ವಕೀಲರೊಬ್ಬರು ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಒಡಿಶಾದ ಭುವನೇಶ್ವರ ಬಳಿ ನಡೆದಿದೆ.
ಭುವನೇಶ್ವರದ ಮಂಚೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಾರ ಪ್ರದೇಶದಲ್ಲಿ ವಾಸಿಸುತ್ತಿದ್ದ ವಕೀಲ, ತಮ್ಮ ಮನೆಯ ಟೆರೇಸ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೋರೆನ್ಸಿಕ್ ತಂಡವು ಸ್ಥಳಕ್ಕೆ ಬಂದಿದೆ. ವಿವರವಾದ ತನಿಖೆ ನಡೆಯುತ್ತಿದೆ. ಘಟನೆಗೆ ಇತರ ಯಾರೂ ಕಾರಣರಲ್ಲ. ಅವರಿಗೆ ಪ್ರಚೋದನೆ ನೀಡಿದ ಆರೋಪಗಳೂ ಕಂಡುಬಂದಿಲ್ಲ ಎಂದು ಭುವನೇಶ್ವರ ಡಿಸಿಪಿ ಜಗಮೋಹನ್ ಮೀನಾ ವಿವರಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.