ರಾಜಸ್ಥಾನದಲ್ಲಿ ಬೆಚ್ಚಿಬೀಳಿಸಿದ ಬಾಣಂತಿಯರ ಸರಣಿ ಸಾವು: 2 ತಿಂಗಳಲ್ಲಿ 18 ಮರಣ

Date:

ರಾಜಸ್ಥಾನದಲ್ಲಿ ಮೇ ತಿಂಗಳಿನಿಂದ ಈವರೆಗೆ ಹೆರಿಗೆಯ ಬಳಿಕ ಬರೋಬ್ಬರಿ 18 ಬಾಣಂತಿಯರು ಮೃತಪಟ್ಟಿದ್ದು, ಕಿಡ್ನಿ ವೈಫಲ್ಯದಿಂದಾಗಿ ಇತರ ಏಳು ಮಂದಿ ಡಯಾಲಿಸಿಸ್‌ಗೆ ಒಳಗಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸತತವಾಗಿ ನಡೆಯುತ್ತಿರುವ ಈ ಸಾವುಗಳು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಹಚ್ಚಲು ರಾಜ್ಯ ಸರ್ಕಾರವು ಸಮಗ್ರ ತನಿಖೆಗೆ ಆದೇಶಿಸಿದೆ.

- Advertisement -

ಜುಲೈ 5 ರಿಂದ 10 ರ ನಡುವೆ ಭಿಲ್ವಾರ ಮತ್ತು ಬಾಂಸ್ವಾರ ಜಿಲ್ಲೆಗಳಲ್ಲಿ ಒಂಬತ್ತು ಬಾಣಂತಿಯರು ಮೃತಪಟ್ಟಿದ್ದಾರೆ. ಅದರಲ್ಲೂ ಭಿಲ್ವಾರದ ಮಹಾತ್ಮ ಗಾಂಧಿ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಐವರು ಕೇವಲ ಆರು ದಿನಗಳ ಅಂತರದಲ್ಲಿ ಸಾವನ್ನಪ್ಪಿರುವುದು ಆತಂಕವನ್ನು ಇಮ್ಮಡಿಗೊಳಿಸಿದೆ. ಶಸ್ತ್ರಚಿಕಿತ್ಸೆಯ ನಂತರ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಯಿಂದಾಗಿ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ದಾಖಲೆಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದಕ್ಕೂ ಮುನ್ನ ಮೇ ತಿಂಗಳಲ್ಲಿ ಕೋಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಜೂನ್‌ನಲ್ಲಿ ಬಿಕಾನೇರ್‌ನಲ್ಲಿ ಸಿಸೇರಿಯನ್ ನಂತರ ಆರು ಮಹಿಳೆಯರಿಗೆ ಕಿಡ್ನಿ ವೈಫಲ್ಯ ಕಾಣಿಸಿಕೊಂಡಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಘಟನೆಗಳಿಗೆ ಸಂಬಂಧಿಸಿದ ಏಳು ಮಂದಿ ಮಹಿಳೆಯರು ಇನ್ನೂ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಕುಟುಂಬಗಳು ಆಸ್ಪತ್ರೆ ಆಡಳಿತ ಮತ್ತು ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿವೆ. ಭಿಲ್ವಾರ ಆಸ್ಪತ್ರೆಯಲ್ಲಿ ಪ್ರತಿದಿನ 30 ರಿಂದ 40 ಸಿಸೇರಿಯನ್ ಶಸ್ತ್ರಚಿಕಿತ್ಸೆಗಳು ನಡೆಯುತ್ತವೆ. ಆದರೆ, ಕೇವಲ 8 ಶಸ್ತ್ರಚಿಕಿತ್ಸಾ ಉಪಕರಣಗಳ ಸೆಟ್‌ಗಳಿವೆ. ಇವುಗಳನ್ನು ಮರುಬಳಕೆ ಮಾಡುವ ಮುನ್ನ ಕನಿಷ್ಠ 3 ಗಂಟೆಗಳ ಕಾಲ ಕ್ರಿಮಿನಾಶಕಗೊಳಿಸಬೇಕಾಗುತ್ತದೆ. ಒತ್ತಡದ ನಡುವೆ ಶಸ್ತ್ರಚಿಕಿತ್ಸೆಗಳು ನಡೆಯುತ್ತಿರುವುದರಿಂದ ಸೋಂಕು ಹರಡುವ ಭೀತಿ ಎದುರಾಗಿದೆ.

ಶಸ್ತ್ರಚಿಕಿತ್ಸಾ ಕೊಠಡಿಯೊಂದರ ಮಾದರಿ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂಬ ಆರೋಪವನ್ನು ಆಸ್ಪತ್ರೆಯ ಅಧೀಕ್ಷಕ ಡಾ. ಅರುಣ್ ಗೌರ್ ತಳ್ಳಿಹಾಕಿದ್ದಾರೆ. ಗುಣಮಟ್ಟದ ಕೊರತೆ ಕಂಡುಬಂದ ಶಸ್ತ್ರಚಿಕಿತ್ಸಾ ಕೊಠಡಿಯನ್ನು ಮೂರು ದಿನಗಳ ಕಾಲ ಮುಚ್ಚಿ ಸಂಪೂರ್ಣವಾಗಿ ಕ್ರಿಮಿನಾಶಕಗೊಳಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಭಿಲ್ವಾರ ಜಿಲ್ಲಾಧಿಕಾರಿ ಜಸ್ಮೀತ್ ಸಿಂಗ್ ಸಂಧು ಅವರು ಸಹ ಪ್ರತಿಕ್ರಿಯಿಸಿದ್ದು, ಬಾಣಂತಿಯರ ಸಾವುಗಳಿಗೂ ಆಸ್ಪತ್ರೆಯ ಸೋಂಕಿಗೂ ಯಾವುದೇ ಸಂಬಂಧವಿರುವ ಬಗ್ಗೆ ಇದುವರೆಗೆ ಪುರಾವೆಗಳಿಲ್ಲ, ವಿವಿಧ ವೈದ್ಯಕೀಯ ತೊಡಕುಗಳಿಂದ ಸಾವು ಸಂಭವಿಸಿದೆ ಎಂದು ಹೇಳಿದ್ದಾರೆ.

ಈ ವಿದ್ಯಮಾನವು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿದ್ದು, ಭಜನ್ ಲಾಲ್ ಶರ್ಮಾ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ‘ರಾಜ್ಯದಲ್ಲಿ ಬಾಣಂತಿಯರ ಸಾವು ಹೆಚ್ಚುತ್ತಿರುವುದು ಭಯಾನಕ ಮತ್ತು ಆಘಾತಕಾರಿ. ಕೇವಲ ಎರಡು ತಿಂಗಳ ಅವಧಿಯಲ್ಲಿ 18 ಸಾವುಗಳು ಸಂಭವಿಸಿರುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ವೈಫಲ್ಯವನ್ನು ಎತ್ತಿತೋರಿಸುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...