ಆಘಾತಕಾರಿ ಘಟನೆ | ಬೆಂಕಿ ಹಚ್ಚಿಕೊಂಡು ವಕೀಲ ಆತ್ಮಹತ್ಯೆ

Date:

ವಕೀಲರೊಬ್ಬರು ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಒಡಿಶಾದ ಭುವನೇಶ್ವರ ಬಳಿ ನಡೆದಿದೆ.

- Advertisement -

ಭುವನೇಶ್ವರದ ಮಂಚೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಂಡಾರ ಪ್ರದೇಶದಲ್ಲಿ ವಾಸಿಸುತ್ತಿದ್ದ ವಕೀಲ, ತಮ್ಮ ಮನೆಯ ಟೆರೇಸ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೋರೆನ್ಸಿಕ್ ತಂಡವು ಸ್ಥಳಕ್ಕೆ ಬಂದಿದೆ. ವಿವರವಾದ ತನಿಖೆ ನಡೆಯುತ್ತಿದೆ. ಘಟನೆಗೆ ಇತರ ಯಾರೂ ಕಾರಣರಲ್ಲ. ಅವರಿಗೆ ಪ್ರಚೋದನೆ ನೀಡಿದ ಆರೋಪಗಳೂ ಕಂಡುಬಂದಿಲ್ಲ ಎಂದು ಭುವನೇಶ್ವರ ಡಿಸಿಪಿ ಜಗಮೋಹನ್ ಮೀನಾ ವಿವರಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...