ಆಘಾತಕಾರಿ ಘಟನೆ | ತಂದೆಯನ್ನು ಕೊಂದು, ಡ್ರಮ್‌ಗೆ ತುಂಬಿಸಿಟ್ಟ ಮಗ

Date:

ಹದಿಹರೆಯದ ಯುವಕನೊಬ್ಬ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್‌ನಲ್ಲಿ ತಿಂಬಿಸಿಟ್ಟದ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಶಿಯಾನಾದಲ್ಲಿ ನಡೆದಿದೆ.

- Advertisement -

ನೀಟ್‌ಗಾಗಿ ತಯಾರಿ ನಡೆಸುತ್ತಿದ್ದ ಅಕ್ಷತ್ ಎಂಬಾತ ರೋಗ ವಿಜ್ಞಾನ ಪ್ರಯೋಗಾಲಯದ ಮಾಲೀಕನಾಗಿರುವ ತನ್ನ ತಂದೆ ಮನ್ವೇಂದ್ರ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅಗತ್ಯವಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಉತ್ತೀರ್ಣನಾಗುವಂತೆ ಒತ್ತಡ ಹೇರಿದ್ದಕ್ಕಾಗಿ ತಂದೆಯೊಂದಿಗೆ ಅಕ್ಷತ್ ವಾಗ್ವಾದ ನಡೆಸಿದ್ದಾನೆ. ಮಾತಿನ ಚಕಮಕಿಯ ನಡುವೆ ತನ್ನ ಸಹೋದರಿಯ ಎದುರೇ ತಂದೆಯನ್ನು ಅಕ್ಷತ್ ಗುಂಡಿಟ್ಟು ಕೊಂದಿದ್ದಾನೆ ಎಂದು ವರದಿಯಾಗಿದೆ.

ಕೊಲೆಗೈದ ಬಳಿಕ, ತಂದೆಯ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. ದೇಹದ ಭಾಗಗಳನ್ನು ಡ್ರಮ್‌ನಲ್ಲಿ ತುಂಬಿಸಿಟ್ಟಿದ್ದಾನೆ. ಕೆಲವ ಭಾಗಗಳನ್ನು ವಿಲೇವಾರಿ ಮಾಡಲು ಕಾರಿನಲ್ಲಿ ಕೊಂಡೊಯ್ದಿದ್ದಾನೆ. ತಲೆ ಮತ್ತು ಕೆಲವು ಭಾಗಗಳನ್ನು ಒಂದೆಡೆ ಎಸೆದಿದ್ದು, ಉಳಿದ ಭಾಗಗಳನ್ನು ಮತ್ತೊಂದೆಡೆ ವಿಲೇವಾರಿ ಮಾಡಲು ಹೋಗಿದ್ದಾನೆ. ಈ ವೇಳೆ, ಆತನನ್ನು ಪೊಲೀಸ್ ಗಸ್ತು ತಂಡ ಹಿಡಿದಿದೆ. ನಿರಂತರ ವಿಚಾರಣೆಯ ನಂತರ, ಅಕ್ಷತ್ ನಾನು ಎಸಗಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತದಲ್ಲಿ ಮಾವೋವಾದ ಅಳಿಯಿತೇ; ಕಮ್ಯೂನಿಸ್ಟ್ ವಿಚಾರಧಾರೆಗೆ ಸಂಘಪರಿವಾರ ಭಯಪಡುವುದೇಕೆ?

ಮನೆಯಲ್ಲಿ ಶೋಧ ನಡೆಸಿರುವ ಪೊಲೀಸರು ರೈಫಲ್ ಮತ್ತು ಬುಲೆಟ್‌ಗಳನ್ನು ವಶಕ್ಕೆ ಪಡೆದಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ಡ್ರಮ್‌ನಲ್ಲಿ ತುಂಬಿಸಿಟ್ಟಿದ್ದ ದೇಹದ ಕೆಲವು ಭಾಗಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ವಿಧಿವಿಜ್ಞಾನ ತಂಡಗಳು ಮನೆ ಮತ್ತು ಕಾರಿನಲ್ಲಿ ರಕ್ತದ ಕಲೆಗಳನ್ನು ಪರಿಶೀಲಿಸಿವೆ. ತಲೆ ಮತ್ತು ಕೆಲವು ಭಾಗಗಳು ಇನ್ನೂ ಪತ್ತೆಯಾಗಿಲ್ಲ. ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ತನ್ನ ಸಹೋದರಿಗೆ ಕೃತ್ಯದ ಕುರಿತು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನೆಂದು ಹೇಳಲಾಗಿದೆ.

ಆರೋಪಿ ಅಕ್ಷತ್ ತನ್ನ ತಂದೆ ನಡೆಸುತ್ತಿದ್ದ ಮದ್ಯದಂಗಡಿಯ ನಿರ್ವಹಣೆಯನ್ನು ನೋಡಿಕೊಳ್ಳುತ್ತಿದ್ದರು. ಅದಕ್ಕಾಗಿ, ತಿಂಗಳಿಗೆ 17,000 ರೂ. ವೇತನ ಪಡೆಯುತ್ತಿದ್ದರು. ಆದರೆ, ವೇತನ ಕಡಿಮೆಯೆಂದು ಆತ ಅತೃಪ್ತನಾಗಿದ್ದ. ಆತ 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದರಿಂದ, ಆತ NEET ಪಾಸು ಮಾಡಿ ವೈದ್ಯಕೀಯ ವೃತ್ತಿ ಪಡೆಯಬೇಕೆಂದು ಆತನ ತಂದೆ ಬಯಸಿದ್ದರು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...