್ಕಿ ಅವರು ಪಂಚಾಯತ್ ಇಲಾಖೆಯ ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿದ್ದಾರೆ. ಸಮಿತಿ ತನಿಖೆ ನಡೆಸಿದ್ದು, ದಾಖಲಾಗಿರುವ ಒಟ್ಟು ಜನನ-ಮರಣ ದಾಖಲೆಗಳಲ್ಲಿ 27,397 ಜನನ ದಾಖಲೆಗಳು ಮತ್ತು ಏಳು ಮರಣ ದಾಖಲೆಗಳು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವುದಿಲ್ಲ. ಅವುಗಳನ್ನು ಅನುಮಾನಾಸ್ಪದವೆಂದು ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣವನ್ನು ನವದೆಹಲಿಯ ಭಾರತದ ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕಚೇರಿ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರದ ಗಮನಕ್ಕೆ ತರಲಾಗಿದೆ. ತನಿಖೆಯು ಸೈಬರ್ ವಂಚನೆಯ ಮೂಲಕ ನಮೂದುಗಳನ್ನು ಸೃಷ್ಟಿಸಲಾಗಿರುವ ಸಾಧ್ಯತೆಯನ್ನು ತೋರಿಸಿದೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ನಂದಕಿಶೋರ್ ಕಾಳೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...